
ಬಾನುವಾರ ತಡ ರಾತ್ರಿ ಅಧಿಕಾರಿಗಳ ಗಮನ ಸೆಳೆದಿದ್ದ ಕೊಡಗು ನ್ಯೂಸ್
ಭಾರಿ ಸರಕು ವಾಹನಗಳ ಓಡಾಟಕ್ಕೆ ಜಿಲ್ಲೆಯಲ್ಲಿ ನಿಷೇಧ ಇರುವ ಹಿನ್ನೆಲೆಯಲ್ಲಿ ಮರದ ದಿಮ್ಮಿಗಳನ್ನು ತುಂಬಿದ ಮೂರು ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಿದ್ದಾಪುರ ಸಮೀಪದ ಆನಂದಪುರ ಹಂಚಿಕಾಡು ಎಸ್ಟೇಟ್ ನಲ್ಲಿ ಕಾನೂನು ಬಾಹಿರವಾಗಿ ಮರದ ದಿಮ್ಮಿಗಳನ್ನು ಸಾಗಿಸಲು ಯತ್ನಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಮಾಲು ಸಹಿತ ಮೂರು ವಾಹನಗಳನ್ನು ವಶಪಡಿಸಿ ಪ್ರಕರಣ ದಾಖಲಿಸಿದ್ದಾರೆ.
ಬಾನುವಾರ ರಾತ್ರಿ ಮೂರು ಲಾರಿಗಳ ಮೂಲಕ ಮರದ ದಿಮ್ಮಿಗಳನ್ನು ಸಾಗಿಸಲು ತಯಾರಿ ನಡೆಸಲಾಗಿತ್ತು. ಸ್ಥಳೀಯ ಮಹಿಳೆಯೋರ್ವರು ಕೊಡಗು ನ್ಯೂಸ್ ಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಕೊಡಗು ನ್ಯೂಸ್ ತಂಡ ಪ್ರಕರಣವನ್ನು ಸುದ್ದಿ ಮೂಲಕ ಬಯಲಿಗೆಳೆದು ಅಧಿಕಾರಿಗಳ ಗಮನಕ್ಕೆ ತಂದಿತ್ತು.

