ಪೊನ್ನಂಪೇಟೆ ತಾಲೂಕು ಬೆಳ್ಳೂರು ಗ್ರಾಮದಲ್ಲಿರುವ ಮಲ್ಲಂಗಡ ಕುಟುಂಬಸ್ಥರ ಐನ್ ಮನೆಗೆ, ಇಂದು  ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ  ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಭೇಟಿ ನೀಡಿದರು.

ಐನ್ ಮನೆ ಹಿರಿಯರು ಹಾಗೂ ಪ್ರಮುಖದೊಂದಿಗೆ ಮಾತನಾಡಿದ ಮಾನ್ಯ ಶಾಸಕರು ಮಲ್ಲಂಗಡ ಐನ್ ಮನೆಯ ಇತಿಹಾಸದ ಬಗ್ಗೆ ತಿಳಿದುಕೊಂಡು ಐಎನ್ ಮನೆಗಳನ್ನು ಉಳಿಸಿವುದು ನಮ್ಮ ಜವಾಬ್ದಾರಿಯಾಗಿದ್ದು ಅವುಗಳ ಅಭಿವೃದ್ಧಿಗೆ ತನ್ನ ಕೈಲಾದ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.

ಈ ವೇಳೆ ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್,ಮಲ್ಲಂಗಡ ಕುಟುಂಬಸ್ಥರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Exit mobile version