ಮಡಿಕೇರಿ : ಜನವಿರೋಧಿ ಆಡಳಿತ ನಡೆಸುತ್ತಿರುವ ರಾಜ್ಯದ ಸಿದ್ದರಾಮಯ್ಯ ಸರ್ಕಾರ ಬಡವರ ಆರೋಗ್ಯದ ಮೇಲೂ ಸವಾರಿ ಮಾಡುತ್ತಿದ್ದು, ದೇಶದ ಜನಪ್ರಿಯ ಜನೌಷಧಿ ಕೇಂದ್ರಗಳನ್ನು ರಾಜ್ಯದಲ್ಲಿ ಮುಚ್ಚುವಂತೆ ಆದೇಶ ಹೊರಡಿಸಿರುವುದು ಸಿದ್ದರಾಮಯ್ಯನವರ ದುರಾಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿ.ಕೆ ಲೋಕೇಶ್ ಆರೋಪಿಸಿದ್ದಾರೆ.
ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಎದುರು ಜಿಲ್ಲಾ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ಸಂದರ್ಭ ಮಾತನಾಡಿದ ಅವರು, ರಾಜ್ಯದ ರಸ್ತೆಗಳೆಲ್ಲವೂ ಹದಗೆಟ್ಟಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಹಳ್ಳ ಹಿಡಿದಿದೆ. ಈ ಸಂದರ್ಭ ಸಾಧನೆ ಸಮಾವೇಶ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಿಲುವಿಗೆ ಧಿಕ್ಕಾರವಿದೆ ಎಂದು ಕಿಡಿಕಾರಿದರು.
ಜನ ಸಾಮಾನ್ಯರ ಮೇಲೆ ಪದೇ ಪದೇ ಸವಾರಿ ಮಾಡುತ್ತಿರುವ ರಾಜ್ಯ ಸರ್ಕಾರ ಸೇಡಿನ ರಾಜಕೀಯ ಮಾಡುವ ದುರುದ್ದೇಶದಿಂದಾಗಿ, ಬಡವರಿಗೆ ಕಡಿಮೆ ದರಕ್ಕೆ ದೊರೆಯುತ್ತಿರುವ ಜನಔಷಧಿ ಕೇಂದ್ರ ಮುಚ್ಚುವ ನಿರ್ಧಾರಕ್ಕೆ ಬಂದಿದೆ. ರಾಜ್ಯದ ಪ್ರತಿಯೊಬ್ಬರು ಕೂಡಾ ಇದರ ವಿರುದ್ಧ ಧ್ವನಿ ಎತ್ತುತಿದ್ದಾರೆ. ಹಾಗಾಗಿ ಕೂಡಲೇ ಜನಔಷದಿ ಕೇಂದ್ರಗಳನ್ನು ಮುಚ್ಚುವಂತೆ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.
ಈ ಸಂದರ್ಭ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸತೀಶ್, ಸಿದ್ದಾಪುರ ಶಕ್ತಿಕೇಂದ್ರದ ಪ್ರಮುಖರಾದ ರೂಪೇಶ್, ದಿಜಿತ್, ಅನಿಲ್ ಶೆಟ್ಟಿ, ಹರಿದಾಸ್, ರೀನಾ ತುಳಸಿ ಮತ್ತು ಇತರರಿದ್ದರು.
ಬ್ರೇಕಿಂಗ್ ನ್ಯೂಸ್
- ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
- ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
- ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ
- ಕುಶಾಲನಗರದಲ್ಲಿ 84ನೇ ಇಎಂಇ ಕಾರ್ಪ್ಸ್ ಡೇ ಸಂಭ್ರಮ
- ಭಾಗಮಂಡಲ, ತಲಕಾವೇರಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾನಂಡ ಪ್ರಥ್ಯು ಆಯ್ಕೆ
- ₹48 ಲಕ್ಷದ ರಸ್ತೆ ನಿರ್ಮಾಣ, ಮಳೆ ನೀರಿಗೆ ಮಾತ್ರ ದಾರಿಯಿಲ್ಲ!
- ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
- ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ


