ಬೆಂಗಳೂರು

ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸಿಲುಕಿ 11 ಜನ ಮೃತಪಟ್ಟಿದ್ದ ದುರಂತದ ತನಿಖೆಗಾಗಿ, ಸರಕಾರ ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಡಿ’ಕುನ್ಹ ರವರು ಏಕ ಸದಸ್ಯ ಆಯೋಗದ ವರದಿಯನ್ನು ಇಂದು ಮಾನ್ಯ ಮುಖ್ಯಮಂತ್ರಿಗಳದ ಸಿದ್ದರಾಮಯ್ಯ ರವರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ನಜೀರ್ ಅಹ್ಮದ್, ಸರಕಾರದ ಮುಖ್ಯ ಕಾರ್ಯದರ್ಶಿಯವರಾದ ಶಾಲಿನಿ ರಜನೀಶ್‌ ಮತ್ತು ಇತರರು ಉಪಸಿತರಿದ್ದರು.

Exit mobile version