
ಅನಾರೋಗ್ಯದಿಂದ ಬಳಲುತ್ತಿದ ವ್ಯಕ್ತಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಹಳ್ಳಿಗಟ್ಟು ಗ್ರಾಮದ ಪ್ರಕೃತಿ ನಗರದಲ್ಲಿ ಇಂದು ಮುಂಜಾನೆ 2.30 ರಲ್ಲಿ ನಡೆದಿದೆ. ಇಲ್ಲಿನ ತೂಚಮಕೇರಿ ಗ್ರಾಮದ ಪೆಮ್ಮಂಡ ಕಾಶಿ 78 (ವರ್ಷ) ಎಂಬುವವರು ಇಂದು ಡೆತ್ ನೋಟ್ ಬರೆದು ತಮ್ಮ ಮನೆಯ ಮುಂಭಾಗದಲ್ಲಿರುವ ಗೋಡೌನ್ನ ನಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಗಿದ್ದಾರೆ.ಅನಾರೋಗ್ಯದಿಂದ ಬಳಲುತ್ತಿದ ಕಾರಣ ಎರಡು ವರ್ಷದ ಹಿಂದೆಯೇ ಆತ್ಮಹತ್ಯೆ ಮಾಡಲು ತೆರೆದ ಬಾವಿಗೆ ಹಾರಿ ಪ್ರಯತ್ನ ಪಟ್ಟಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಬಳಿಕ ಮೃತದೇಹವನ್ನು ಗೋಣಿಕೊಪ್ಪ ಆಸ್ಪತ್ರೆಗೆ ರವಾನಿಸಲಾಗಿದೆ.

