ಮಡಿಕೇರಿ : ಮುಖ್ಯಮಂತ್ರಿ ಸಿದ್ದರಾಮಯ್ಯ  ದೆಹಲಿಯಲ್ಲಿ ಇಂದು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಆಯೋಜಿಸುವ ಕುರಿತು ಚರ್ಚೆ ನಡೆಸಿದರು.

ಇದೇ ವೇಳೆ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಮಾಲೋಚನೆ ನಡೆಸಿದರು.

ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರು ಹಾಜರಿದ್ದರು.

Exit mobile version