ಮಡಿಕೇರಿ : ಗ್ರಾಮೋತ್ಥಾನ ಭಾರತ ಪ್ರಕಾಶನ, ಕೊಡಗು ವತಿಯಿಂದ ಭಾರತ ಸಿಂಧೂರ ಕೃತಿ ಲೋಕಾರ್ಪಣೆ ಕಾರ್ಯಕ್ರಮವು ಜೂನ್, 10 ರಂದು ಮಧ್ಯಾಹ್ನ 2.30 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ.
ಶಕ್ತಿ ಕುಟುಂಬದ ರಾಜಲಕ್ಷ್ಮಿ ಗೋಪಾಲಕೃಷ್ಣ, ಬೆಂಗಳೂರು ನಿವೃತ್ತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಚೊಟ್ಟಕೊರಿಯಂಡ ಕೆ.ಬಾಲಕೃಷ್ಣ, ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ.ಅನಂತಶಯನ, ಕೃತಿಕಾರರಾದ ಚಿ.ನಾ.ಸೋಮೇಶ್, ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ಪ್ರಧಾನ ಅರ್ಚಕರು ನಿವೃತ್ತ ಯೋಧ ಜಿ.ಎ.ಉಮೇಶ್, ಬೆಂಗಳೂರು ನಿವೃತ್ತ ಹೈಕೋರ್ಟ್ ಉದ್ಯೋಗಿ ಸುಧೀಂದ್ರ ಡಿ.ತಿಳಗುಳ್, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ಆರ್.ಸವಿತಾ ರೈ. ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷರಾದ ಬೊಳ್ಳಜಿರ ಬಿ.ಅಯ್ಯಪ್ಪ, ಇತರರು ಪಾಲ್ಗೊಳ್ಳಲಿದ್ದಾರೆ.


