ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್‌ ಸಿಬ್ಬಂದಿಯೇ ಮನೆಬಾಗಿಲಿಗೆ ಬರುವಂಥ ವಿನೂತನ ಪರಿಕಲ್ಪನೆಯಾದ ‘ಮನೆ ಮನೆಗೆ ಪೊಲೀಸ್‌’ ಕಾರ್ಯಕ್ರಮಕ್ಕೆ ಈ ದಿನ ನೆಲ್ಲಿಹುದಿಕೇರಿಯಲ್ಲಿ ಚಾಲನೆ ನೀಡಲಾಯಿತು.

ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್
ಮತ್ತು ಸಿಬ್ಬಂದಿಗಳು ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯತಿ ಸದಸ್ಯರು ತೆರಳಿ ಪೊಲೀಸರ ಜನಸ್ನೇಹಿ ಕಾರ್ಯಕ್ರಮವಾಗಿರುವ ಮನೆಬಾಗಿಲಿಗೆ ಪೊಲೀಸರು ತೆರಳಿ ಜನರಲ್ಲಿ ಜಾಗೃತಿ ಮೂಡಿಸಿದರು.

ನಂತರ ಪೊಲೀಸ್ ಸಿಬ್ಬಂದಿಗಳು ಸೈಬರ್ ಅಪರಾಧ, ಮಾದಕ ವಸ್ತು, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಿದರು.

ಮನೆಯಲ್ಲಿರುವವರ ಹೆಸರು ಹಾಗೂ ಮೊಬೈಲ್ ನಂಬರ್ ಪಡೆದುಕೊಳ್ಳಲಾಯಿತು.

ಸಿದ್ದಾಪುರ ಠಾಣಾಧಿಕಾರಿಗಳು, ಪಂಚಾಯತಿ ಅಧ್ಯಕ್ಷ ರು, ಸದಸ್ಯರು ಗ್ರಾಮಸ್ಥರು.
ಹಾಗೂ ಪೊಲೀಸ್ ಸಿಬ್ಬಂದಿಗಳು ಅಭಿಯಾನವನ್ನು ಮುನ್ನಡೆಸಿದರು.

Exit mobile version