
*ಅಹಮದಾಬಾದ್ ವಿಮಾನ ದುರಂತ: ತೀವ್ರ ಆಘಾತ ಮತ್ತು ದುಃಖವನ್ನುಂಟುಮಾಡಿದೆ: ಪೊನ್ನಣ್ಣ*
ಗುಜರಾತಿನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿ ನೂರಾರು ಜನರು ದುರಂತ ಸಾವಿಗೀಡಾದ ಸುದ್ದಿ ತೀವ್ರ ದುಃಖ ಉಂಟು ಮಾಡಿದೆ. ಭಾರತೀಯರು ಸೇರಿದಂತೆ ಹಲವು ವಿದೇಶಿ ಪ್ರಯಾಣಿಕರಿದ್ದ ಈ ವಿಮಾನದ ಪತನ ಅತ್ಯಂತ ದುರಾದೃಷ್ಟಕರ. ವಿಮಾನವು ಮೆಡಿಕಲ್ ಹಾಸ್ಟೆಲ್ ಮೇಲೆ ಪತನ ಆಗಿ ವಿದ್ಯಾರ್ಥಿಗಳೂ ಸಾವನ್ನಪ್ಪಿರುವ ಸುದ್ದಿ ಮತ್ತಷ್ಟು ಆಘಾತ ನೀಡಿದೆ.
ಈ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸುತ್ತಾ, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಎಂದು ಮುಖ್ಯಮಂತ್ರಿಗಳ ಕಾನೂನು ಸಲೆಹಗಾರ ಹಾಗೂ ವಿರಾಜಪೇಟೆ ಶಾಸಕ ಪೊನ್ನಣ್ಣ ಮಾಧ್ಯಮ ಪ್ರಕಣೆಯ ಮೂಲಕ ತಮ್ಮ ದುಃಖವನ್ನು ತೋಡಿಕೊಂಡಿದ್ದಾರೆ.

