Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಬಿಗ್ ನ್ಯೂಸ್»ಆದಿವಾಸಿ ಕುಟುಂಬಗಳಿಗೆ ಆಧಾರ್ ಕಾರ್ಡ್ ತಲುಪಿಸಿ: ಡಾ.ಎನ್.ವಿ.ಪ್ರಸಾದ್
    ಬಿಗ್ ನ್ಯೂಸ್

    ಆದಿವಾಸಿ ಕುಟುಂಬಗಳಿಗೆ ಆಧಾರ್ ಕಾರ್ಡ್ ತಲುಪಿಸಿ: ಡಾ.ಎನ್.ವಿ.ಪ್ರಸಾದ್

    ಮಡಿಕೇರಿ : ಜಿಲ್ಲೆಯಲ್ಲಿ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ, ಸಮಾಜ ಕಲ್ಯಾಣ, ಐಟಿಡಿಪಿ, ಕೌಶಲ್ಯಾಭಿವೃದ್ಧಿ ಹೀಗೆ ವಿವಿಧ ಇಲಾಖೆಗಳಿಗೆ ನಿವೇಶನ ಒದಗಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.
    ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನಿವೇಶನ ಹಂಚಿಕೆ ಬಗ್ಗೆ ಮಾಹಿತಿ ನೀಡಿದರು.
    ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕಾವೇರಿ ನದಿ ಪಾತ್ರದಲ್ಲಿ ಪರಿಸರ ಸ್ವಚ್ಚತಾ ಕಾರ್ಯ ಕೈಗೊಳ್ಳುವ ಸಂಬಂಧ ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್ ಅವರು ಮಾಹಿತಿ ನೀಡಿದರು.
    ಬಸವ, ಅಂಬೇಡ್ಕರ್ ಹಾಗೂ ಇಂದಿರಾ ವಸತಿ ಯೋಜನೆ ಪ್ರಗತಿ ಸಾಧಿಸುವಂತಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ನಿರ್ದೇಶನ ನೀಡಿದರು.
    ಕುಡಿಯ ಸೇರಿದಂತೆ ಲೈನ್‍ಮನೆಗಳಲ್ಲಿ ವಾಸಿಸುವ ಎಲ್ಲಾ ಆದಿವಾಸಿ ಕುಟುಂಬಗಳಿಗೆ ಆಧಾರ್ ಕಾರ್ಡ್ ಮಾಡಿಸುವಂತಾಗಬೇಕು. ಜೊತೆಗೆ ಸರ್ಕಾರದ ಸೌಲಭ್ಯಗಳು ಆದಿವಾಸಿ ಜನರಿಗೆ ತಲುಪುವಂತಾಗಬೇಕು ಎಂದು ಡಾ.ಎನ್.ವಿ.ಪ್ರಸಾದ್ ಅವರು ಸೂಚಿಸಿದರು.
    ಗಿರಿಜನ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಅವರ ಜೊತೆ ಚರ್ಚಿಸಿ ಆಧಾರ್ ಕಾರ್ಡ್ ಮಾಡಿಸುವ ಸಂಬಂಧ ತುರ್ತು ಕ್ರಮವಹಿಸುವಂತೆ ಐಟಿಡಿಪಿ ಇಲಾಖೆ ಅಧಿಕಾರಿಗೆ ನಿರ್ದೇಶನ ನೀಡಿದರು.
    ರಸ್ತೆ ಸುರಕ್ಷತಾ ಸಮಿತಿ ಸಭೆಯನ್ನು ಪ್ರತೀ ತಿಂಗಳು ನಡೆಸುವಂತೆ ಜಿಲ್ಲಾಧ ಉಸ್ತುವಾರಿ ಕಾರ್ಯದರ್ಶಿ ಅವರು ಸಲಹೆ ಮಾಡಿದರು.
    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 2, ಸಮುದಾಯ ಆರೋಗ್ಯ ಕೇಂದ್ರದಲ್ಲಿ 16, ಜನರಲ್ ವಿಭಾಗದಲ್ಲಿ 12 ವೈದ್ಯರ ಹುದ್ದೆಗಳು ಖಾಲಿ ಇದ್ದು, ಯಾರೂ ಮುಂದೆ ಬರುತ್ತಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿದರು.
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಟರಾಜು ಅವರು ಜಿಲ್ಲೆಯಲ್ಲಿ 1,16,772 ಮಂದಿ ಗೃಹಲಕ್ಷ್ಮಿ ಯೋಜನೆಯಡಿ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ.
    ಶನಿವಾರಸಂತೆ ಬಸ್ ನಿಲ್ದಾಣ ಕಾಮಗಾರಿ ಪ್ರಗತಿ ಹಾಗೂ ಕುಶಾಲನಗರದಲ್ಲಿ ಬಸ್ ಡಿಪೋ ಕಾಮಗಾರಿ ಪ್ರಗತಿ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರು ಮಾಹಿತಿ ಪಡೆದರು.
    ಈ ಸಂದರ್ಭದಲ್ಲಿ ಮಾತನಾಡಿದ ಮಡಿಕೇರಿ ಕೆಎಸ್‍ಆರ್‍ಟಿಸಿ ಘಟಕದ ವ್ಯವಸ್ಥಾಪಕರಾದ ಮೆಹಬೂಬ್ ಅಲಿ ಅವರು ಸೆಪ್ಟೆಂಬರ್ ಅಂತ್ಯದೊಳಗೆ ಈ ಎರಡು ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದು ಮಾಹಿತಿ ನೀಡಿದರು. ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ.ಅಕ್ಕಿಯನ್ನು ವಿತರಿಸಲಾಗುತ್ತಿದೆ ಎಂದು ಕುಮುದಾ ಶರತ್ ಅವರು ತಿಳಿಸಿದರು.
    ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ಅವರು ಹಲವು ಮಾಹಿತಿ ನೀಡಿದರು.
    ಜಿ.ಪಂ.ಉಪಕಾರ್ಯದರ್ಶಿ ಅಬ್ದುಲ್ ನಬಿ, ಲೋಕೋಪಯೋಗಿ ಇಲಾಖೆಯ ಇಇ ಇಬ್ರಾಹಿಂ, ಪಂಚಾಯತ್ ರಾಜ್ ಎಂಜಿನಿಯರ್ ಇಇ ನಾಯಕ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಪ್ಪ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಪಶುಪಾಲನೆ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಸಚಿನ್, ತಹಶೀಲ್ದಾರ್ ಪ್ರವೀಣ್ ಕುಮಾರ್, ಕಿರಣ್ ಗೌರಯ್ಯ, ಕೃಷ್ಣಮೂರ್ತಿ, ಮೋಹನ್ ಕುಮಾರ್, ಅನಂತ ಶಂಕರ್, ತಾ.ಪಂ.ಇಒಗಳಾದ ಪರಮೇಶ್ವರ, ಅಪ್ಪಣ್ಣ, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ ನಾಯಕ್, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕೃಷ್ಣಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಇತರರು ಹಲವು ಮಾಹಿತಿ ನೀಡಿದರು.

    Previous Article‘ನೈರ್ಮಲ್ಯ ನಿರ್ವಹಣೆ ದಿನಾರಣೆ’
    Next Article ರೆಡ್ ಅಲರ್ಟ್ ಘೋಷಣೆ

    Related Posts

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.