ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ
***************************************
ಮಡಿಕೇರಿ :-ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಭೇಟಿ ಬಚಾವೋ- ಭೇಟಿ ಪಡಾವೋ ಯೋಜನೆ ಅಡಿ ಗಿಡ ನೀಡುವ ಕಾರ್ಯಕ್ರಮವು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಿಂಭಾಗದ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಗಿಡ ನೆಡುವ ಮೂಲಕ ಹಸಿರು ಬೆಳೆಸಿ-ಹಸಿರು ಉಳಿಸಿ ಎಂಬುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಅಧಿಕಾರಿಗಳು ಮತ್ತು ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಮಹಿಳಾ ಸಬಲೀಕರಣದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version