ಮಡಿಕೇರಿ : ಪ್ರಸಕ್ತ (2025-26) ಸಾಲಿಗೆ ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ. ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1.00 ಲಕ್ಷ ಆಗಿರುತ್ತದೆ.

ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ SATS ID ಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ https://shp.karnataka.gov.in/bcwd ಅನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್, 16 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಮಡಿಕೇರಿ ದೂ.ಸಂ.08272-295628, ಮಡಿಕೇರಿ ತಾಲ್ಲೂಕು ಕಚೇರಿ ಮೊ.ಸಂಖ್ಯೆ. 8762476790, ವಿರಾಜಪೇಟೆ ತಾಲ್ಲೂಕು ಕಚೇರಿ ಮೊ.ಸಂಖ್ಯೆ. 9448205919, ಸೋಮವಾರಪೇಟೆ ತಾಲ್ಲೂಕು ಕಚೇರಿ ಮೊ.ಸಂಖ್ಯೆ 9481772143 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

Exit mobile version