ಮಡಿಕೇರಿ : ಪ್ರಸಕ್ತ (2025-26) ಸಾಲಿಗೆ ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ. ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1.00 ಲಕ್ಷ ಆಗಿರುತ್ತದೆ.
ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ SATS ID ಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ https://shp.karnataka.gov.in/bcwd ಅನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್, 16 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಮಡಿಕೇರಿ ದೂ.ಸಂ.08272-295628, ಮಡಿಕೇರಿ ತಾಲ್ಲೂಕು ಕಚೇರಿ ಮೊ.ಸಂಖ್ಯೆ. 8762476790, ವಿರಾಜಪೇಟೆ ತಾಲ್ಲೂಕು ಕಚೇರಿ ಮೊ.ಸಂಖ್ಯೆ. 9448205919, ಸೋಮವಾರಪೇಟೆ ತಾಲ್ಲೂಕು ಕಚೇರಿ ಮೊ.ಸಂಖ್ಯೆ 9481772143 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

