ರಜೆಯಲ್ಲಿ ಊರಿಗೆ ಬಂದಿದ್ದ, ವಿರಾಜಪೇಟೆ ಕಿರುಮಕ್ಕಿ ನಿವಾಸಿ, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ರವಿಶಂಕರ್ (29) ಅನಾರೋಗ್ಯದಿಂದ ಮೃತಪಟ್ಟ ಸುದ್ದಿ ತಿಳಿದು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಮೃತ ಯೋಧನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಕುಂದಚೀರ ಮಂಜು ದೇವಯ್ಯ, ಶಬೀರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Exit mobile version