ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ವೈದ್ಯಕೀಯ ವಿಜ್ಞಾನಗಳ ಬೋಧಕ ಆಸ್ಪತ್ರೆ, ಸ್ನೇಹ ಕ್ಲೀನಿಕ್ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲ್ಲೂಕಿನ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಇಂದು “ಋತು ಸ್ರಾವ ನೈರ್ಮಲ್ಯ ನಿರ್ವಹಣೆ ದಿನ” ಆಚರಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾದ ಸ್ನೇಹ ಕ್ಲಿನಿಕ್ನ ಆಪ್ತ ಸಮಲೋಚಕರಾದ ಪ್ರಮೀಳ ಅವರು ಮಕ್ಕಳಿಗೆ ಋತು ನೈರ್ಮಲ್ಯದ ಕುರಿತು ಮಾಹಿತಿ ನೀಡಿದರು.
ಋತು ಸ್ರಾವದ ಸಮಯದಲ್ಲಿ ಮಕ್ಕಳ ದೇಹದಲ್ಲಿ ಬದಲಾವಣೆಗಳು ಉಂಟಾಗುತ್ತವೆ. ಪ್ರತಿ ಹೆಣ್ಣು ಮಗುವು ಹುಟ್ಟುವಾಗಲೇ ಅಂಡಾಶಯದಲ್ಲಿ ನಿರ್ದಿಷ್ಟ ಸಂಖ್ಯೆಯ ಮೂಲ ಜೀವ ಕೋಶಗಳನ್ನು ಹೊಂದಿರುತ್ತದೆ. ಸಾಮಾನ್ಯವಾಗಿ ಮೊದಲ ಋತುಕಾಲವು ಹನ್ನೆರಡು ಮತ್ತು ಹದಿನೈದು ವಯಸ್ಸಿನ ನಡುವೆ ಆರಂಭವಾಗುತ್ತದೆ ಎಂದರು.
ನರವ್ಯೂಹದ ಮತ್ತು ಭಾವನಾತ್ಮಕ ಬದಲಾವಣೆಗಳು, ಹೃದಯ ಸಂಬಂಧಿ ಬದಲಾವಣೆಗಳು, ಮಕ್ಕಳು ಈ ಸಮಯದಲ್ಲಿ ಸ್ವಚ್ಚತೆಯಿಂದ ಇರಬೇಕು. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಋತು ಸ್ರಾವದ ಸಮಯದಲ್ಲಿ ಸಮಸ್ಯೆಗಳಿದ್ದಲ್ಲಿ ಗೊಂದಲಗಳಿದ್ದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಸ್ನೇಹ ಕ್ಲಿನಿಕ್ ಇದ್ದು ಸೂಕ್ತ ವೈದ್ಯಾಧಿಕಾರಿಗಳು, ಆಪ್ತ ಸಮಾಲೋಚಕರನ್ನು ಸಂಪರ್ಕಿಸಬಹುದು. ನಂತರ ಮಕ್ಕಳಿಗೆ ಸಾನಿಟರಿ ಪ್ಯಾಡನ್ನು ವಿತರಿಸಲಾಯಿತು. ಮಹಿಳಾ ಸಬಲೀಕರಣ ಘಟಕದ ಸಿಬ್ಬಂದಿಗಳು ಮತ್ತು ಸಖಿ ಒನ್ ಸ್ಟಾಪ್ ಸೆಂಟರ್ನ ಆಡಳಿತದಿಕಾರಿ, ಪೆÇೀಷಣ್ ಅಭಿಯಾನದ ಸಂಯೋಜಕರು, ಬಾಲಭವನದ ಸಿಬ್ಬಂದಿಗಳು ಹಾಜರಿದ್ದರು.
ಬ್ರೇಕಿಂಗ್ ನ್ಯೂಸ್
- ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
- ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
- ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
- ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
- ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
- ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
- ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
- ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ


