Close Menu
Kodagu News
    ಹೊಸ ಸುದ್ದಿ

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ
    • ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    • ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
    • “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
    • ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
    • ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
    • ಕೊಡಗಿನಲ್ಲಿ ರೇವ್ ಪಾರ್ಟಿಗೆ ಖಾಕಿ ಬ್ರೇಕ್! ‘ಕೂರ್ಗ್ ರೇವ್’ ಪ್ರಚಾರ ಬೆನ್ನಲ್ಲೇ ಪೊಲೀಸರ ಎಚ್ಚರಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ವಲಯ ಕಾಂಗ್ರೆಸ್ ಆಯೋಜಿತ ಕಾರ್ಯಕ್ರಮದಲ್ಲಿ ಶಾಸಕ ಪೊನ್ನಣ್ಣ ಭಾಗಿ
    Uncategorized

    ವಲಯ ಕಾಂಗ್ರೆಸ್ ಆಯೋಜಿತ ಕಾರ್ಯಕ್ರಮದಲ್ಲಿ ಶಾಸಕ ಪೊನ್ನಣ್ಣ ಭಾಗಿ

    Updated:June 9, 2025

    ಮಡಿಕೇರಿ : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ತಾಲೂಕು ಕುಂಜಲಗೇರಿ ಗ್ರಾಮದಲ್ಲಿ ವಲಯ ಕಾಂಗ್ರೆಸ್ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರು ಭಾಗವಹಿಸಿದರು.

    ಕಾರ್ಯಕ್ರಮಕ್ಕೂ ಮೊದಲು ಸ್ಥಳೀಯ ಭಗವತಿ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸಭೆಗೆ ಆಗಮಿಸಿದರು. ಮೊದಲಿಗೆ ಸ್ಥಳೀಯ ಮುಖಂಡರು ತಮ್ಮ ಬೇಡಿಕೆಗಳ ಮನವಿಯನ್ನು ಮಾನ್ಯ ಶಾಸಕರಿಗೆ ಸಲ್ಲಿಸಿದರು. ಇದರಲ್ಲಿ ಪ್ರಮುಖವಾಗಿ ನಾಲ್ಕು ರಸ್ತೆಗಳ ಉನ್ನತಿಕರಣದ ಬೇಡಿಕೆ ಇರುವುದನ್ನು ಪರಿಗಣಿಸಿದ ಮಾನ್ಯ ಶಾಸಕರು, ಎರಡು ರಸ್ತೆಗೆ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವುದಾಗಿ ಹೇಳಿ, ಉಳಿದ ರಸ್ತೆಗಳನ್ನು ಆದ್ಯತೆ ಮೇರೆಗೆ ಮಾಡಿಕೊಡುವುದಾಗಿ ತಿಳಿಸಿದರು. ಬಳಿಕ ಸಭೆಯಲ್ಲಿ ಮಾತನಾಡಿದ ಮಾನ್ಯ ಶಾಸಕರು, ಕ್ಷೇತ್ರ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರಲ್ಲೂ ವಿಶೇಷವಾಗಿ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿಗಳ ಯಶಸ್ವಿ ಅನುಷ್ಠಾನ ರಾಜ್ಯಾದ್ಯಂತ ಆಗಿದ್ದು, ಇದರ ಪ್ರಚಾರ ಮಾಡಿ ಜನಸಾಮಾನ್ಯರಿಗೆ ತಲುಪಿಸುವಲ್ಲಿ ಪಕ್ಷದ ಕಾರ್ಯಕರ್ತರ ಶ್ರಮ ದೊಡ್ಡದಾಗಿ ಇರಬೇಕೆಂದು ಕರೆ ನೀಡಿದರು. ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ನೇತೃತ್ವದ ಕಾಂಗ್ರೆಸ್ ಸರಕಾರ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಪಕ್ಷದ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ಮತ್ತಷ್ಟು ಚುರುಕಾಗಿ ತೊಡಗಿಕೊಳ್ಳಬೇಕೆಂದು ಕರೆ ನೀಡಿದರು.

    ಸುಮಾರು 70 ಅಧಿಕ ಜನರು ಕಾಂಗ್ರೆಸ್ ಪಕ್ಷ ಸೇರ್ಪಡೆ : ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ಒಪ್ಪಿ ಹಾಗೂ ಮಾನ್ಯ ಶಾಸಕರ ಕೆಲಸ ಕಾರ್ಯಗಳನ್ನು ಮೆಚ್ಚಿ, ಈ ಭಾಗದ ಸುಮಾರು 70 ಕ್ಕೂ ಅಧಿಕ ನಾಯಕರುಗಳು ಹಾಗೂ ಕಾರ್ಯಕರ್ತರು ಇತರ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಎಲ್ಲರನ್ನೂ ಪಕ್ಷದ ಶಲ್ಯ ಹೊದಿಸಿ ಕಾಂಗ್ರೆಸ್‌ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

    ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಯುವ ಕಾಂಗ್ರೆಸ್‌ ಕೊಡಗು ಜಿಲ್ಲಾಧ್ಯಕ್ಷರಾದ ಜಮ್ಮಡ ಸೋಮಣ್ಣ, ಯುವ ಕಾಂಗ್ರೆಸ್‌ ವಿರಾಜಪೇಟೆ ಕ್ಷೇತ್ರ ಅಧ್ಯಕ್ಷರಾದ ಪಟ್ಟಡ ರಕ್ಷಿತ್, ವಲಯ ಕಾಂಗ್ರೆಸ್ ಪ್ರಮುಖರಾದ ಬಟ್ಟಕಾಳಂಡ ರಾಜ ಹಾಗೂ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

    Previous Articleಬೂಕರ್ ಪ್ರಶಸ್ತಿ ವಿಜೇತೆಗೆ ಕುಲಪತಿಗಳ ಆಹ್ವಾನ
    Next Article ಶಾಲನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ NDRF ತಂಡ ಭೇಟಿ

    Related Posts

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.