Close Menu
Kodagu News
    ಹೊಸ ಸುದ್ದಿ

    ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    August 25, 2026

    ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ

    August 25, 2026

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಸಿದ್ದಾಪುರ-ವಿರಾಜಪೇಟೆ ರಸ್ತೆ ಕಾಮಗಾರಿ ವಿಳಂಬ : ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡ ಶಾಸಕ ಪೊನ್ನಣ್ಣ
    Uncategorized

    ಸಿದ್ದಾಪುರ-ವಿರಾಜಪೇಟೆ ರಸ್ತೆ ಕಾಮಗಾರಿ ವಿಳಂಬ : ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡ ಶಾಸಕ ಪೊನ್ನಣ್ಣ

    ಮಡಿಕೇರಿ :ಮಳೆಯಿಂದಾಗಿ ಹಾನಿಯಾದ ಸಿದ್ದಾಪುರ-ವಿರಾಜಪೇಟೆ ರಸ್ತೆಯನ್ನು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

    ಈ ಮುಖ್ಯ ರಸ್ತೆಗೆ ಈಗಾಗಲೇ ಟೆಂಡರ್ ಆಗಿದ್ದು, ಕಾಮಗಾರಿ ವಿಳಂಬ ಆಗಿರುವುದಕ್ಕೆ ಅಧಿಕಾರಿಗಳನ್ನು ಮತ್ತು ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ಮಳೆಯ ಸಂದರ್ಭದಲ್ಲಿ ಡಾಂಬರೀಕರಣ ಕಾಮಗಾರಿ ಅಸಾಧ್ಯವಾಗಿರುವುದರಿಂದ ಜನಸಾಮಾನ್ಯರ ಓಡಾಟಕ್ಕೆ ತೊಂದರೆಯಾಗದಂತೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಮೊದಲಿಗೆ ಗುತ್ತಿಗೆದಾರರು ಸ್ಥಳದಲ್ಲಿ ಇಲ್ಲದಿರುವುದನ್ನು ಗಮನಿಸಿ ಕೂಡಲೇ ಅವರನ್ನು ಕರೆಸಿದ ಶಾಸಕರು, ಗುತ್ತಿಗೆದಾರರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಕಾಮಗಾರಿ ವಿಳಂಬ ಆಗಿರುವುದನ್ನು ಗಂಭೀರವಾಗಿ ಪರಿಗಣಿಸಿದ ಮಾನ್ಯ ಶಾಸಕರು ಇನ್ನು 15 ದಿನಗಳ ಒಳಗಾಗಿ ರಸ್ತೆ ಬದಿಯ ಕರೆಂಟ್ ಕಂಬಗಳನ್ನು ಹಾಗೂ ಮೋರಿಯನ್ನು ಸಿದ್ಧಪಡಿಸುವುದರೊಂದಿಗೆ, ರಸ್ತೆಯ ಡಾಂಬರೀಕರಣ ಪ್ರಾರಂಭ ಮಾಡುವ ತನಕ, ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅನುವು ಆಗಿರುವಂತಹ ವ್ಯವಸ್ಥೆಯನ್ನು ಮಾಡಬೇಕೆಂದು ತಾಕಿತು ಮಾಡಿದರು.

    ಈ ಬಾರಿಯ ಮುಂಗಾರು ನಿಗದಿತ ಅವಧಿಗಿಂತ ಸುಮಾರು ಎರಡು ವಾರಗಳ ಮುಂಚಿತವಾಗಿಯೇ ಬಂದಿರುವುದರಿಂದ, ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ತೊಡಕಾಗಿರುವುದಾಗಿ ಅಧಿಕಾರಿಗಳು ಶಾಸಕರಲ್ಲಿ ಹೇಳಿಕೊಂಡರು. ಈ ವಿವರಣೆಯನ್ನು ಒಪ್ಪದ ಮಾನ್ಯ ಶಾಸಕರು, ಕಳೆದ ನವಂಬರ್ ನಲ್ಲಿ ಆರಂಭವಾದ ಈ ಕಾಮಗಾರಿಯು ಆಮೆಗತಿಯಲ್ಲಿ ಸಾಗುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಶಾಸಕರು ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಿಕೊಂಡು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಸಿದ್ದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಪ್ರತಿಷ್, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗು ಸ್ಥಳಿಯ ಪ್ರಮುಖರು ಉಪಸ್ಥಿತರಿದ್ದರು.

     

    Previous Articleಅತಿವೃಷ್ಟಿಯಿಂದ ಮನೆ ಹಾನಿ ಉದಾರತೆಯಿಂದ ವರದಿ ನೀಡಿ, ಪರಿಹಾರ ವಿತರಿಸಿ: ಎ.ಎಸ್.ಪೊನ್ನಣ್ಣ
    Next Article ಪ್ರಗತಿ ಪರಿಶೀಲನಾ ಸಭೆ

    Related Posts

    ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    August 25, 2026

    ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ

    August 25, 2026

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    August 25, 2026

    ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ

    August 25, 2026

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.