ಪೊನ್ನಂಪೇಟೆ ತಾಲೂಕು ಟಿ.ಶೆಟ್ಟಿಗೇರಿ ಗ್ರಾಮದ ನೆಮ್ಮಲೆ ಭಾಗಕ್ಕೆ ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಭೇಟಿ ನೀಡಿದರು.
ನೆಮ್ಮಲೆ ಭಾಗದಲ್ಲಿ ನೂತನವಾಗಿ ನಿರ್ಮಿಸಿದ ಅಂಗನವಾಡಿ ಕಟ್ಟಡವನ್ನು ಈ ಸಂದರ್ಭದಲ್ಲಿ ಶಾಸಕರು ಲೋಕಾರ್ಪಣೆ ಮಾಡಿದರು.
ಬಳಿಕ ಮಾತನಾಡಿದ ಶಾಸಕರು, ಅಂಗನವಾಡಿಯಲ್ಲಿ ಕಲಿಯುವ ಪುಟಾಣಿ ಮಕ್ಕಳು ತಮ್ಮ ವಿದ್ಯಾಭ್ಯಾಸ ಹಾಗೂ ಭವಿಷ್ಯವನ್ನು ಇಲ್ಲಿಂದಲೇ ಪ್ರಾರಂಭಿಸುತ್ತಾರೆ. ಆದ್ದರಿಂದ ಅಂಗನವಾಡಿ ಕೇಂದ್ರಗಳು ಮಕ್ಕಳ ಆರಂಭಿಕ ಕಲಿಕೆಗೆ ಉತ್ತಮ ವಾತಾವರಣ ನಿರ್ಮಿಸುವತಾಗಲು ಸರಕಾರ ಹೆಚ್ಚು ಕಾಳಜಿ ವಹಿಸುತ್ತಿದೆ. ಅಂಗನವಾಡಿಯ ಶಿಕ್ಷಕಿಯರು ಮಕ್ಕಳ ವಿದ್ಯಾಭ್ಯಾಸಕ್ಕೆ ಭದ್ರ ಬುನಾದಿ ಆಗುವಂತಹ ಕೆಲಸವನ್ನು ಮಾಡಬೇಕೆಂದು ಇದೇ ಸಂದರ್ಭದಲ್ಲಿ ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ವಲಯ ಅಧ್ಯಕ್ಷರಾದ ತಿತೀರ ಪ್ರಭು, ತಾಲೂಕು ಅಕ್ರಮ ಸಕ್ರಮ ಅಧ್ಯಕ್ಷರಾದ ಲಾಲಾ ಅಪ್ಪಣ್ಣ, ಪಕ್ಷದ ಪ್ರಮುಖರಾದ ಚೋಟೆಯಂಡಮಾಡ ವಿಶು, ಆಲೆಮಾಡ ಸೋಮಣ್ಣ, ಪೆಮ್ಮಂಡ ರಾಜ, ಮುಕಟ್ಟೀರ ಸಂದೀಪ್, ಬಾಲ ಕೃಷ್ಣ, ಬೋಸು, ದಿನೇಶ್, ಮಂಜು, ಕಿರಣ್, ಅನಿಲ್, ಮನು, ಕೃಷ್ಣ, ನಟೇಶ್, ಉದಯ್, ದೀಪು, ಸುರೇಂದ್ರ, ಧರ್ಶನ್, ರವಿ, ಸತೀಶ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Exit mobile version