Close Menu
Kodagu News
    ಹೊಸ ಸುದ್ದಿ

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    Uncategorized

    ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    ಮಡಿಕೇರಿ  : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ವಿವಿಧ ಯೋಜನೆ ಅನುμÁ್ಠನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಜುಲೈ 4 ಕೊನೆ ದಿನವಾಗಿದೆ. (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ)

    ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಸರ್ಕಾರಿ ಸೌಲಭ್ಯವನ್ನು (ಸಾಲ-ಸಹಾಯಧನ) ಪಡೆಯುವ ಸಂಬಂಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಳಿಗೆ ಶೇ.1 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.)

    ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರಸಾಲ ಮತ್ತು ಸಹಾಯಧನ) ಯೋಜನೆಯ ಅರ್ಹತೆಗಳು ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ.98 ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ.1.20 ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿದಾರರು18 ವರ್ಷಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಲ್ಲಿ ಕನಿಷ್ಠ ರೂ.1 ಲಕ್ಷ ಗಳಿಂದ ಗರಿಷ್ಠ ರೂ.2 ಲಕ್ಷ ಗಳ ಸಾಲ ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ.15ರಷ್ಟು ಕನಿಷ್ಠ ರೂ.20 ಸಾವಿರಗಳಿಂದ ಗರಿಷ್ಠ ರೂ.30 ಸಾವಿರಗಳವರೆಗೆ ಸಹಾಯಧನ ಹಾಗೂ ಶೇ.85ರಷ್ಟು ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು, 2 ತಿಂಗಳ ವಿರಾಮ ಅವಧಿ ಇರುತ್ತದೆ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

    ಜೀಜಾವುಜಲ ಭಾಗ್ಯಯೋಜನೆಯ (ಗಂಗಾ ಕಲ್ಯಾಣ ನೀರಾವರಿ ಯೋಜನೆ) ಅರ್ಹತೆಗಳು: ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ.98 ಸಾವಿರಗಳ ಮಿತಿಯೊಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟಿರಬೇಕು. ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು. ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಈ ಯೋಜನೆಯಲ್ಲಿ ಘಟಕ ವೆಚ್ಚ ರೂ.3.75 ಲಕ್ಷಗಳು (ವಿದ್ಯುದ್ದೀಕರಣ ಸೇರಿ) ಹಾಗೂ ಅವಶ್ಯವಿದ್ದಲ್ಲಿ ರೂ.50 ಸಾವಿರಗಳ ಸಾಲವನ್ನು ಶೇ.4 ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು.

    ಅರಿವು ಶೈಕ್ಷಣಿಕ ಸಾಲ ಯೋಜನೆಯ (Fresh Students))ಅರ್ಹತೆಗಳು: ಈ ಯೋಜನೆಯಲ್ಲಿ ಸಿ.ಇ.ಟಿ.(ಅಇಖಿ)/ನೀಟ್() ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಮರಾಠ ಸಮುದಾಯಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1,00,000/-ಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 06ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. 1) ಅರ್ಜಿದಾರರು 18 ವರ್ಷ ಮೇಲ್ಪಟ್ಟು 30 ವರ್ಷದ ಒಳಗಿನವರಾಗಿರಬೇಕು. 2) ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.3.50ಲಕ್ಷಗಳ ಮಿತಿಯೊಳಗಿರಬೇಕು

    ಅರಿವು ಶೈಕ್ಷಣಿಕ ಸಾಲ ಯೋಜನೆಯ ನವೀಕರಣ: 2022-23, 2023-24 ಮತ್ತು 2024-25ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2025-26ನೇ ಸಾಲಿಗೆ 2, 3 ಮತ್ತು 4ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು 2, 3 ಮತ್ತು 4ನೇ ವರ್ಷದ ವ್ಯಾಸಂಗ ದೃಢೀಕರಣ ಮತ್ತು ಕಳೆದವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸುವುದು.

    ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ(ಹೊಸದು); ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ ಮರಾಠ ಸಮುದಾಯದ ವಿದ್ಯಾರ್ಥಿಗಳು ವಿದೇಶದಲ್ಲಿನ QS World Ranking 1000 ರೊಳಗೆ ಬರುವ ವಿಶ್ವವಿದ್ಯಾಲಯಗಳಲ್ಲಿ ಪೆÇೀಸ್ಟ್ ಡಾಕ್ಟೋರಲ್ ಪಿಹಚ್‍ಡಿ, ಮಾಸ್ಟರ್ ಡಿಗ್ರೀ, ಕೋರ್ಸುಗಳಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರವೇಶ ಪಡೆಯುವ ಅಭ್ಯರ್ಥಿಗಳಿಗೆ ವಾರ್ಷಿಕ ಗರಿಷ್ಟ ರೂ.25 ಲಕ್ಷ ಅಥವಾ ವಿದ್ಯಾರ್ಥಿಗಳ ಕೋರ್ಸ್‍ನ ಪೂರ್ಣ ಅವಧಿಗೆ ಗರಿಷ್ಠ ರೂ.50 ಲಕ್ಷಗಳವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲು ಅರ್ಜಿಗಳನ್ನು ಅಹ್ವಾನಿಸಿದೆ.2)ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.15 ಲಕ್ಷಗಳ ಮಿತಿಯೊಳಗಿರಬೇಕು.

    ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ ನವೀಕರಣ ಅರ್ಹತೆಗಳು:

    2024-25ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2025-26ನೇ ಸಾಲಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು 2ನೇ ವರ್ಷದ ವ್ಯಾಸಂಗ ದೃಢೀಕರಣ ಮತ್ತು ಮೊದಲನೇ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸುವುದು.

    ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶ ಮತ್ತು ನಗರ ಪ್ರದೇಶದವರಿಗೆ ರೂ.8 ಲಕ್ಷಗಳು ಮೀರತಕ್ಕದಲ್ಲ. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 55 ವರ್ಷಗಳನ್ನು ಮೀರಿರತಕ್ಕದ್ದಲ್ಲ. ಈ ಯೋಜನೆಯ ಘಟಕ ವೆಚ್ಚ ಗರಿಷ್ಠ ರೂ.5 ಲಕ್ಷ ಸಾಲ, ರೂ.40 ಸಾವಿರ ಸಹಾಯಧನ ಆಗಿರುತ್ತದೆ. ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು. 03 ವರ್ಷಗಳಲ್ಲಿ ಮಾಸಿಕ ಕಂತುಗಳಲ್ಲಿ ಮಂಜೂರಾತಿ ಆದೇಶದಲ್ಲಿ ನಿಗದಿಪಡಿಸಿರುವಂತೆ ಅಸಲು ಮತ್ತು ಬಡ್ಡಿಯನ್ನು ಮರುಪಾವತಿಸುವುದು.

    ಸ್ವಯಂ ಉದ್ಯೋಗ ಸಾಲ ಯೋಜನೆಯ (ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ): ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ.98 ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ.1.20 ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಡಿ ಉದ್ಯೋಗ ಪ್ರಾರಂಭಿಸಲು ಬ್ಯಾಂಕ್/ಸಹಕಾರಿ ಸಂಘಗಳಿಂದ ಸಾಲ ಪಡೆಯಬೇಕು ಹಾಗೂ ನಿಗಮದಿಂದ ಶೇ.20ರಷ್ಟು ಅಥವಾ ಗರಿಷ್ಠ ರೂ.1 ಲಕ್ಷಗಳನ್ನು ನಿಗಮದಿಂದ ಸಹಾಯಧನ ಮಂಜೂರು ಮಾಡಲಾಗುವುದು. ಬ್ಯಾಂಕ್‍ಗಳು ಮಂಜೂರು ಮಾಡುವ ಸಾಲಕ್ಕೆ ಬ್ಯಾಂಕ್‍ಗಳು ಚಾಲ್ತಿಯಲ್ಲಿರುವ ಬಡ್ಡಿಯನ್ನು ವಿಧಿಸಲಾಗುತ್ತದೆ.

