Close Menu
Kodagu News
    ಹೊಸ ಸುದ್ದಿ

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಭಾರತಿಯಲ್ಲಿಲ್ಲ ಇನ್ನು ಮುಂದೆ ಸರಸ್ವತಿ
    Uncategorized

    ಭಾರತಿಯಲ್ಲಿಲ್ಲ ಇನ್ನು ಮುಂದೆ ಸರಸ್ವತಿ

    ಭಾರತಿಯಲ್ಲಿಲ್ಲ ಇನ್ನು ಮುಂದೆ ಸರಸ್ವತಿ

     

    ವಿಶೇಷ ವರದಿ: ಅಂಚೆಮನೆ ಸುಧಿ

    ಸುಮಾರು 62 ವರ್ಷಗಳ ಇತಿಹಾಸ ಹೊಂದಿರುವ ಮರಗೋಡು ಭಾರತಿ ಸಂಯುಕ್ತ ವಿದ್ಯಾಸಂಸ್ಥೆ ಮುಚ್ಚುವ ಹಂತಕ್ಕೆ ಬಂದು ತಲುಪಿದೆ. ಈಗಾಗಲೇ ಪ್ರೌಢ ಶಾಲೆಗೆ ಬೀಗ ಹಾಕಲಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಪದವಿ ಪೂರ್ವ ಕಾಲೇಜ್ ಕೂಡ ಬಂದ್ ಆಗಲಿದೆ.

    ಮಡಿಕೇರಿ ತಾಲ್ಲೂಕಿನ ಮರಗೋಡು ಗ್ರಾಮದಲ್ಲಿರುವ ಮರಗೋಡು ಭಾರತಿ ಸಂಯುಕ್ತ ವಿದ್ಯಾಸಂಸ್ಥೆ 1963 ಜುಲೈನಲ್ಲಿ ಸ್ಥಾಪನೆಗೊಂಡಿತು. ಈ ಅನುದಾನಿತ ವಿದ್ಯಾಸಂಸ್ಥೆ ಇಲ್ಲಿಯವರೆಗೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುತ್ತಾ ಬಂದಿದೆ. ಗ್ರಾಮೀಣ ಭಾಗದ ಮಕ್ಕಳಿಗೆ ವರದಾನವಾಗಿದ್ದ ವಿದ್ಯಾಸಂಸ್ಥೆ ಇಂದು ಇತಿಹಾಸದ ಪುಟಗಳಲ್ಲಿ ಸೇರಿ ಹೋಗುತ್ತಿದೆ.

    ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಪ್ರತಿಯೊಂದು ಸರ್ಕಾರ ಕನ್ನಡ ಶಾಲೆಗಳು ಉಳಿಯಬೇಕೆನ್ನುವ ಅಭಿಲಾಷೆಯನ್ನು ವ್ಯಕ್ತಪಡಿಸುತ್ತವೆ. ಇದರ ಜೊತೆಯಲ್ಲೇ ಕನ್ನಡ ಶಾಲೆಗಳಿಗೆ ಪೈಪೋಟಿ ನೀಡಲು ಆಂಗ್ಲ ಮಾಧ್ಯಮದ ಶಾಲೆಗಳಿಗೆ ಅನುಮತಿಯನ್ನೂ ನೀಡುತ್ತವೆ. ಸರ್ಕಾರದ ಈ ದ್ವಂದ್ವ ನಿಲುವುಗಳಿಂದ ರಾಜ್ಯದ ಸಾವಿರಾರು ಕನ್ನಡ ಶಾಲೆಗಳು ಮುಚ್ಚಿ ಹೋಗಿದ್ದು, ಇವುಗಳ ಸಾಲಿಗೆ ಮರಗೋಡು ಭಾರತಿ ಸಂಯುಕ್ತ ವಿದ್ಯಾಸಂಸ್ಥೆಯೂ ಸೇರ್ಪಡೆಯಾಗಲಿದೆ.

