ಮಡಿಕೇರಿ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆ/ ಕಾಲೇಜುಗಳಿಗೆ 2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರು/ ಉಪನ್ಯಾಸಕರ ಹುದ್ದೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅದರಂತೆ ಅರ್ಹ ಅಭ್ಯರ್ಥಿಗಳು ಜೂನ್ 03 ರೊಳಗೆ ಸೂಕ್ತ ದಾಖಲೆಗಳೊಂದಿಗೆ ವಸತಿ ಶಾಲಾ-ಕಾಲೇಜುಗಳಲ್ಲಿ ಅರ್ಜಿ ಪಡೆಯಬಹುದಾಗಿದೆ.
ಅತಿಥಿ ಶಿಕ್ಷಕರು/ ಉಪನ್ಯಾಸಕರನ್ನು ಆಯಾಯ ಹುದ್ದೆಗೆ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ ಹಾಗೂ ಬೋಧನಾ ಕೌಶಲ್ಯ, ಸೇವಾ ಅನುಭವ, ಆಂಗ್ಲ ಭಾಷಾ ಸಂವಹನ ಕೌಶಲ್ಯತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುವುದು.
ಅತಿಥಿ ಶಿಕ್ಷಕರ ಹುದ್ದೆಗೆ ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳು ಕಡ್ಡಾಯವಾಗಿ ಟಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವವರಿಗೆ ಮೊದಲನೆ ಆದ್ಯತೆ. ಒಂದು ವೇಳೆ ಅಂತಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಮೆರಿಟ್ ಆಧಾರದ ಮೇಲೆ ಪರಿಗಣಿಸಲಾಗುವುದು.
ನೇರ ನೇಮಕಾತಿ ಮೂಲಕ ಖಾಯಂ ಶಿಕ್ಷಕ/ ಉಪನ್ಯಾಸಕರು ಅಥವಾ ವರ್ಗಾವಣೆ/ ನಿಯೋಜನೆ ಆದೇಶದ ಮೇರೆಗೆ ಕರ್ತವ್ಯಕ್ಕೆ ಹಾಜರಾದಲ್ಲಿ ಅತಿಥಿ ಶಿಕ್ಷಕರು/ ಉಪನ್ಯಾಸಕರನ್ನು ತಕ್ಷಣವೇ ಬಿಡುಗಡೆಗೊಳಿಸಲಾಗುವುದು.
ಅರ್ಜಿಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜು, ಬಸವನಹಳ್ಳಿ, ಕುಶಾಲನಗರ ತಾಲ್ಲೂಕು. ದೂ:9845659909, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೂಡಿಗೆ, ಕುಶಾಲನಗರ ತಾಲ್ಲೂಕು. ದೂ:9741958012, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಅಲೂರು ಸಿದ್ದಾಪುರ, ಸೋಮವಾರಪೇಟೆ ತಾಲ್ಲೂಕು. ದೂ.9901267635, ಡಾ|| ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ನಾಪೊಕ್ಲು, ಮಡಿಕೇರಿ ತಾಲ್ಲೂಕು. ದೂ:9686597448, ಡಾ|| ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ತೊಳೂರು ಶೆಟ್ಟಳ್ಳಿ, ಸೋಮವಾರಪೇಟೆ ತಾಲ್ಲೂಕು. ದೂ. 9945707234, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ, ಭಾಗಮಂಡಲ, ಮಡಿಕೇರಿ ತಾಲ್ಲೂಕು. ದೂ:9611307646, ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು, ಗರಂಗದೂರು, ಸೋಮವಾರಪೇಟೆ ತಾಲ್ಲೂಕು. ದೂ.8105657451, ಮೊರಾರ್ಜಿ ದೇಸಾಯಿ ವಸತಿ ಶಾಲೆ, ತಿತಿಮತಿ, ವಿರಾಜಪೇಟೆ ತಾಲ್ಲೂಕು. ದೂ.7892795624, ವಸತಿ ಶಾಲೆ, ಹುದಿಕೇರಿ, ಪೊನ್ನಂಪೇಟೆ ತಾಲ್ಲೂಕು. ದೂ. 8861572215 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್
- ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
- ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
- ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
- ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
- ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಹಮ್ಮದ್ ಯಾಸೀನ್ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ


