ಮಡಿಕೇರಿ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ವಿಜಯೋತ್ಸವ ಸಂದರ್ಭ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಸಾವನಪ್ಪಿದ 11 ಜನ ಅಮಾಯಕರ ಸಾವಿಗೆ ರಾಜ್ಯ ಸರಕಾರ ನೇರ ಹೊಣೆ ಹಾಗು ತಮ್ಮ ಆಡಳಿತ ವೈಫಲ್ಯ ಮರೆಮಾಚಾಲು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿದ ಸರಕಾರದ ವಿರುದ್ಧ ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.
ಜಿಲ್ಲಾ ಅಧ್ಯಕ್ಷರಾದ ರವಿ ಕಾಳಪ್ಪ, ಜಿಲ್ಲಾ ಉಪಾಧ್ಯಕ್ಷರಾದ ಕಿಲನ್ ಗಣಪತಿ,ಮಂಡಲ ಅಧ್ಯಕ್ಷರಾದ ಸುವಿನ್ ಗಣಪತಿ,ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ,ಮಾಜಿ ಪರಿಷತ್ ಸದಸ್ಯರಾದ ಗಣೇಶ್ ಕಾರ್ಣಿಕ್,ಮಂಡಲ ಪ್ರಧಾನ ಕಾರ್ಯದರ್ಶಿ ಮುದ್ದಿಯಡ ಮಂಜು ಗಣಪತಿ,ಮಂಡಲ ಉಪಾಧ್ಯಕ್ಷರಾದ ಕಬೀರ್ ದಾಸ್,ಪೊನ್ನಂಪೇಟೆ ಶಕ್ತಿ ಕೇಂದ್ರ ಪ್ರಮುಖರಾದ ನಿಲನ್ ಮಂದಣ್ಣ,ಮಂಡಲ ಇತರ ಶಕ್ತಿ ಕೇಂದ್ರ ಪ್ತಮುಖರು ಹಾಗು ಕಾರ್ಯಕರ್ತರು ಪಾಲ್ಗೊಂಡಿದ್ದರು.


