ಮಡಿಕೇರಿ-ನಾಪೋಕ್ಲು-ವಿರಾಜಪೇಟೆ ಮಾರ್ಗ ಬಸ್ ಸಂಚಾರಕ್ಕೆ ಎ.ಎಸ್.ಪೊನ್ನಣ್ಣ ಚಾಲನೆ

ಮಡಿಕೇರಿ :-ಮಡಿಕೇರಿ-ನಾಪೋಕ್ಲು-ಯಡಪಾಲ-ಕೆದಮುಳ್ಳೂರು-ವಿರಾಜಪೇಟೆ ಮಾರ್ಗ ಮೈಸೂರಿಗೆ ಹಾಗೆಯೇ ಮೈಸೂರು-ವಿರಾಜಪೇಟೆ-ಕೆದಮುಳ್ಳೂರು-ಯಡಪಾಲ-ನಾಪೋಕ್ಲು-ಮಡಿಕೇರಿ ಮಾರ್ಗದ ಕೆಎಸ್‍ಆರ್‍ಟಿಸಿ ಬಸ್ ಸಂಚಾರಕ್ಕೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಬುಧವಾರ ಚಾಲನೆ ನೀಡಿದರು.
ನಾಪೋಕ್ಲುವಿನಲ್ಲಿ ಚಾಲನೆ ನೀಡಿ ಮಾತನಾಡಿದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಬೆಳಗ್ಗೆ 7 ಗಂಟೆಗೆ ಮಡಿಕೇರಿಯಿಂದ ಹೊರಟು ನಾಪೋಕ್ಲು-ಯಡಪಾಲ-ಕೆದಮುಳ್ಳೂರು-ವಿರಾಜಪೇಟೆ ಮಾರ್ಗ ಮೈಸೂರಿಗೆ ತೆರಳಿ ಮತ್ತೆ ಅದೇ ಮಾರ್ಗದಲ್ಲಿ ಸಂಚರಿಸಲಿದೆ ಎಂದು ಹೇಳಿದರು.
ಹಲವು ವರ್ಷಗಳಿಂದ ಇಲ್ಲಿನ ಸ್ಥಳೀಯರು ಕೆಎಸ್‍ಆರ್‍ಟಿಸಿ ಬಸ್ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದ್ದರು, ಈ ಹಿನ್ನೆಲೆ ಸಾರ್ವಜನಿಕರ ಬೇಡಿಕೆ ಈಡೇರಿದೆ ಎಂದು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು.
ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಕರಾದ ಅಮರಲಿಂಗಯ್ಯ, ವಿಭಾಗೀಯ ಸಂಚಲನಾಧಿಕಾರಿ ಜಯ ಶಾಂತಕುಮಾರ್, ಮಡಿಕೇರಿ ಕೆಎಸ್‍ಆರ್‍ಟಿಸಿ ಘಟಕದ ವ್ಯವಸ್ಥಾಪಕರಾದ ಎಂ.ಮೆಹಬೂಬ್ ಅಲಿ ಇತರರು ಇದ್ದರು.
ಇದೇ ಸಂದರ್ಭದಲ್ಲಿ ಗ್ರಾ.ಪಂ.ವತಿಯಿಂದ ನಿರ್ಮಾಣ ಮಾಡಿರುವ ಬಸ್ ನಿಲ್ದಾಣವನ್ನು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ನಾಪೋಕ್ಲು ಗ್ರಾ.ಪಂ.ಅಧ್ಯಕ್ಷರಾದ ವನಜಾಕ್ಷಿ, ಉಪಾಧ್ಯಕ್ಷರಾದ ಶಶಿ ಮಂದಣ್ಣ, ಪಿಡಿಒ ಚೋಂದಕ್ಕಿ, ಸದಸ್ಯರು ಇತರರು ಇದ್ದರು.
ಬ್ರೇಕಿಂಗ್ ನ್ಯೂಸ್
- ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್
- ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ
- ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
- ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
- ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
- “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
- ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
- ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ


