ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು ಅವರ ಅಧ್ಯಕ್ಷತೆಯಲ್ಲಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನ ಕಾವೇರಿ ನೀರಾವರಿ ನಿಗಮದ ಕೇಂದ್ರ ಕಚೇರಿಯಲ್ಲಿ ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆಯು ಗುರುವಾರ ನಡೆಯಿತು.
ಹಾರಂಗಿ ಅಚ್ಚುಕಟ್ಟು ಪ್ರದೇಶಗಳ ಸ್ಥಿತಿಗತಿ, ಜಲಾಶಯದ ಪ್ರಸ್ತುತ ನೀರಿನ ಮಟ್ಟದ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆಯಲಾಯಿತು. ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಯೋಜಿತವಾಗಿ ನಾಲೆಗಳಿಗೆ ನೀರು ಹರಿಸುವ ಮೂಲಕ, ಸಮಪರ್ಕವಾಗಿ ನೀರಿನ ನಿರ್ವಹಣೆಯನ್ನು ಮಾಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಸಭೆಯಲ್ಲಿ ಶಾಸಕರಾದ ಎ.ಮಂಜು, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
- ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
- ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ
- ಕುಶಾಲನಗರದಲ್ಲಿ 84ನೇ ಇಎಂಇ ಕಾರ್ಪ್ಸ್ ಡೇ ಸಂಭ್ರಮ
- ಭಾಗಮಂಡಲ, ತಲಕಾವೇರಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾನಂಡ ಪ್ರಥ್ಯು ಆಯ್ಕೆ
- ₹48 ಲಕ್ಷದ ರಸ್ತೆ ನಿರ್ಮಾಣ, ಮಳೆ ನೀರಿಗೆ ಮಾತ್ರ ದಾರಿಯಿಲ್ಲ!
- ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
- ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ

