ರಾಷ್ಟ್ರಮಟ್ಟದ ಅಂತರ ಸೈನಿಕ ಶಾಲೆಗಳ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೂಡಿಗೆಯ ಕೊಡಗು ಸೈನಿಕ ಶಾಲೆಯ ಜೂನಿಯರ್ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಪ್ರಶಸ್ತಿ ಹಾಗೂ ಟ್ರೋಫಿಯನ್ನು ತನ್ನಾದಾಗಿಸಿಕೊಂಡಿದೆ.
ಒರಿಸ್ಸಾ ರಾಜ್ಯದ ಭುವನೇಶ್ವರ ಫುಟ್ಬಾಲ್ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ಫುಟ್ಬಾಲ್ ಪಂದ್ಯದಲ್ಲಿ ಕೂಡಿಗೆ ಸೈನಿಕ ಶಾಲೆಯ ಜೂನಿಯರ್ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲೆಗೆ ಮತ್ತು ಶಾಲೆಗೆ ಕೀರ್ತಿ ತಂದಿದ್ದಾರೆ. ಕ್ರೀಡಾಕೂಟದಿಂದ ಮರಳಿದ ವಿಜೇತರನ್ನು ಕೂಡಿಗೆ ಅಂಜಲಾ ವಿದ್ಯಾನೀಕೆತನ ಶಾಲೆಯ ಮುಂಭಾಗದಿಂದ ಕೂಡಿಗೆಯ ಪ್ರಮುಖ ಬೀದಿಗಳಲ್ಲಿ ಹೂಗಳಿಂದ ಅಲಂಕಾರಗೊಂಡ ವಾಹನದ ಮೂಲಕ ವಿಜಯೋತ್ಸವದ ಮೆರವಣಿಗೆ ನಡೆಸಿ ಸೈನಿಕ ಶಾಲೆಗೆ ಕರೆತರಲಾಯಿತು. ವಿಜಯೋತ್ಸವದ ಮೆರವಣಿಗೆಗೆ ಚಾಲನೆಯನ್ನು ಕೊಡಗು ಸೈನಿಕ ಶಾಲೆ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ವಿದ್ಯಾರ್ಥಿಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು.
ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಸೈನಿಕ ಶಾಲೆಯ ಜೂನಿಯರ್, ಸಬ್ ಜೂನಿಯರ್, ಮತ್ತು ಬಾಲಕಿಯರ ತಂಡಗಳಾಗಿ ಒಟ್ಟು 48 ವಿದ್ಯಾರ್ಥಿಗಳು 3 ತಂಡವಾಗಿ ಭಾಗವಹಿಸಿದ್ದರು.
ಇದರಲ್ಲಿ ಬಾಲಕರ ಜೂನಿಯರ್ ತಂಡವು ರಾಷ್ಟ್ರಮಟ್ಟದ ಸೈನಿಕ ಶಾಲೆ ವಿಭಾಗದಲ್ಲಿ ಇದೇ ಪ್ರಥಮ ಬಾರಿಗೆ ದ್ವಿತೀಯ ಸ್ಥಾನವನ್ನು ಗಳಿಸಿ ಪಂದ್ಯಾವಳಿಯಲ್ಲಿ ಪ್ರಶಸ್ತಿ ಮತ್ತು ಟ್ರೋಫಿ ಯನ್ನು ತನ್ನಾದಗಿಸಿಕೊಂಡಿದೆ. ತಂಡದ ತರಬೇತುದಾರರಾಗಿ ಶೇಖ್ಅಜೀಜ್ ರವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಮೆರವಣಿಗೆಯ ಸಂದರ್ಭದಲ್ಲಿ ಶಾಲೆಯ 600 ವಿದ್ಯಾರ್ಥಿಗಳು, ಉಪ ಪ್ರಾಂಶುಪಾಲರು ಸೇರಿದಂತೆ ಉಪನ್ಯಾಸಕ ವೃಂದ, ಬೋಧಕ ವರ್ಗ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಮೆರವಣಿಗೆಯಲ್ಲಿ ವಿದ್ಯಾರ್ಥಿಗಳಿಂದ ಡೊಳ್ಳು ಕುಣಿತ, ತಮಟೆ ವರಸೆ, ಕೊಡವ ವಸ್ತ್ರ ಧರಿಸಿದ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಕೂಡಿಗೆ ಸಾರ್ವಜನಿಕರು, ಮಾಲೀಕರು ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ವಿಜಯೋತ್ಸವದ ಸಂದರ್ಭದಲ್ಲಿ ಅಲಂಕಾರದ ವಾಹನದಲ್ಲಿದ್ದ ವಿದ್ಯಾರ್ಥಿಗಳಿಗೆ ಹೂಮಾಲೆಗಳನ್ನು ಹಾಕಿ ಗೌರವಿಸಿದರು.
ಬ್ರೇಕಿಂಗ್ ನ್ಯೂಸ್
- ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
- ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
- ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
- ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
- ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
- ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
- ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
- ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ


