
ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ- ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿರುತ್ತದೆ. ಜಲಾಶಯವು ಶೀಘ್ರವೇ ಗರಿಷ್ಟ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು.
ಆದ್ದರಿಂದ ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಕೋರಲಾಗಿದೆ.
*ಕೊಡಗು ನ್ಯೂಸ್*

