Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ವಿದ್ಯಾರ್ಥಿಗಳ ಶಿಕ್ಷಣದಲ್ಲಿ ಗುರುಗಳ ಪಾತ್ರ ಅಮೂಲ್ಯ – ಮಂತರ್ ಗೌಡ
    ಜಿಲ್ಲೆ

    ವಿದ್ಯಾರ್ಥಿಗಳ ಶಿಕ್ಷಣದಲ್ಲಿ ಗುರುಗಳ ಪಾತ್ರ ಅಮೂಲ್ಯ – ಮಂತರ್ ಗೌಡ

    ಸೋಮವಾರಪೇಟೆ :-ವಿದ್ಯಾರ್ಥಿಗಳ ಶಿಕ್ಷಣದಲ್ಲಿ ಗುರುಗಳ ಪಾತ್ರ ಅಮೂಲ್ಯವಾದದ್ದು. ಪೋಷಕರು ವಿದ್ಯಾರ್ಥಿಗಳಿಗೆ ಮೊದಲ ಗುರುಗಳು ಎಂದು ಶಾಸಕ ಮಂತರ್ ಗೌಡ ಹೇಳಿದರು.
    ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ಘಟಕದ ವತಿಯಿಂದ ಇಲ್ಲಿನ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ
    2024-25ನೇ ಸಾಲಿನ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
    ಗುರುಗಳೇ ವಿದ್ಯಾರ್ಥಿಗಳಿಗೆ ದಾರಿ ತೋರಿಸುವ ದೀಪ,ವಿದ್ಯಾರ್ಥಿಗಳ ಜೀವನದಲ್ಲಿ ಗುರುಗಳ ಪಾತ್ರ ಅತ್ಯಂತ ಮಹತ್ವವಾದದ್ದು ಬಾಲ್ಯದಲ್ಲಿ ತಂದೆ-ತಾಯಿಗಳು ಪ್ರಥಮ ಗುರುಗಳು. ಬಳಿಕ ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗುತ್ತಾರೆ, ಎಂದರು.ವಿವಿಧ ಸಂಸ್ಥೆಗಳು ಏರ್ಪಡಿಸುತ್ತಿರುವ ಸಾಧಕರ ಸನ್ಮಾನ ಕಾರ್ಯಕ್ರಮಗಳು ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು. ಧೈರ್ಯ ಮತ್ತು ದೃಢ ನಿರ್ಧಾರ ಇದ್ದರೆ ಯಾವುದೇ ಗುರಿಯನ್ನೂ ಸಾಧಿಸಬಹುದು. ಒಬ್ಬ ಮನುಷ್ಯನಿಗೆ ಆಸೆ ಮತ್ತು ಕನಸುಗಳಿರಲೇಬೇಕು. ಇವುಗಳಿಲ್ಲದಿದ್ದರೆ ಯಶಸ್ಸಿನ ಗುರಿಯತ್ತ ಸಾಗುವುದು ಸಾಧ್ಯವಿಲ್ಲ, ವಿದ್ಯಾರ್ಥಿಗಳು ಪತ್ರಿಕೆಗಳ ಪ್ರಾಮುಖ್ಯತೆಯನ್ನು ಅರಿತುಕೊಳ್ಳಬೇಕು ಎಂದರು. ಪತ್ರಿಕಾ ಹಾಗೂ ಮಾಧ್ಯಮಗಳ ಮೂಲಕ ಸ್ಥಳೀಯ ಸಮಸ್ಯೆಗಳನ್ನು ತೋರಿಸಿದರೆ, ನಾವು ಅವುಗಳನ್ನು ಪ್ರಾಮಾಣಿಕವಾಗಿ ಪರಿಹರಿಸಲು ಬದ್ಧರಾಗಿದ್ದೇವೆ, ಎಂದು ವಿಶ್ವಾಸ ವ್ಯಕ್ತಪಡಿಸಿದರು.
    ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಸಿದ್ದಲಿಂಗಪುರದ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರದ ಪ್ರಧಾನ ಗುರುಗಳಾದ ರಾಜೇಶ್ ನಾಥ್ ಜೀ ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳನ್ನು ಕಟ್ಟುವ ಜವಾಬ್ದಾರಿ ಪತ್ರಿಕಾ ಮಾಧ್ಯಮಗಳ ಮೇಲಿದೆ. ಆ ನಿಟ್ಟಿನಲ್ಲಿ ಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕು ಎಂದರು.
