
ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿರಾಜಪೇಟೆ ತಾಲೂಕಿನ ಈ ಭಾಗದಲ್ಲಿ ನಿರ್ಮಾಣಗೊಂಡ ಈ ವಿದ್ಯಾರ್ಥಿ ನಿಲಯವು, ಸುತ್ತಮುತ್ತಲಿನ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂಥ ವಾತಾವರಣ ನಿರ್ಮಿಸಲಿದೆ ಎಂದು ಅಭಿಪ್ರಾಯಿಸಿದರು. ಬಳಿಕ ಇಲಾಖೆಯ ಪ್ರಮುಖರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಪೊನ್ನಣ್ಣ ಇಲ್ಲಿ ವಿದ್ಯಾರ್ಥಿನಿಯರಿಗೆ ಬೇಕಾದಂತಹ ಎಲ್ಲಾ ಮೂಲಭೂತ ಸೌಕರ್ಯವೂ ಸದಾ ವದವು ಗುರುವಂತೆ ನೋಡಿಕೊಳ್ಳುವುದು ಪ್ರಥಮ ಆದ್ಯತೆ ಆಗಿರಬೇಕೆಂದು ಸಲಹೆ ನೀಡಿದರು. ವಿದ್ಯಾರ್ಥಿನಿಯರಿಗೆ ಸುರಕ್ಷೆ ಹಾಗೂ ಉತ್ತಮ ವಾತಾವರಣ ಇರುವಂತೆ ನೋಡಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಪೊನ್ನಣ್ಣ ಹೇಳಿದರು.
ವೇದಿಕೆಯಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರ ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಮಾಚಯ್ಯ, ವಿರಾಜಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷರಾದ ಜಾನ್ಸನ್, ಕೆಡಿಪಿ ಸದಸ್ಯರಾದ ಗಣೇಶ್,ಪಾಲಿಬೆಟ್ಟ ವಲಯ ಅಧ್ಯಕ್ಷರಾದ ಕಾಳಪ್ಪ, ಇಲಾಖೆಯ ಅಧಿಕಾರಿಗಳು ಹಾಗೂ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.


