ವಿಶ್ವ ಪರಿಸರ ದಿನಾಚರಣೆ
ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಮುಂದಾಗಿ: ನ್ಯಾಯಾಧೀಶ ಪರಮೇಶ್ವರ ಪ್ರಸನ್ನ
********************************************************
ಮಡಿಕೇರಿ , ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆ ಸಂಘಟನೆಯ ಇಕೋ ಕ್ಲಬ್‍ಗಳು, ಅರಣ್ಯ ಇಲಾಖೆ, ಕೊಡಗು ಜಿಲ್ಲೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಮಡಿಕೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಾಭಿವೃದ್ಧಿ ಕೋಶ, ಭಾರತ್ ಸ್ಕೌಟ್ಸ್, ಗೈಡ್ಸ್‍ನ ಜಿಲ್ಲಾ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ‘ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯ ಕೊನೆಗಾಣಿಸಿ’ ಎಂಬ ಧ್ಯೇಯ ವಾಕ್ಯದಡಿ ಗುರುವಾರ ನಗರದ ಗಾಂಧಿ ಭವನದಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಯಿತು.
ಗಾಂಧಿ ಭವನದ ಆವರಣದಲ್ಲಿ ಗಿಡ ನೆಟ್ಟು ಪರಿಸರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದ ಪ್ರಭಾರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಬಿ.ಪರಮೇಶ್ವರ ಪ್ರಸನ್ನ ಅವರು ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಭವಿಷ್ಯದ ದೃಷ್ಟಿಯಿಂದ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.
ಪರಿಸರ ದಿನಾಚರಣೆ ಆಚರಿಸುವ ಮೂಲಕ ಜನರಲ್ಲಿ ಪರಿಸರ ಪ್ರಜ್ಞೆ ಬೆಳೆಸಲಾಗುತ್ತಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕ ಅರಿವು ಮೂಡಿಸಲಾಗುತ್ತಿದೆ. ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಪಣ ತೊಡಬೇಕು. ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು ಎಂದು ಪ್ರತಿಪಾದಿಸಿದರು.

ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಬೇಕು. ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ಹಾನಿ ತಡೆಗಟ್ಟಬೇಕು ಎಂದು ಕರೆ ನೀಡಿದರು.

ಜಿಲ್ಲಾಧಿಕಾರಿ ವೆಂಕಟ್ಹ ರಾಜ ಮಾತನಾಡಿ ಹಲವು ಶತಮಾನಗಳಿಂದ ಪೂರ್ವಿಕರು ಪರಿಸರ ಸಂರಕ್ಷಣೆ ಮಾಡಿಕೊಂಡು ಬಂದಿದ್ದಾರೆ. ಅದನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕು. ಪರಿಸರ ದಿನವು ಒಂದು ದಿನಕ್ಕೆ ಸೀಮಿತವಲ್ಲ. ಇದನ್ನು ನಿರಂತರವಾಗಿ ಇರಬೇಕು. ವಿದ್ಯಾರ್ಥಿಗಳು ಪರಿಸರ ರಾಯಭಾರಿಗಳಾಗಿ ಕೆಲಸ ನಿರ್ವಹಿಸಬೇಕು ಎಂದರು.
ಮಡಿಕೇರಿಯು ಶುದ್ಧ ಪರಿಸರ ಹೊಂದಿರುವ ನಗರವಾಗಿ ಹೆಸರಾಗಿದೆ. ಅದನ್ನು ಕಾಪಾಡಿಕೊಂಡು ಹೋಗಬೇಕು. ಆ ನಿಟ್ಟಿನಲ್ಲಿ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಮಾತನಾಡಿ, ನಾವು ಅಂಗಡಿ, ಮಾರುಕಟ್ಟೆಗೆ ತೆರಳುವಾಗ ಪ್ಲಾಸ್ಟಿಕ್ ಬದಲಿಗೆ ಪರಿಸರ ಸ್ನೇಹಿ ವಸ್ತುಗಳ ಬಟ್ಟೆ ವಸ್ತುಗಳನ್ನು ಬಳಸುವಂತಾಗಬೇಕು ಎಂದರು.
ಕಸದ ನಿರ್ವಹಣೆ ಮನೆಯಿಂದಲೇ ಆರಂಭವಾಗಬೇಕು. ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಬೇರ್ಪಡಿಸುವ ಮೂಲಕ ಮಾಲಿನ್ಯವನ್ನು ತಡೆಯಬೇಕು. ವಿದ್ಯಾರ್ಥಿಗಳು ತಾಯಿಯ ಹೆಸರಿನಲ್ಲಿ ಗಿಡ ನೆಟ್ಟು ಬೆಳೆಸುವ ಮೂಲಕ ಸ್ವಚ್ಛ ಪರಿಸರವನ್ನು ಕಾಪಾಡಬೇಕು ಎಂದು ಸಲಹೆ ನೀಡಿದರು.
ಪರಿಸರಕ್ಕೆ ಯಾವುದೇ ಧಕ್ಕೆಯನ್ನುಂಟು ಮಾಡದೇ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಹಾಗೂ ನಾವು ನೆಟ್ಟ ಗಿಡವನ್ನು ಪೆÇೀಷಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಹತ್ತಿರದ ಸ್ಥಳಗಳಿಗೆ ವಾಹನ ಬಿಟ್ಟು ನಡೆದುಕೊಂಡು ಹೋಗುವುದು ಹಾಗೂ ಬೈಸಿಕಲ್ ಬಳಕೆ ಮಾಡುವ ಮೂಲಕ ಮಾಲಿನ್ಯ ತಡೆಯಬೇಕಿದೆ ಎಂದು ಶುಭ ಅವರು ವಿವರಿಸಿದರು.

Exit mobile version