    ಸನ್ಮಾನವು ವ್ಯಕ್ತಿಗೆ ಹೆಚ್ಚು ಜವಾಬ್ದಾರಿ ಒಡ್ಡುತ್ತದೆ. ಇದನ್ನು ಗೌರವದಿಂದ ಸ್ವೀಕರಿಸಿ ಮುಂದಿನ ದಿನಗಳಲ್ಲಿ ಇನ್ನು ಉತ್ತಮ ಸಾಧನೆ ಮಾಡಬೇಕಾಗಿದೆ. ಮಕ್ಕಳಿಗೆ ಗುರಿ ಇರಬೇಕು, ಅವರ ಆಸೆ-ಆಕಾಂಕ್ಷೆಗಳಿಗೆ ತಕ್ಕಂತೆ ಶಿಕ್ಷಣ ನೀಡಬೇಕು. ಪೋಷಕರ ಇಷ್ಟದಂತೆ ಅಲ್ಲ, ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಭಾರತದ ಉತ್ತಮ ಪ್ರಜೆಗಳಾಗಬೇಕು,ಪ್ರತಿಯೊಬ್ಬರೂ ಕನಿಷ್ಠ ಒಂದು ಸಸಿ ನೆಟ್ಟು ಪರಿಸರ ಉಳಿಸಿ, ಸ್ವಚ್ಛತೆಯ ಕುರಿತು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂಬ ಸಂದೇಶವನ್ನು ನೀಡಿದರು.
    ಕೊಡಗು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ ಎಸ್.ಎ.ಮುರುಳಿದರು ಮಾತನಾಡಿ, ಸತತ ಶ್ರಮ ಮತ್ತು ಸಾಧನೆಗಿರುವ ನಿಷ್ಠೆಯೇ ಯಶಸ್ಸಿನ ಮೂಲವಾಗಿದೆ. ವಿದ್ಯಾರ್ಥಿಗಳು ಇಂದು ಓದಿದರೆ ಭವಿಷ್ಯದಲ್ಲಿ ಉತ್ತಮ ಜೀವನ ನಡೆಸಬಹುದು
    ಯಾವುದೇ ಗುರಿ ಸಾಧಿಸಲು ನಿರಂತರ ಶ್ರಮ ಮತ್ತು ತಾಳ್ಮೆಯೇ ಮುಖ್ಯ. ವಿದ್ಯಾರ್ಥಿಗಳು ಪ್ರತಿದಿನವೂ ಓದು ಹಾಗೂ ಅಧ್ಯಯನದಲ್ಲಿ ತೊಡಗಿದರೆ, ಮುಂದಿನ ದಿನಗಳಲ್ಲಿ ಉತ್ತಮ ಉದ್ಯೋಗ, ನೈತಿಕ ಬದುಕು ಮತ್ತು ಸಮೃದ್ಧ ಭವಿಷ್ಯ ಸಾಧ್ಯವಾಗುತ್ತದೆ” ಎಂದರು.
    ಐಎಎಸ್, ಐಪಿಎಸ್, ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಭಾಗವಹಿಸಲು ಇಚ್ಛೆ ಪಟ್ಟ ವಿದ್ಯಾರ್ಥಿಗಳಿಗೆ ನಮ್ಮ ಸಂಘದಿಂದ ಸಹಕಾರ ಹಾಗೂ ಸಲಹೆ ನೀಡಲಾಗುವುದು ಎಂದು ಅವರು ಈ ಸಂದರ್ಭ ಮಾಹಿತಿ ನೀಡಿದರು.
    ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ನೀಟ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 84 ನೇ ರ‌್ಯಾಂಕ್ ಹಾಗೂ ಕರ್ನಾಟಕ ರಾಜ್ಯಕ್ಕೆ 7 ನೇ ರ‌್ಯಾಂಕ್ ಪಡೆದು ಸಾಧನೆ ಮಾಡಿದ ಚೌಡ್ಲು ಗ್ರಾಮದ ಕೆ.ಜಿ.