Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಡುಗೆ ಮನೆ»2 ಲೀಟರ್ ಗಿಂತ ಕಡಿಮೆ ಪ್ರಮಾಣದ ನೀರಿನ ಬಾಟಲ್ ಮಾರಾಟ ಮಾಡದಂತೆÀ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಮನವಿ
    ಅಡುಗೆ ಮನೆ

    2 ಲೀಟರ್ ಗಿಂತ ಕಡಿಮೆ ಪ್ರಮಾಣದ ನೀರಿನ ಬಾಟಲ್ ಮಾರಾಟ ಮಾಡದಂತೆÀ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಮನವಿ

    ಮಡಿಕೇರಿ : ೨ ಲೀಟರ್ ಗಿಂತ ಕಡಿಮೆ ಪ್ರಮಾಣದ ನೀರಿನ ಬಾಟಲ್ ಮಾರಾಟ ಮಾಡದಂತೆÀ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ವರ್ತಕರಲ್ಲಿ ಮನವಿ ಮಾಡಿದೆ.

    ಪತ್ರಿಕಾ ಪ್ರಕಟಣೆ ನೀಡಿರುವ ಚೇಂಬರ್ ಆಫ್ ಕಾಮರ್ಸ್ನ ನಗರಾಧ್ಯಕ್ಷ ಸಂತೋಷ್ ಅಣ್ವೇಕರ್ ಹಾಗೂ ಜಿಲ್ಲಾ ನಿರ್ದೇಶಕ ಧನಂಜಯ ಎಂ. ಅವರು ಸ್ವಚ್ಛ ಪರಿಸರಕ್ಕಾಗಿ ೨ ಲೀಟರ್ ಗಿಂತ ಕಡಿಮೆ ಪ್ರಮಾಣದ ನೀರಿನ ಬಾಟಲ್ ಮಾರಾಟ ಮಾಡದಂತೆ ಸಗಟು ವ್ಯಾಪಾರಸ್ಥರು ಹಾಗೂ ಚಿಲ್ಲರೆ ಮಾರಾಟ ಅಂಗಡಿ ಮಾಲೀಕರಲ್ಲಿ ಕಳೆದ ಜನವರಿಯಿಂದ ಮನವಿ ಮಾಡಿಕೊಳ್ಳಲಾಗಿದೆ. ಇದೇ ಆ.೧ ರಿಂದ ಈ ನೀರಿನ ಬಾಟಲಿಗಳ ಮಾರಾಟವನ್ನು ನಗರಸಭೆ ಕಡ್ಡಾಯವಾಗಿ ನಿಷೇಧಿಸಿದೆ ಎಂದು ತಿಳಿಸಿದ್ದಾರೆ.

    ೨೦೨೪-೨೫ರ ಪ್ರವಾಸೋದ್ಯಮ ಇಲಾಖೆಯ ಅಂಕಿ ಅಂಶದ ಪ್ರಕಾರ ೪೫ ಲಕ್ಷಕ್ಕೂ ಅಧಿಕ ಪ್ರವಾಸಿಗರು ಮಡಿಕೇರಿ ನಗರಕ್ಕೆ ಭೇಟಿ ನೀಡಿದ್ದಾರೆ. ಕನಿಷ್ಠ ೨೫ ರಿಂದ ೩೦ ಲಕ್ಷ ನೀರಿನ ಬಾಟಲ್ ಮಡಿಕೇರಿ ನಗರ ಒಂದರಲ್ಲೇ ಕಂಡು ಬಂದಿದೆ. ಈ ಬಾಟಲ್ ಗಳು ತೋಡು, ಚರಂಡಿಗಳಲ್ಲಿ, ಕಾಡಿನ ಮಧ್ಯ ಭಾಗದಲ್ಲಿ ಮತ್ತಿತರ ಸಾರ್ವಜನಿಕ ಸ್ಥಳಗಳಲ್ಲಿ ಮರುಬಳಕೆಯಾಗದ ಸ್ಥಿತಿಯಲ್ಲಿ ರಾಶಿ ಬಿದ್ದಿರುವುದನ್ನು ಗಮನಿಸಿದ್ದೇವೆ. ಚರಂಡಿ ಮತ್ತು ತೋಡುಗಳಲ್ಲಿ ನೀರು ಸರಾಗವಾಗಿ ಹರಿಯಲು ಪ್ಲಾಸ್ಟಿಕ್ ಬಾಟಲಿಗಳು ಅಡಚಣೆಯನ್ನುಂಟು ಮಾಡುತ್ತಿವೆ. ಎಲ್ಲೆಂದರಲ್ಲಿ ಬಿದ್ದಿರುವ ಖಾಲಿ ಬಾಟಲಿಗಳಿಂದ ಸೊಳ್ಳೆ, ಕ್ರಿಮಿ, ಕೀಟಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವುದಕ್ಕೂ ಕಾರಣವಾಗುತ್ತಿದೆ.

