ಕಳಪೆ ತಡೆಗೋಡೆ ವೀಕ್ಷಿಸಿದ ಶಾಸಕ ಪೊನ್ನಣ್ಣ: ತನಿಕೆಗೆ ಆದೇಶ
ವಿರಾಜಪೇಟೆಯ ಅಂಬೇಡ್ಕರ್ ಭವನ ಆವರಣಕ್ಕೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಭೇಟಿ ಮಾಡಿ ಪರಿಶೀಲಿಸಿದರು.
ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಅಂಬೇಡ್ಕರ್ ಭವನದ ಬಳಿಯಲ್ಲೇ ಇರುವ ತಡೆಗೋಡೆಯು ಕುಸಿದು ಬಿದ್ದಿತ್ತು.
ಈ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಅಧಿಕಾರಿಗಳನ್ನು ಕರೆಯಿಸಿ ಈ ಕಾಮಗಾರಿಯ ಬಗ್ಗೆ ವಿವರಣೆಯನ್ನು ಕೇಳಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ಮಾಹಿತಿ ದೊರಕದಿದ್ದರಿಂದ ಈ ಕಾಮಗಾರಿ ಬಗ್ಗೆ ತನಿಖೆಗೆ ಆದೇಶಿಸಿದರಲ್ಲದೆ, ಈ ತಡೆಗೋಡೆ ಕಾಮಗಾರಿಯ ಸಂಪೂರ್ಣ ವಿವರದ ವರದಿಯನ್ನು ಕೂಡಲೇ ತನಗೆ ನೀಡಬೇಕೆಂದು ಸೂಚಿಸಿದ ಮಾನ್ಯ ಶಾಸಕರು, ಇದರ ದುರಸ್ತಿ ಕಾರ್ಯವನ್ನು ಗುತ್ತಿಗೆದಾರ ಕೂಡಲೇ ಮುಗಿಸಿ ತನಗೆ ತಿಳಿಸಬೇಕೆಂದು ಸೂಚಿಸಿದರು.
ಈ ಸಂದರ್ಭದಲ್ಲಿ ವಿರಾಜಪೇಟೆ ಪುರಸಭೆ ಅಧ್ಯಕ್ಷರು, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ ವ್ಯಾಪ್ತಿಯ ಅಧಿಕಾರಿಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