    ಸ್ವಾವಲಂಬಿ ಸಾರಥಿ ಯೋಜನೆಯ ಆರ್ಹತೆಗಳು: ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ.98 ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ.1.20 ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿದಾರರು 21ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘುವಾಹನ ಚಾಲನಾ ಪರವಾನಿಗೆಯನ್ನು ಹೊಂದಿರಬೇಕು. ಅರ್ಜಿದಾರರು ನಿರುದ್ಯೋಗಿಯಾಗಿರಬೇಕು. ಈ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಫಲಾನುಭವಿಯು ಸ್ವಯಂ ಟ್ಯಾಕ್ಸಿ ಚಾಲನೆ (ಹಳದಿ ಬೋರ್ಡ್) ಉದ್ದೇಶಕ್ಕೆ ವಾಹನವನ್ನು ನೋಂದಾಯಿಸತಕ್ಕದ್ದು. ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನವನ್ನು (ಟ್ಯಾಕ್ಸಿ, ಟಾಟಾ ಎಸಿ, ಗೂಡ್ಸ್ವಾಹನ ಇತ್ಯಾದಿ ನಾಲ್ಕು ಚಕ್ರಗಳ ವಾಹನ) ಖರೀದಿಸಲು ಬ್ಯಾಂಕ್/ ಹಣಕಾಸು ಸಂಸ್ಥೆಗಳು ಮಂಜೂರು ಮಾಡಿದ ಸಾಲದ ಶೇ.50ರಷ್ಟು ಅಥವಾ ಗರಿಷ್ಟರೂ.3.00 ಲಕ್ಷಗಳವರೆಗೆ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡುವುದು. ಉಳಿದ ಮೊತ್ತವನ್ನು ಬ್ಯಾಂಕ್/ ಹಣಕಾಸು ಸಂಸ್ಥೆಗಳಿಂದ ಸಾಲದ ರೂಪದಲ್ಲಿ ಪಡೆಯುವುದು ಈ ಸಾಲಕ್ಕೆ ಬ್ಯಾಂಕ್/ ಹಣಕಾಸು ಸಂಸ್ಥೆಗಳು ನಿಗದಿಪಡಿಸುವ ಬಡ್ಡಿಯನ್ನು ಪಾವತಿಸಬೇಕು.

    ಸ್ವಾತಂತ್ರ್ಯಯ ಅಮೃತ್ ಮೊಹೋತ್ಸವ ಮುನ್ನಡೆ ಯೋಜನೆಯಆರ್ಹತೆಗಳು:- ಮರಾಠ ಸಮುದಾಯದ ಯುವಜನತೆಯನ್ನು ಕೌಶಲ್ಯ ಅಭಿವೃದ್ಧಿ ಪಡಿಸಿ ಉದ್ಯೋಗಮುಖಿಗಳನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ಐಟಿಐ, ಜಿಟಿಟಿಸಿ, ಕೆಜಿಟಿಟಿಐ, ಎಟಿಡಿಸಿ, ವಿಟಿಯು ಹಾಗೂ ಕಾಳಿದಾಸ ಶಿಕ್ಷಣ ಸಂಸ್ಥೆ, ಗದಗ ಇತ್ಯಾದಿ ಸಂಸ್ಥೆಗಳ ಅಲ್ಪಾವಧಿ ಕೋರ್ಸ್‍ಗಳ ಮೂಲಕ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು ಕೌಶಲ್ಯ ಕರ್ನಾಟಕ ತಂತ್ರಾಂಶದ https://www.kaushalkar.comಮೂಲಕ ಅರ್ಜಿ ಅಹ್ವಾನಿಸಿದೆ.

    ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್‍ಖಾತೆಗೆ ಆಧಾರ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಈ ಎಲ್ಲಾ ಯೋಜನೆಗಳಿಗೆ ಅರ್ಜಿಗಳನ್ನು ಸೇವಾ ಸಿಂಧು ಪೆÇೀರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕವೇ ಸಲ್ಲಿಸಬೇಕಾಗಿರುತ್ತದೆ.

    ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‍ಲೈನ್‍ನಲ್ಲಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವುದು, ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು.

    2023-24, 2024-25ನೇ ಸಾಲಿನ ನಿಗದಿತ ಯೋಜನೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಈ ವರ್ಷ ಅರ್ಜಿ ಸಲ್ಲಿಸಬಾರದು. ಸರ್ಕಾರವು ಹಾಗೂ ನಿಗಮವು ಕಾಲಕಾಲಕ್ಕೆ ವಿಧಿಸುವ ಇನ್ನಿತರ ಅರ್ಹತೆ/ ನಿಬಂಧನೆಗಳನ್ನು ಹೊಂದಿದವರಾಗಿರಬೇಕು.

    ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ: 8867537799/ ದೂ.ಸಂ:080-29903994 (ಬೆಳಗ್ಗೆ:10.00ರಿಂದ ಸಂಜೆ:5.30ವರೆಗೆ ಸಂಪರ್ಕಿಸಬಹುದಾಗಿದೆ). ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ದೂರವಾಣಿ ಸಂಖ್ಯೆ: 08272-221656 ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

    Previous Articleಬಹುಮಾನಕ್ಕೆ ಅರ್ಜಿ ಆಹ್ವಾನ
    Next Article ರಿವರ್ ರಾಪ್ಟಿಂಗ್ ಗೆ ಕಡ್ಡಾಯ ಫಿಟ್ನೆಸ್ ಪ್ರಮಾಣಪತ್ರ ಆವಶ್ಯ

    Related Posts

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.