ಮಡಿಕೇರಿ : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವಾ), ಸಿದ್ದಾರ್ಥ ನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆಟ್ರ್ಸ್(ಬಿವಿಎ) (ನಾಲ್ಕು ವರ್ಷದ ಎಂಟು ಸೆಮಿಸ್ಟರ್ಗಳ ಎಸ್ಇಪಿ ಪದ್ಧತಿ) ದೃಶ್ಯಕಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿವಿಎ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್(ಯುಯುಸಿಎಂಎಸ್) ಮೂಲಕ ಜೂನ್, 10 ರವರೆಗೆ ಅರ್ಜಿ ಸಲ್ಲಿಸಬಹುದು. ಈ ಪದವಿಯಲ್ಲಿ 3ನೇ ಸೆಮಿಸ್ಟರ್ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ(ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸದ htts://uucms.karnataka.gov.in ಅಥವಾ hಣಣಠಿs://https://www.cavamysore.karnataka.gov.in ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗೆ ಈ ಕಾರ್ಯಾಲಯದ ಸಹಾಯವಾಣಿಗೆ ಕಚೇರಿ ಸಮಯದಲ್ಲಿ 0821-2438931 ನ್ನು ಸಂಪರ್ಕಿಸಬಹುದು ಎಂದು ಮೈಸೂರು ಕಾವಾ, ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ಅವರು ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್
- ಬರ ಘೋಷಣೆ ಬಳಿಕವೂ ಖಾಲಿ ಚೆಂಬಿನ ಪ್ರತಿಭಟನೆ: ಸರ್ಕಾರದ ವಿರುದ್ಧ ಬಿಜೆಪಿಗರ ಆಕ್ರೋಶ
- ಜಪಾನ್ನಲ್ಲಿ ಅರುಣ್ ಮಚಯ್ಯಗೆ ಮತ್ತೊಂದು ಅಂತರರಾಷ್ಟ್ರೀಯ ಗೌರವ
- ಮಡಿಕೇರಿ–ಕುಶಾಲನಗರವನ್ನೂ ಬರಪೀಡಿತ ತಾಲೂಕು ಪಟ್ಟಿಗೆ ಸೇರಿಸಿ: ಎಡಿಕೇರಿ ಪ್ರಸನ್ನ ಗೌಡ.
- ಬೈಕ್ ತಪ್ಪಿಸಲು ಹೋಗಿ ಪಲ್ಟಿಯಾದ ಶಾಲಾ ಬಸ್: ಮಕ್ಕಳಿಗೆ ಗಾಯ
- ಸೆ.26ರಂದು 1ರಿಂದ 9ನೇ ತರಗತಿವರೆಗೆ ವಿರಾಜಪೇಟೆ ಶಾಲೆಗಳಿಗೆ ರಜೆ
- ಮಡಿಕೇರಿಯಲ್ಲಿ ಲೋಕಾಯುಕ್ತರ ಭರ್ಜರಿ ದಾಳಿ: ನಗರಸಭೆ ಆಯುಕ್ತ ರಮೇಶ್ ಮನೆ ಸೇರಿ 8 ಕಡೆ ಶೋಧ
- ಗೌರವದ ಬದುಕಿಗಾಗಿ ಸ್ಟೇರಿಂಗ್ ಹಿಡಿದ ಮೃದು ಕೈಗಳಿಗೆ ಹೇಳೋಣ ಒಂದು ಸಲಾಂ
- ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ


