Close Menu
Kodagu News
    ಹೊಸ ಸುದ್ದಿ

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    • ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    • ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಮಡಿಕೇರಿಯಲ್ಲಿ ಮಕ್ಕಳ ಕಲಾ ಪ್ರತಿಭೆ
    ಜಿಲ್ಲೆ

    ಮಡಿಕೇರಿಯಲ್ಲಿ ಮಕ್ಕಳ ಕಲಾ ಪ್ರತಿಭೆ

    ಮಕ್ಕಳ ಕಲಾ ಪ್ರತಿಭೆ
    ***********
    ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಡಿಕೇರಿ ತಾಲ್ಲೂಕು ಬಾಲಭವನ ಸಮಿತಿ ಕೊಡಗು ಇವರ ಸಹಯೋಗದಲ್ಲಿ 2025-26ನೇ ಸಾಲಿನ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮವು ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆಯಿತು.
    ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಕೃಷ್ಣಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಕ್ಕಳು ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಕುರಿತು ಹೆಚ್ಚು ಗಮನ ಹರಿಸಬೇಕು. ಈ ಯುಗದಲ್ಲಿ ಮೊಬೈಲ್ ಪೋನ್‍ಗಳು ಸರ್ವವ್ಯಾಪಿಯಾಗಿವೆ. ಸಂವಹನ, ಮನರಂಜನೆ ಮತ್ತು ಮಾಹಿತಿ ಪ್ರವೇಶಕ್ಕೆ ಅನಿವಾರ್ಯ ಸಾಧನಗಳಾಗಿ ಕಾರ್ಯನಿರ್ವಹಿಸುತ್ತಿವೆ. ಈ ಸಾಧನಗಳು ಹಲವಾರು ಪ್ರಯೋಜನಗಳನ್ನು ನೀಡುತ್ತವೆಯಾದರೂ, ಅವುಗಳ ಸಂಭಾವ್ಯ ಋಣಾತ್ಮಕ ಪರಿಣಾಮ ಗುರುತಿಸುವುದು ಅತ್ಯಗತ್ಯ, ವಿಶೇಷವಾಗಿ ವಿದ್ಯಾರ್ಥಿಗಳ ಮೇಲೆ, ಶೈಕ್ಷಣಿಕ ಕಾರ್ಯಕ್ಷಮತೆಯಿಂದ ಹಿಡಿದು ಮಾನಸಿಕ ಮತ್ತು ದೈಹಿಕ ಆರೋಗ್ಯದವರೆಗೆ, ಈ ಮೊಬೈಲ್ ಪೆÇೀನ್ ಪರಿಣಾಮ ಬೀರುತ್ತದೆ. ಮಕ್ಕಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಓದಿನಲ್ಲಿ ಹೆಚ್ಚಾಗಿ ಆಸಕ್ತಿ ವಹಿಸಬೇಕು ಎಂದರು.
    ನಂತರ ಮಕ್ಕಳ ಕಲಾಪ್ರತಿಭೆ ಕಾರ್ಯಕ್ರಮದಲ್ಲಿ ಪ್ರಬಂಧ ಬರೆಯುವ ಸ್ಪರ್ದೆಯಲ್ಲಿ ವಿಜೇತರಾದ ಮಕ್ಕಳಿಗೆ ಶುಭ ಹಾರೈಸಿದರು.
    ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷ್ಮೀ ಅವರು ಮಾತನಾಡಿ ಕಾರ್ಯಕ್ರಮದಲ್ಲಿ ಮಕ್ಕಳಿಗೆ 1098 ಮಕ್ಕಳ ಸಹಾಯವಾಣಿ ಕುರಿತು ಮಾಹಿತಿ ನೀಡಿದರು ಹಾಗೂ ಇತ್ತೀಚಿನ ದಿನಗಳಲ್ಲಿ ಮಕ್ಕಳ ಅಪಹರಣ ಕುರಿತು ಮಾಹಿತಿ ನೀಡಿದರು.
    ಅಪರಿಚಿತ ವ್ಯಕ್ತಿಯವರು ಮಕ್ಕಳಿಗೆ ಸಿಹಿ ತಿಂಡಿ ನೀಡಿ ಮಕ್ಕಳನ್ನು ಅಪಹರಿಸುತ್ತಾರೆ. ಇದರಿಂದ ಎಲ್ಲ ಮಕ್ಕಳು ಜಾಗರೂಕತೆಯಿಂದ ಇರಬೇಕು ಎಂದು ತಿಳಿಸಿದರು.
    ಹಾಗೆಯೇ ಮುಂದಿನ ದಿನಗಳಲ್ಲಿ ಮಕ್ಕಳು ಜಿಲ್ಲಾ ಬಾಲಭವನ ಹಾಗೂ ತಾಲ್ಲೂಕು ಬಾಲಭವನದಿಂದ ಏರ್ಪಡಿಸುವ ಮಕ್ಕಳ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
    ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೆಗೌಡ ಅವರು ಮಾತನಾಡಿ ಮಕ್ಕಳು ಬಾಲ್ಯದಲ್ಲಿಯೇ ಮಕ್ಕಳಲ್ಲಿರುವ ಸೃಜನಾತ್ಮಕ ಕಲೆಯನ್ನು ವೃದ್ಧಿಸಲು ಇಂತಹ ಕಾರ್ಯಕ್ರಮ ಸಹಾಯವಾಗಲಿದೆ. ಮಕ್ಕಳಿಗೆ ಆಟ-ಪಾಠಗಳ ಜೊತೆಗೆ ನೃತ್ಯ, ಸಾಂಸ್ಕøತಿಕ ಕಲೆ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಜಿಲ್ಲಾ, ತಾಲ್ಲೂಕು ಬಾಲಭವನ ವತಿಯಿಂದ ಆಯೋಜಿಸುವ ಕಾರ್ಯಕ್ರಮಗಳು ಪ್ರೇರಣೆಯಾಗುತ್ತವೆ. ಮಕ್ಕಳ ಬೌದ್ಧಿಕ ವಿಕಾಸದೊಂದಿಗೆ ಭವಿಷ್ಯದ ಜೀವನಕ್ಕೆ ಮಾದರಿಯಾಗುತ್ತದೆ ಎಂದರು.
    ಹಾಗೆಯೇ ಸ್ಪರ್ದೆಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ 05-16 ವರ್ಷದ ಮಕ್ಕಳಿಗೆ ಪ್ರಬಂಧ ಸ್ಪರ್ಧೆಯನ್ನು ಅಯೋಜಿಸಿದ್ದು, 100ಕ್ಕೂ ಅಧಿಕ ಮಕ್ಕಳು ಭಾಗವಹಿಸಿದರು. ವಿಜೇತರಾದ ಮಕ್ಕಳು ಹಾಗೂ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಪ್ರಮಾಣ ಪತ್ರ ಹಾಗೂ ಪೆನ್ನುಗಳನ್ನು ವಿತರಿಸಲಾಯಿತು.
    ಪಿ.ಎಂ.ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರಾದ ಸುಶೀಲ ಅವರು ಸ್ವಾಗತಿಸಿದರು. ಕೇಶಿನಿ ಕಾರ್ಯಕ್ರಮ ನಿರೂಪಿಸಿದರು. ಹರೀಶ್ ಹಾಗೂ ಪೂಜಾ ಜಿಲ್ಲಾ ಬಾಲಭವನ ಸಿಬ್ಬಂದಿ ವರ್ಗ ಹಾಗೂ ಶಾಲಾ ಶಿಕ್ಷಕರ ವೃಂದದವರು ಹಾಜರಿದ್ದರು.

    Previous Articleವಸತಿ ಕಲ್ಪಿಸುವ ಕುರಿತು ಶಾಸಕ ಪೊನ್ನಣ್ಣ ಸಭೆ
    Next Article ಜಿಲ್ಲಾಡಳಿತದಿಂದ ಶಿವಶರಣ ಅಡಪದ ಅಪ್ಪಣ್ಣ ಜಯಂತಿ

    Related Posts

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.