ಜಿಲ್ಲಾಸ್ಪತ್ರೆಯಿಂದ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಇಂದು ಪತ್ತೆ
ಮಡಿಕೇರಿ : ಜುಲೈ 11 ರಂದು ಮಡಿಕೇರಿಯ ಜಿಲ್ಲಾಸ್ಪತ್ರೆಯಿಂದ ಕಾಣೆಯಾದ ವ್ಯಕ್ತಿ 37 ವರ್ಷದ ರಘು ಮೃತದೇಹ ಸರ್ಕಾರಿ ಆಸ್ಪತ್ರೆಯ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸಮೀಪದ ನೀರಿನ ಹೊಂಡದಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅರೇಕಾಡುವಿನಲ್ಲಿ ತಮ್ಮ ತಾಯಿಯೊಂದಿಗೆ ವಾಸವಾಗಿದ್ದ ಮೃತ ರಘು ಪತ್ನಿ ರಾಜೇಶ್ವರಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.


