Close Menu
Kodagu News
    ಹೊಸ ಸುದ್ದಿ

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಕ್ರೈಂ ನ್ಯೂಸ್»ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್
    ಕ್ರೈಂ ನ್ಯೂಸ್

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    ಸಿದ್ದಾಪುರ ಠಾಣಾ ವ್ಯಾಪ್ತಿಯ ಕೊಂಡಂಗೇರಿ ಗ್ರಾಮ ಪೆರಂಬು ಎಂಬಲ್ಲಿ ವಾಸವಿರುವ ಶ್ರೀಮತಿ ಸಫಾನ ಮತ್ತು ಶ್ರೀಮತಿ ಸಾರಮ್ಮ ಎಂಬುವವರು ಮನೆಯಲ್ಲಿದ್ದ ಸಂದರ್ಭ ದಿನಾಂಕ: 21-07-2025 ರಂದು ಮಧ್ಯಾಹ್ನ ಸುಮಾರು 01.30 ಘಂಟೆ ಸಮಯದಲ್ಲಿ ಅಪರಿಚಿತ ವ್ಯಕ್ತಿಯು ನೀರು ಕೇಳುವ ನೆಪದಲ್ಲಿ ಮನೆಯ ಬಳಿ ಬಂದು ಮಹಿಳೆಯರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿ ಕುತ್ತಿಗೆಯಲ್ಲಿದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕಲಂ: 309(6) ಬಿಎನ್ಎಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಮುನಾವರ್, 26 ವರ್ಷ, ಮೇಕೂರು ಹೊಸ್ಕೆರಿ, ಪಾಲಿಬೆಟ್ಟ ಎಂಬಾತನನ್ನು ದಸ್ತಗಿರಿ ಮಾಡಿ ಕಾನೂನು ಕ್ರಮಕೈಗೊಳ್ಳಲಾಗಿರುತ್ತದೆ.

    ಸದರಿ ಆರೋಪಿ ಮುನಾವರ್‌ನನ್ನು ವಿಚಾರಣೆ ನಡೆಸಿದ್ದು, ಶ್ರೀಮತಿ ಸಫಾನರವರ ಅಕ್ಕನ ಗಂಡನಾದ ಮುಜೀದ್ ಎಂಬಾತನು ಆಟೋ ಚಾಲಕನಾಗಿದ್ದು ಆರ್ಥಿಕ ಸಂಕಷ್ಟದಲ್ಲಿದ್ದರಿಂದ ಆರೋಪಿ ಮುನಾವರ್‌ನೊಂದಿಗೆ ಸೇರಿ ಶೀಘ್ರವಾಗಿ ಹಣ ಮಾಡುವ ಉದ್ದೇಶದಿಂದ ಮುಜೀದ್‌ನ ಪತ್ನಿಯ ತಂಗಿಯಾದ ಶ್ರೀಮತಿ ಸಫಾನ ರವರು ಮನೆಯಲ್ಲಿ ಅತ್ತೆಯೊಂದಿಗೆ ಇಬ್ಬರು ಮಾತ್ರ ಇರುವುದರಿಂದ ಅವರ ಮನೆಯಲ್ಲಿರುವ ಹಣ ಮತ್ತು ಚಿನ್ನ ಭಾರಣಗಳನ್ನು ದರೋಡೆ ಮಾಡಿದರೆ ಅವರು ಘಟನೆ ಕುರಿತು ಮೊದಲು ಅಕ್ಕನ ಗಂಡನಾಗಿರುವುದರಿಂದ ನನಗೆ ತಿಳಿಸುತ್ತಾರೆ. ಆ ಸಂದರ್ಭ ಪೊಲೀಸ್ ಠಾಣೆ & ಕೋರ್ಟ್ ತೆರಳದಂತೆ ಮಾಡಬಹುದಾಗಿದೆ ಎಂದು 15 ದಿನಗಳಿಂದ ಸಂಚು ರೂಪಿಸಿರುತ್ತಾರೆ.

    ದಿನಾಂಕ: 21-07-2025 ರಂದು ಮಧ್ಯಾಹ್ನ ವೇಳೆಯಲ್ಲಿ ಮುಜೀದ್ ಮತ್ತು ಮುನಾವರ್ ಇಬ್ಬರ ಮೊಬೈಲ್ ಫೋನ್ ಅನ್ನು ಸ್ವಿಚ್ ಆಫ್ ಮಾಡಿಕೊಂಡು ಕಾರ್‌ನಲ್ಲಿ ಮುನಾವರ್‌ನನ್ನು ಕೊಂಡಂಗೇರಿಗೆ ಬಿಟ್ಟು ಈ ಮೊದಲೇ ರೂಪಿಸಿದ ಸಂಚಿನಂತೆ ಶ್ರೀಮತಿ ಸಫಾನ ಮತ್ತು ಶ್ರೀಮತಿ ಸಾರಮ್ಮ ಮನೆಯ ಬಳಿ ಬಂದು ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿ ಕುತ್ತಿಗೆಯಲ್ಲಿದ ಚಿನ್ನದ ಸರವನ್ನು ದರೋಡೆ ಮಾಡಿರುತ್ತಾರೆ ಹಾಗೂ ಈ ಕೃತ್ಯಕ್ಕೆ ಸಂಚು ರೂಪಿಸಿದ ಶ್ರೀಮತಿ ಸಫಾನರವರ ಅಕ್ಕನ ಗಂಡನಾದ ಮುಜೀದ್ 2-ಗೌಸ್, 01-ಕತ್ತಿ & 01-ಚಾಕು ಅನ್ನು ನೀಡಿ ಮುನಾವರ್‌ನನ್ನು ಈ ಕೃತ್ಯ ಎಸಗುವಂತೆ ಕಳುಹಿಸಿರುತ್ತಾನೆ ಮತ್ತು ಈ ಕೃತ್ಯದಿಂದ ಸಿಗುವ ಹಣ & ಚಿನ್ನಾಭರಣಗಳನ್ನು ಹಂಚಿಕೊಳ್ಳವ ಬಗ್ಗೆ ನಿರ್ಧರಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿರುತ್ತದೆ.

    ಸದರಿ ಪ್ರಕರಣ ಮಾಸ್ಟರ್ ಮೈಂಡ್ ಆದ ಪಾಲಿಬೆಟ್ಟ ಗ್ರಾಮದ ನಿವಾಸಿ ಆರೋಪಿ ಮುಜೀದ್‌ನನ್ನು ದಿನಾಂಕ: 23-07-2025 ರಂದು ದಸ್ತಗಿರಿ ಮಾಡಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಮತ್ತು ಕೃತ್ಯಕ್ಕೆ ಬಳಸಿದ ಚಾಕು, ಗೌಸ್ ಮತ್ತು ಮಾರುತಿ ವ್ಯಾಗನರ್ ಕಾರನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

    ಸದರಿ ಪ್ರಕರಣದ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಶ್ರೀ ಕೆ.ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ಮತ್ತು ಶ್ರೀ ದಿನೇಶ್ ಕುಮಾರ್.ಬಿ.ಪಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ರವರು ಶ್ಲಾಘಿಸಿರುತ್ತಾರೆ.

    Previous Articleಎಮ್ಮೆಮಾಡುವಿನಲ್ಲಿ ಶಿಕ್ಷಕಿ ಆತ್ಮಹತ್ಯೆ
    Next Article ದೇವರಕೊಲ್ಲಿ ಬಳಿ ಭೀಕರ ಅಪಘಾತ ನಾಲ್ವರು ಸಾವು 

    Related Posts

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.