    ನುರಿತ ಶಿಕ್ಷಕರ ಪಾಠ, ಉತ್ತಮ ಫಲಿತಾಂಶ, ಮೂಲಭೂತ ಸೌಲಭ್ಯಗಳ ಲಭ್ಯತೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ತೋರಿದ ದಕ್ಷತೆಯಿಂದ ಈ ವಿದ್ಯಾಸಂಸ್ಥೆ ಅತ್ಯಂತ ಖ್ಯಾತಿ ಗಳಿಸಿತ್ತು. ಮರಗೋಡು ಮಾತ್ರವಲ್ಲದೆ ಸುತ್ತಮುತ್ತಲ ಗ್ರಾಮಗಳ ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ವಿದ್ಯಾರ್ಜನೆ ಮಾಡಿದ್ದಾರೆ. ಅನೇಕರು ಉನ್ನತ ಹುದ್ದೆ ಮತ್ತು ಸರ್ಕಾರಿ ಉದ್ಯೋಗದಲ್ಲಿದ್ದು, ಹಲವರು ಸ್ವಾವಲಂಬಿಗಳಾಗಿ ಉದ್ಯಮ ಹಾಗೂ ವ್ಯಾಪಾರದಲ್ಲಿ ತೊಡಗಿದ್ದಾರೆ. ವಿದ್ಯಾರ್ಥಿಗಳಿಗೆ ಸುಂದರ ಜೀವನವನ್ನು ನೀಡಿದ ಮರಗೋಡು ಭಾರತಿ ಸಂಯುಕ್ತ ವಿದ್ಯಾಸಂಸ್ಥೆ ಇಂದು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತಕ್ಕೆ ಬಂದು ತಲುಪಿದೆ.

    ತಾವು ವ್ಯಾಸಂಗ ಮಾಡಿದ ವಿದ್ಯಾಸಂಸ್ಥೆಗೆ ಶಾಶ್ವತವಾಗಿ ಬೀಗ ಬೀಳ್ತುರುವ ಬಗ್ಗೆ ಹಳೆಯ ವಿದ್ಯಾರ್ಥಿಗಳು ಅತೀವ ದು:ಖ ವ್ಯಕ್ತಪಡಿಸಿದ್ದಾರೆ. ಪ್ರೌಢ ಶಾಲೆಗೆ ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳು ಬಂದಿರುವುದರಿಂದ ದಾಖಲಾತಿಯನ್ನು ಸ್ಥಗಿತಗೊಳಿಸಲಾಗಿದೆ. ಪದವಿ ಪೂರ್ವ ಕಾಲೇಜ್ ನ ಕೊನೆಯ ಬ್ಯಾಚ್ ನ ದ್ವಿತೀಯ ಪಿಯುಸಿ ತರಗತಿ ಮಾತ್ರ ಪ್ರಸ್ತುತ ವರ್ಷ ನಡೆಯಲಿದೆ. ಮುಂದಿನ ವರ್ಷದಿಂದ ಪದವಿ ಪೂರ್ವ ಕಾಲೇಜ್ ಕೂಡ ಬಂದ್ ಆಗಲಿದೆ.

    ನವೀನ ತಂತ್ರಜ್ಞಾನದ ಇಂದಿನ ವೇಗದ ಯುಗದಲ್ಲಿ ವಿದ್ಯಾರ್ಥಿಗಳು ಮಾತ್ರವಲ್ಲ ಪೋಷಕರು ಕೂಡ ಆಂಗ್ಲ ಮಾಧ್ಯಮ ಶಾಲೆಗಳ ಕಡೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳ ಜ್ಞಾನ ದೇಗುಲವಾಗಿರುವ ಮರಗೋಡು ಭಾರತಿ ಸಂಯುಕ್ತ ವಿದ್ಯಾಸಂಸ್ಥೆಯನ್ನು ಸರ್ಕಾರ ಉಳಿಸಿಕೊಳ್ಳುವ ಕಾರ್ಯವನ್ನು ಮಾಡಬಹುದಾಗಿತ್ತು. ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಪೈಪೋಟಿ ನೀಡಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡಿ ಪ್ರೋತ್ಸಾಹಿಸಬಹುದಾಗಿತ್ತು. ಆದರೆ ಇಂದು ಈ ವಿದ್ಯಾಸಂಸ್ಥೆ ಯಾರಿಗೂ ಬೇಡವಾಗಿದೆ, 62 ವರ್ಷಗಳ ವಿದ್ಯಾವೈಭವಕ್ಕೆ ತೆರೆ ಬೀಳಲಿದೆ.

    Previous Articleಫೂಟ್ ಪಲ್ಸ್ ಥೆರಫಿ ಮನುಷ್ಯನ ಕಾಯಿಲೆಗಳನ್ನು ದೂರ ಮಾಡುತ್ತದೆ: ಶಶಿಕಾಂತ್ ಪೂಜಾರಿ
    Next Article ದ್ವಿತೀಯ ಪಿಯುಸಿ ಪರೀಕ್ಷೆ-3 ವ್ಯವಸ್ಥಿತವಾಗಿ ನಡೆಸಿ: ಆರ್.ಐಶ್ವರ್ಯ

    Related Posts

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.