ಮಡಿಕೇರಿ : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ರಾಜ್ಯವಲಯ ಯೋಜನಾ ಕಾರ್ಯಕ್ರಮದಡಿ ಮೀನು ಹಿಡಿಯುವ ಸಲಕರಣೆ ಕಿಟ್ಟುಗಳನ್ನು ಉಚಿತವಾಗಿ ವಿತರಿಸಲು ಮತ್ತು ವಿವಿಧ ಯೋಜನಾ ಕಾರ್ಯಕ್ರಮಗಳಡಿ ಸೌಲಭ್ಯಗಳನ್ನು ಪಡೆಯಲು ಅರ್ಹ ಮೀನುಗಾರರಿಗೆ, ಮೀನು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರುಗಳನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Exit mobile version