Close Menu
Kodagu News
    ಹೊಸ ಸುದ್ದಿ

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    • ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    • ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಜಿಲ್ಲಾಡಳಿತದಿಂದ ಶಿವಶರಣ ಅಡಪದ ಅಪ್ಪಣ್ಣ ಜಯಂತಿ
    ಜಿಲ್ಲೆ

    ಜಿಲ್ಲಾಡಳಿತದಿಂದ ಶಿವಶರಣ ಅಡಪದ ಅಪ್ಪಣ್ಣ ಜಯಂತಿ

    ಮಡಿಕೇರಿ:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರಿಗೆ ಶಿವಶರಣ ಹಡಪದ ಅಪ್ಪಣ್ಣ ಅವರು ಆತ್ಮೀಯರಾಗಿ, ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ ಎಂದು ಕುಶಾಲನಗರದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಕೆ.ಎ.ಸೌಮ್ಯ ಅವರು ತಿಳಿಸಿದ್ದಾರೆ.
    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
    ಶರಣರು 12ನೇ ಶತಮಾನದಲ್ಲಿ ತಮ್ಮ ವಚನಗಳ ಮೂಲಕ ಸಾಮಾಜಿಕ ಬದಲಾವಣೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ಆ ನಿಟ್ಟಿನಲ್ಲಿ ಬಸವಣ್ಣನವರ ಜೊತೆಗೂಡಿ ಹಡಪದ ಅಪ್ಪಣ್ಣ ಅವರು ಸಮಾಜ ಸುಧಾರಣೆಗೆ ಪ್ರಯತ್ನಿಸಿದ್ದಾರೆ ಎಂದು ನುಡಿದರು.
    ಹಡಪದ ಅಪ್ಪಣ್ಣ ಅವರು 12ನೇ ಶತಮಾನದಲ್ಲಿ ಧಾರ್ಮಿಕ, ಸಾಮಾಜಿಕವಾಗಿ ಎಲ್ಲರನ್ನು ಮೇಲೆತ್ತುವಲ್ಲಿ ಶ್ರಮಿಸಿದ್ದಾರೆ. ಎಲ್ಲರಿಗೂ ಸಮಾನತೆ ಕಲ್ಪಿಸಲು ಶ್ರಮಿಸಿದ್ದಾರೆ. ಕಂದಾಚಾರವನ್ನು ಗಟ್ಟಿಯಾಗಿ ಪ್ರಶ್ನಿಸುವ ಮೂಲಕ ಅಸಮಾನತೆ ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದರು.
    ಹಡಪದ ಅಪ್ಪಣ್ಣ ಅವರ ಕಾಲ ಕ್ರಿ.ಶ.1160 ಎಂದು ಗುರುತಿಸಲಾಗಿದ್ದು, ವಿಜಯಪುರ ಜಿಲ್ಲೆಯ ಬಸವನ ಬಾಗೆವಾಡಿಯ ಬಸಬೀನಾಳ ಅವರ ಜನ್ಮ ಸ್ಥಳವಾಗಿದೆ ಎಂದು ತಿಳಿಸಿದರು.
    ಹಡಪದ ಅಪ್ಪಣ್ಣ ಅವರ ಇಷ್ಟದೇವರು ಬಸವಪ್ರಿಯ ಕೂಡಲ ಚೆನ್ನಬಸವಣ್ಣ ಎಂಬ ಅಂಕಿತ ನಾಮದ ಮೂಲಕ 250 ಕ್ಕೂ ಹೆಚ್ಚು ವಚನಗಳನ್ನು ಬರೆದಿದ್ದಾರೆ. ಆ ದಿಸೆಯಲ್ಲಿ ವಚನ ಚಳುವಳಿಗೆ ಮಹತ್ತರ ಕೊಡುಗೆ ನೀಡಿದ್ದಾರೆ ಎಂದು ಸೌಮ್ಯ ಹೇಳಿದರು.
    ಹಡಪ ಎಂದರೆ ಚೀಲ ಎಂದರ್ಥ, ಕಾಯಕವೇ ಕೈಲಾಸ ಎಂಬಂತೆ ಚೀಲದಲ್ಲಿ ಉಪಕರಣ ಇಟ್ಟುಕೊಂಡು ವೃತ್ತಿ ನಡೆಸಿಕೊಂಡು ಹೋಗುತ್ತಿದ್ದರು. ಅನುಭವ ಮಂಟಪದಲ್ಲಿ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಬಲಗೈ ಬಂಟನಂತಿದ್ದು ಹಡಪದ ಅಪ್ಪಣ್ಣ ಅವರು ಕಾರ್ಯನಿರ್ವಹಿಸಿದ್ದಾರೆ ಎಂದರು.
    ಹಡಪದ ಅಪ್ಪಣ್ಣ ಅವರು ತಮ್ಮ ಜೀವಿತ ಅವಧಿಯಲ್ಲಿ ಬಸವಣ್ಣನವರಿಗೆ ಹತ್ತಿರವಾಗಿದ್ದರು. ನಡೆ ನುಡಿಯಲ್ಲಿ ಬದುಕಿನಲ್ಲಿ ಆದರ್ಶಮಯವಾಗಿದ್ದರು ಎಂದು ಹೇಳಿದರು.

    ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಮಾತನಾಡಿ 12ನೇ ಶತಮಾನದಲ್ಲಿ ಬಸವಣ್ಣನವರ ಜೊತೆ ಎಲ್ಲಾ ಸಮಾಜದವರು ಸೇರಿ ಸಾಮಾಜಿಕ ಕ್ರಾಂತಿಯನ್ನು ಉಂಟು ಮಾಡಿದರು. ಸಮ ಸಮಾಜ ನಿರ್ಮಾಣಕ್ಕೆ ಎಲ್ಲಾ ವಚನಕಾರರು ಶ್ರಮಿಸಿದ್ದಾರೆ ಎಂದು ತಿಳಿಸಿದರು.
    ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ ಶಿವಶರಣ ಹಡಪದ ಅಪ್ಪಣ್ಣ ಅವರ ಆದರ್ಶಗಳನ್ನು ತಿಳಿದುಕೊಳ್ಳುವಂತಾಗಬೇಕು. ಬಸವಣ್ಣನವರಿಗೆ ಆತ್ಮೀಯರಾಗಿದ್ದ ಹಡಪದ ಅಪ್ಪಣ್ಣ ಅವರು ಮೌಢ್ಯತೆ ಮತ್ತು ಕಂದಾಚಾರ ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದರು.

    ವೈಚಾರಿಕತೆ ಹಾಗೂ ವೈಜ್ಞಾನಿಕತೆಗೆ ಒತ್ತು ನೀಡಿದ್ದ ಹಡಪದ ಅಪ್ಪಣ್ಣ ಅವರು ಅನುಭವ ಮಂಟಪದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು ಎಂದು ನುಡಿದರು.
    ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೆ.ಎಸ್.ದೊರೇಶ್, ತಹಶೀಲ್ದಾರರಾದ ಪ್ರವೀಣ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪ ಯೋಜನಾ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಮಣಜೂರು ಮಂಜುನಾಥ್, ಬಿ.ಸಿ.ಶಂಕರಯ್ಯ, ರಮ್ಯ, ಇತರರು ಇದ್ದರು.

    Previous Articleಮಡಿಕೇರಿಯಲ್ಲಿ ಮಕ್ಕಳ ಕಲಾ ಪ್ರತಿಭೆ
    Next Article ಕೊಡಗಿನ ಕಾಫಿಯ ಸುವಾಸನೆ ಆಸ್ಟ್ರೇಲಿಯಾದಲ್ಲೂ: ಶಾಸಕ ಮಂತರ್ ಸಭೆ

    Related Posts

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.