ನಿಧಿ ಅವರನ್ನು ಸನ್ಮಾನಿಸಲಾಯಿತು ಹಾಗೆ ಎಸ್ ಎಸ್ ಎಲ್ ಸಿ ಯಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆಯ ಎಸ್.ಆದ್ವಿ, ಸೋಮವಾರಪೇಟೆಯ ಸೆಂಟ್ ಜೋಸೆಫ್ ಶಾಲೆಯ ಲಿಸ್ಮ ಡಯಾಸ್, ದ್ವಿತೀಯ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ಶನಿವಾರಸಂತೆಯ ಸೇಕ್ರೆಟ್ ಅರ್ಟ್ ಪದವಿ ಪೂರ್ವ ಕಾಲೇಜಿನ ಡಿ.ತೇಜಸ್ವಿನಿ, ಗರಗಂದೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಏನ್.ಎಂ ದರ್ಶನ್, ಅವರನ್ನು ಸನ್ಮಾನಿಸಲಾಯಿತು. ವಾಣಿಜ್ಯ ವಿಭಾಗದಲ್ಲಿ ಸೋಮವಾರಪೇಟೆ ಸೆಂಟ್ ಜೋಸೆಫ್ ಕಾಲೇಜಿನ ವಿದ್ಯಾರ್ಥಿ ಎಸ್.ಎಂ.ಧನ್ಯ, ಶನಿವಾರ ಸಂತೆಯ ವಿಘ್ನೇಶ್ವರ ಪದವಿ ಪೂರ್ವ ಕಾಲೇಜಿನ ಸಿ.ಎಲ್.ಸುಚಿತ್ರ, ಕಲಾ ವಿಭಾಗದಲ್ಲಿ ಶನಿವಾರಸಂತೆಯಲ್ಲಿ ವಿಘ್ನೇಶ್ವರ ಪದವಿ ಪೂರ್ವ ಕಾಲೇಜಿನ ನಾಸಿಯ, ಮಾದಾಪುರದ ಶ್ರೀಮತಿ ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ದಿಲ್ಸಾನ ಅವರುಗಳನ್ನು ಸನ್ಮಾನಿಸಲಾಯಿತು.
    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೆಚ್.ಆರ್.ಹರೀಶ್ ವಹಿಸಿದ್ದರು.
    ಕೊಡಗು ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅನಿಲ್.ಹೆಚ್.ಟಿ ಪ್ರಾಸ್ತವಿಕವಾಗಿ ಮಾತನಾಡಿದರು. ಕವನ್ ಕಾರ್ಯಪ್ಪ ಕಾರ್ಯಕ್ರಮ ನಿರೂಪಿಸಿದರು
    ಕರವೇ ಜಿಲ್ಲಾಧ್ಯಕ್ಷ ಕೆ.ಏನ್. ದೀಪಕ್,ಸೋಮವಾರಪೇಟೆ ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷ ಚಕ್ರವರ್ತಿ ಸುರೇಶ್, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷೇ ಶರ್ಮಿಳಾ ರಮೇಶ್ , ಚುಟುಕು ಸಾಹಿತ್ಯ ಪರಿಷತ್ ನ ಜಿಲ್ಲಾ ಅಧ್ಯಕ್ಷೆ ರುಬಿನಾ, ಡಿ.ಪಿ. ಲೋಕೇಶ್, ಸುರೇಶ್ ಬಿಳಿಗೇರಿ, ದುಷ್ಯಂತ್, ವಸಂತ್ ಸೇರಿದಂತೆ ಹಲವರಿದ್ದರು

    Previous Articleವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದ ಪೊಲೀಸರು.
    Next Article ಮೆಟ್ರೋ ಬಳಸಿ ಮತ್ತವರಿಗೆ ಮಾದರಿಯಾದ ಮಂತರ್ ಗೌಡ

    Related Posts

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.