ಜೂ.11 ರಂದು ಕುಶಾಲನಗರ ಪುರಸಭಾ ಕಚೇರಿ ಕಟ್ಟಡ ಉದ್ಘಾಟನೆ
ಮಡಿಕೇರಿ : ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ಕುಶಾಲನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪುರಸಭಾ ಕಚೇರಿ ಕಟ್ಟಡ ಉದ್ಘಾಟನಾ ಸಮಾರಂಭವು ಜೂನ್, 11 ರಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ನಗರಾಭಿವೃದ್ಧಿ ಸಚಿವರು ಹಾಗೂ ನಗರ ಯೋಜನೆ ಸಚಿವರಾದ ಬಿ.ಎಸ್.ಸುರೇಶ್, ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್, ಕುಶಾಲನಗರ ಪುರಸಭೆ ಅಧ್ಯಕ್ಷರಾದ ಜಯಲಕ್ಷ್ಮಿ ಚಂದ್ರು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ತ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ್ ಸರ್ಜಿ, ಇತರರು ಪಾಲ್ಗೊಳ್ಳಲಿದ್ದಾರೆ.