    ಪರಿಸರದ ಮೇಲೂ ನೀರಿನ ಪ್ಲಾಸ್ಟಿಕ್ ಬಾಟಲಿಗಳು ದುಷ್ಪರಿಣಾಮ ಉಂಟು ಮಾಡುತ್ತಿರುವುದರಿಂದ ಜಿಲ್ಲಾಡಳಿತ ಮತ್ತು ನಗರಸಭೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ವರ್ತಕರು ೨ ಲೀಟರ್ ಗಿಂತ ಕಡಿಮೆ ಪ್ರಮಾಣದ ನೀರಿನ ಬಾಟಲ್ ಮಾರಾಟ ಮಾಡದೆ ಮಡಿಕೇರಿ ನಗರದ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕೆಂದು ಸಂತೋಷ್ ಅಣ್ವೇಕರ್ ಹಾಗೂ ಧನಂಜಯ ಎಂ. ಮನವಿ ಮಾಡಿದ್ದಾರೆ.

    ನಗರದಲ್ಲಿ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಜಿಲ್ಲಾಡಳಿತ, ನಗರಸಭೆ ಹಾಗೂ ವಿವಿಧ ಸಂಘ ಸಂಸ್ಥೆಗಳ ನೆರವಿನೊಂದಿಗೆ ಪರ್ಯಾಯ ವ್ಯವಸ್ಥೆ ಕೈಗೊಳ್ಳಲು ಚೇಂಬರ್ ಆಫ್ ಕಾಮರ್ಸ್ ಮುಂದಾಗಿದೆ. ಈಗಾಗಲೇ ನಗರಸಭಾ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಆಯುಕ್ತರ ಸಮ್ಮುಖದಲ್ಲಿ ನಗರದ ವಿವಿಧ ಭಾಗಗಳಲ್ಲಿ ಸುಮಾರು ೧೦ ಸ್ಥಳಗಳನ್ನು ಗುರುತಿಸಿ ೫೦೦ ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಅಳವಡಿಸಲು ಚಿಂತನೆ ನಡೆದಿದೆ. ಟ್ಯಾಂಕ್ ನ ಕೆಳಭಾಗದಲ್ಲಿ ತಣ್ಣೀರು ಮತ್ತು ಬಿಸಿ ನೀರು ಒದಗಿಸಲು ವಾಟರ್ ಪ್ಯೂರಿಫೈಯರ್ ವ್ಯವಸ್ಥೆಯನ್ನು ಮಾಡಲಾಗುವುದು. ಆದ್ದರಿಂದ ವರ್ತಕರು ಪ್ಲಾಸ್ಟಿಕ್ ಮುಕ್ತ ಮಡಿಕೇರಿ ನಗರದ ಪರಿಕಲ್ಪನೆಗೆ ಬೆಂಬಲ ನೀಡಬೇಕೆಂದು ಕೋರಿದ್ದಾರೆ.

    ನಗರದಲ್ಲಿ ಪ್ಲಾಸ್ಟಿಕ್ ಚೀಲಗಳ ಬಳಕೆಗೆ ನಿಷೇಧವಿದ್ದರೂ ಇತ್ತೀಚಿನ ದಿನಗಳಲ್ಲಿ ಇದರ ಬಳಕೆ ಹೆಚ್ಚಾಗುತ್ತಿದೆ. ನಗರದ ಹಿತದೃಷ್ಟಿಯಿಂದ ವರ್ತಕರು ಹಾಗೂ ಗ್ರಾಹಕರು ಸ್ವಯಂ ಪ್ರೇರಿತರಾಗಿ ಇದಕ್ಕೆ ಕಡಿವಾಣ ಹಾಕಬೇಕು ಎಂದು ತಿಳಿಸಿದ್ದಾರೆ.

    Previous Articleಕುಶಾಲನಗರ ಆರ್ಯವೈಶ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿ.ಆರ್.ನಾಗೇಂದ್ರ ಪ್ರಸಾದ್ ಆಯ್ಕೆ
    Next Article ನಾಲ್ಕನೇ ವರ್ಷದ ಆಟಿ ಹಬ್ಬ

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.