#ವ್ಯಕ್ತಿ_ಮೇಲೆ_ಕರಡಿ_ದಾಳಿ
ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಪೊನ್ನಂಪೇಟೆ ತಾಲೂಕು, ಬಾಳಲೆ ಸಮೀಪದ ಜಾಗಲೆ ಎಂಬಲ್ಲಿ ನಡೆದಿದೆ. ಅಳಮೇಂಗಡ ಬಿದ್ದಪ್ಪ ಎಂಬುವವರ ತೋಟದ ಲೈನ್ ಮನೆಯಲ್ಲಿ ವಾಸಿಸುತ್ತಿರುವ ಕಾಕು ಎಂಬುವರ ಪುತ್ರ ಕುಳ್ಳ ಎಂಬುವವರು ಕರಡಿ ದಾಳಿಗೆ ಒಳಗಾದವರಾಗಿದ್ದಾರೆ.
ನೆನ್ನೆ ರಾತ್ರಿ 11 ಗಂಟೆ ಸಮಯದಲ್ಲಿ ಮನೆಯ ಹೊರಗಡೆ ಬಂದಿದ್ದ ಸಂದರ್ಭ ಕುಳ್ಳರವರ ಮೇಲೆ ಎರಗಿರುವ ಕರಡಿ ಮುಖದ ಭಾಗಕ್ಕೆ ಹೆಚ್ಚಿನ ಗಾಯಗೊಳಿಸಿದೆ. ಗೋಣಿಕೊಪ್ಪಲು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

