ವಿರಾಜಪೇಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಮಳಿಗೆ, ಎಸ್ ಜೋಯ್ಸ್ ಟವರ್ಸ್ ನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಉದ್ಘಾಟಿಸಿದರು. ಬಳಿಕ ಶುಭ ಕೋರಿದ ಶಾಸಕರು, ವೇಗವಾಗಿ ಬೆಳೆಯುತ್ತಿರುವ ವಿರಾಜಪೇಟೆ ನಗರದ ಜನತೆಯ ಅಗತ್ಯಗಳನ್ನು ಪೂರೈಸಲು ಒಂದೇ ಸಂಕೀರ್ಣದಲ್ಲಿ ಎಲ್ಲಾ ಸವಲತ್ತು ದೊರೆಯುವುದು ತುಂಬಾ ಅನುಕೂಲವಾಗುತ್ತದೆ. ಅಂತಹ ವಾತಾವರಣ ನಿರ್ಮಿಸುವುದು ಸಹ ಒಂದು ಉತ್ತಮ ಚಿಂತನೆಯಾಗಿದೆ. ಈ ವಾಣಿಜ್ಯ ಸಂಕೀರ್ಣವು ಯಶಸ್ಸನ್ನು ಕಾಣುತ್ತಾ ಮತ್ತಷ್ಟು ಅಭಿವೃದ್ಧಿ ಹೊಂದಲಿ ಎಂದು ಇದೇ ಸಂದರ್ಭದಲ್ಲಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಜೋಯ್ಸ್ ಟವರ್ಸ್ ನ ಮಾಲೀಕರು, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ,ಪುರಸಭೆ ಸಾಯಿ ಸಮಿತಿ ಅಧ್ಯಕ್ಷರಾದ ಅಬುದುಲ್ ಜಲಿಲ್,ಪುರಸಭೆ ಸದಸ್ಯರಾದ ರಾಜೇಶ್, ಮತೀನ್, ಪೃಥ್ವಿನಾಥ್, ರಜಿನಿಕಾಂತ್, ಕಾಂಗ್ರೆಸ್ ಮುಖಂಡರಾದ ಜೋಕಿಮ್, ರಾಜೇಶ್ ನಯಾರ್, ಕುಂದಚೀರ ಮಂಜು ದೇವಯ್ಯ, ಎ ವಿ ಮಂಜುನಾಥ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಜಮ್ಮಡ ಸೋಮಣ್ಣ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
- ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
- ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
- ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
- ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
- ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
- ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
- ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ

