Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಸೆಪ್ಟೆಂಬರ್ ಮೊದಲ ವಾರದಲ್ಲಿ ಮುಖ್ಯಮಂತ್ರಿ ಭೇಟಿ; ಡಾ.ಮಂತರ್ ಗೌಡ
    ಅಂತರರಾಷ್ಟ್ರೀಯ

    ಸೆಪ್ಟೆಂಬರ್ ಮೊದಲ ವಾರದಲ್ಲಿ ಮುಖ್ಯಮಂತ್ರಿ ಭೇಟಿ; ಡಾ.ಮಂತರ್ ಗೌಡ

    ಮಡಿಕೇರಿ ದಸರಾ ಸಮಿತಿ ನಿಯೋಗ

    ***************************************************
    ಮಡಿಕೇರಿ ಆ.29(ಕರ್ನಾಟಕ ವಾರ್ತೆ):-ಮಡಿಕೇರಿ ಜನೋತ್ಸವ ದಸರಾವನ್ನು ಸಂಭ್ರಮ, ಸಡಗರ, ಸುರಕ್ಷತೆ ಹಾಗೂ ಸ್ವಚ್ಛತೆಯಿಂದ ಆಚರಿಸಲು ಶುಕ್ರವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
    ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶಾಸಕರಾದ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ದಸರಾ ಸಮಿತಿ ಕಾರ್ಯಾಧ್ಯಕ್ಷರಾದ ಅರುಣ್ ಕುಮಾರ್ ಇತರರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.
    ಸಭೆಯಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಸಂಪ್ರದಾಯದಂತೆ ಹಿಂದಿನಿಂದ ನಡೆದುಕೊಂಡು ಬಂದಿರುವ ಮಡಿಕೇರಿ ದಸರಾವನ್ನು ವ್ಯವಸ್ಥಿತವಾಗಿ ಆಚರಿಸುವಂತಾಗಬೇಕು. ಸುರಕ್ಷತೆಗೆ ಒತ್ತು ನೀಡಬೇಕು ಎಂದರು.

    ಪ್ರತೀ ಮಂಟಪದಲ್ಲಿ ಪೊಲೀಸರನ್ನು ನಿಯೋಜಿಸಬೇಕು. ಕರಗ ಹಾಗೂ ದಶಮಂಟಪಗಳು ಸಾಗುವ ಮಾರ್ಗದ ಗುಂಡಿ ಮುಚ್ಚುವ ಕಾರ್ಯವಾಗಬೇಕು ಎಂದರು.
    ಹಣ ಬಿಡುಗಡೆ ಸಂಬಂಧ ಮುಖ್ಯಮಂತ್ರಿಯವರು, ಕನ್ನಡ ಮತ್ತು ಸಂಸ್ಕøತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಭೇಟಿ ಮಾಡಲು ನಿಯೋಗ ತೆರಳಲಾಗುವುದು ಎಂದು ಡಾ.ಮಂತರ್ ಗೌಡ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
    ವಿದ್ಯುತ್ ಮಾರ್ಗ ಸರಿಪಡಿಸುವುದು ಹಾಗೂ ಬೀಳುವ ಮರಗಳಿದ್ದಲ್ಲಿ ತೆರವುಗೊಳಿಸುವುದು ಮತ್ತಿತರ ಸಂಬಂಧ ಅರಣ್ಯ ಮತ್ತು ಸೆಸ್ಕ್ ಇಲಾಖೆಯವರು ಅಗತ್ಯ ಕ್ರಮಕೈಗೊಳ್ಳುವಂತೆ ಶಾಸಕರು ಸೂಚಿಸಿದರು.
    ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮತ್ತೊಂದು ಸಭೆ ನಡೆಸಲಾಗುವುದು ಎಂದು ಡಾ.ಮಂತರ್ ಗೌಡ ಅವರು ಹೇಳಿದರು.
    ಮಡಿಕೇರಿ ದಸರಾವು ವಿಶಿಷ್ಟ ಹಾಗೂ ವಿಭಿನ್ನವಾಗಿದ್ದು, ಜನರ ಸುರಕ್ಷತೆ, ವಾಹನ ನಿಲುಗಡೆ ಮತ್ತಿತರ ಸಂಬಂಧ ಅಗತ್ಯ ಕ್ರಮಕೈಗೊಳ್ಳಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಡಾ.ಮಂತರ್ ಗೌಡ ಅವರು ನುಡಿದರು.
    ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಡಿಕೇರಿ ದಸರಾವು ನಾಡಿನ ಸಂಸ್ಕøತಿ ಬಿಂಭಿಸುತ್ತದೆ. ಒಳ್ಳೆಯ ರೀತಿಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸುವುದು, ಮಹಿಳಾ, ಮಕ್ಕಳ, ಯುವ ಮತ್ತು ಕ್ರೀಡಾ ದಸರಾ ಆಚರಿಸುವುದು ಸೇರಿದಂತೆ ವಿವಿಧ ರೀತಿಯ ದಸರಾ ಆಚರಿಸುವುದು ವಿಶೇಷವಾಗಿದ್ದು, ಆ ದಿಸೆಯಲ್ಲಿ ಎಲ್ಲರೂ ಸಹಕರಿಸುವಂತೆ ಕೋರಿದರು.
    ಮಡಿಕೇರಿ ದಸರಾದಲ್ಲಿ ನಾಲ್ಕು ಶಕ್ತಿ ದೇವತೆಗಳಿಗೆ ಪೂಜೆ ಸಲ್ಲಿಸಿ ಕರಗ ಉತ್ಸವ ಮೂಲಕ ದಸರಾ ಆಚರಿಸುವುದು ವಿಶೇಷವಾಗಿದೆ. ವೇದಿಕೆ, ಬೆಳಕು, ಧ್ವನಿ ವ್ಯವಸ್ಥೆ ಹೀಗೆ ಹಲವು ರೀತಿಯ ಕಾರ್ಯಕ್ರಮಗಳು ಮಡಿಕೇರಿ ದಸರಾದಲ್ಲಿ ನಡೆಯುತ್ತಿರುವುದು ವಿಶೇಷ. ಆ ನಿಟ್ಟಿನಲ್ಲಿ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಮಡಿಕೇರಿ ದಸರಾಗೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು.
    ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಸೆಸ್ಕ್ ಮತ್ತು ಪೌರಾಡಳಿತ ಇಲಾಖೆ ಅಧಿಕಾರಿಗಳು ಹಿಂದಿನಂತೆ ಸಹಕರಿಸುವಂತೆ ಸೂಚಿಸಿದರು.
    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ರಾತ್ರಿ ವೇಳೆಯಲ್ಲಿ ನಡೆಯುವ ಮಡಿಕೇರಿ ದಸರಾಗೆ ಹೆಚ್ಚಿನ ಜನರು ಆಗಮಿಸುತ್ತಾರೆ. ಆ ನಿಟ್ಟಿನಲ್ಲಿ ಜನರ ಸುರಕ್ಷತೆ ಅತೀ ಮುಖ್ಯ. ಆಸ್ತಿ ಪಾಸ್ತಿ ಹಾನಿಯಾಗದಂತೆ ಗಮನಹರಿಸುವುದು, ವಾಹನ ನಿಲುಗಡೆಗೆ ವ್ಯವಸ್ಥೆ ಮಾಡುವುದು, ಸಾರಿಗೆ ಸಂಚಾರ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದು, ಮತ್ತಿತರ ಕ್ರಮಗಳನ್ನು ಪೊಲೀಸ್ ಇಲಾಖೆ ವಹಿಸಲಿದೆ ಎಂದು ಹೇಳಿದರು.
    ದಶ ಮಂಟಪಗಳ ನಿರ್ಮಾಣ ಸಂಬಂಧ ಪ್ರಾದೇಶಿಕ ಸಾರಿಗೆ ಅಧಿಕಾರಿಯವರಿಂದ ಸುರಕ್ಷತೆಯ ಪ್ರಮಾಣ ಪತ್ರ ಪಡೆಯುವುದು ಅಗತ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಒತ್ತಿ ಹೇಳಿದರು.
    ದಶ ಮಂಟಪಗಳ ಪ್ರದರ್ಶನಕ್ಕೆ ತೆರಳುವಾಗ ಸುರಕ್ಷತೆ ಅತೀ ಮುಖ್ಯವಾಗಿದೆ. ಪ್ರಾದೇಶಿಕ ಸಾರಿಗೆ ಅಧಿಕಾರಿಯವರಿಂದ ಅನುಮತಿ ಪಡೆಯುವಂತಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಸಲಹೆ ಮಾಡಿದರು.
    ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕರಾದ ಡಾ.ಮಂತರ್ ಗೌಡ ಅವರು ಇದುವರೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಯವರಿಂದ ಪ್ರಮಾಣ ಪತ್ರ ಪಡೆಯುವುದಿಲ್ಲ. ಈಗಾಗಲೇ ದಶಮಂಟಪ ಸಮಿತಿಯವರಿಗೆ ಅನುಭವ ಇರುವುದರಿಂದ ಹಿಂದಿನಂತೆಯೇ ನಡೆಸಿಕೊಂಡು ಹೋಗುವಂತಾಗಬೇಕು. ಯಾವುದೇ ರೀತಿ, ಯಾರಿಗೂ ತೊಂದರೆಯಾಗದಂತೆ ಗಮನಹರಿಸಬೇಕು. ಸುರಕ್ಷತೆಗೆ ಒತ್ತು ನೀಡಬೇಕು ಎಂದು ಹೇಳಿದರು.
    ಬಳಿಕ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಜನ ಸಂದಣಿ ಇರುವ ಕಡೆಗಳಲ್ಲಿ ಪಟಾಕಿ ಸಿಡಿಸಬಾರದು. ಸುರಕ್ಷಿತ ಸ್ಥಳದಲ್ಲಿ ಪಟಾಕಿ ಸಿಡಿಸಬೇಕು ಎಂದರು.
    ಜನಸಂದಣಿ ನಿರ್ವಹಣೆ ಸಂಬಂಧಿಸಿದಂತೆ ಪ್ರಮಾಣಿತ ಕಾರ್ಯಚರಣೆ ವಿಧಾನ(ಎಸ್‍ಒಪಿ)ವನ್ನು ಪಾಲಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಸೂಚಿಸಿದರು.
    ಚೆಕ್ ಪೋಸ್ಟ್‍ಗಳ ನಿರ್ವಹಣೆ, ವಾಹನ ನಿಲುಗಡೆಗೆ ವ್ಯವಸ್ಥೆ, ಸುಗಮ ಸಾರಿಗೆ ಸಂಚಾರಕ್ಕೆ ಅವಕಾಶ ಮಾಡುವುದು, ಧ್ವನಿವರ್ಧಕ ಸಂಬಂಧ ನಿಯಮಗಳನ್ನು ಪಾಲಿಸುವುದು. ಹೀಗೆ ಸರ್ಕಾರದ ನಿರ್ದೇಶನಗಳನ್ನು ಪಾಲಿಸುವುದು ಮತ್ತಿತರ ಕರ್ತವ್ಯವನ್ನು ನಿರ್ವಹಿಸಬೇಕು ಎಂದರು.
    ಮಡಿಕೇರಿ ದಸರಾದಲ್ಲಿ ಕೊಡಗು ಜಿಲ್ಲೆಯ ಕಲೆಗಳ ಪ್ರದರ್ಶನಕ್ಕೆ ಅವಕಾಶ ಆಗಬೇಕು. ಕಸವನ್ನ ಎಲ್ಲೆಂದರಲ್ಲಿ ಬಿಸಾಡಬಾರದು. ಸ್ವಚ್ಛತೆಗೆ ಒತ್ತು ನೀಡಬೇಕು ಎಂದರು.
    ರಕ್ಷಣೆ ಸಂಬಂಧ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗುವುದು. ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುವುದು. ಸಹಾಯವಾಣಿ ಕೇಂದ್ರ ಆರಂಭಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಹೇಳಿದರು.
    ರಾಜಾಸೀಟು ರಸ್ತೆಯಲ್ಲಿ ಸುಗಮ ಸಾರಿಗೆ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು. ಕುಟುಂಬದವರೊಂದಿಗೆ ಮಡಿಕೇರಿ ದಸರಾವನ್ನು ಎಲ್ಲರೂ ವೀಕ್ಷಿಸುವಂತಾಗಲು ಆ ನಿಟ್ಟಿನಲ್ಲಿ ಶಬ್ದ/ ಧ್ವನಿಯನ್ನು ಕಡಿಮೆ ಮಾಡಬೇಕು ಎಂದು ಕೋರಿದರು.
    ಈ ಸಂದರ್ಭದಲ್ಲಿ ಮಾತನಾಡಿದ ಉಪ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ದಶಮಂಟಪಗಳ ಸ್ಪರ್ಧೆ ಇರುವುದರಿಂದ ಪೈಪೋಟಿ ಹೆಚ್ಚಾಗಿದೆ. ಸ್ಪರ್ಧೆ ಇಲ್ಲದಿದ್ದರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.

    ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ ಅವರು ಮಾತನಾಡಿ ಅರಣ್ಯ ಇಲಾಖೆ ಅಧಿಕಾರಿಗಳ ಸಹಕಾರ ಹೆಚ್ಚಿನದ್ದಾಗಿದ್ದು, ಆ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಕೋರಿದರು.
    ದಸರಾ ಸಮಿತಿಯ ಧನಂಜಯ ಅವರು ಮಾತನಾಡಿ ಹಿಂದಿನಿಂದಲೂ ದಶಮಂಟಪಗಳ ಸಂಬಂಧ ಆರ್‍ಟಿಒ ಕಚೇರಿಯಿಂದ ಅನುಮತಿ ಪಡೆದಿರುವುದಿಲ್ಲ. ಈ ಹಿಂದಿನಂತೆ ದಸರಾವನ್ನು ಆಚರಿಸಲು ಅವಕಾಶ ಮಾಡಬೇಕು ಎಂದರು.
    ದಸರಾ ಸಮಿತಿಯ ರಾಜೇಶ್ ಅವರು ಮಾತನಾಡಿ ಮಂಟಪಗಳಿಗೆ ಸಂಬಂಧ ನಿಯಮಗಳನ್ನು ಪಾಲಿಸಲಾಗುವುದು. ಆದರೆ ಒತ್ತಡ ಹೇರಬಾರದು. ಕಥಾ ಸಾರಾಂಶವನ್ನು ನೀಡಲು ಡಿ.ಜೆ. ಅತ್ಯಗತ್ಯ. ಆ ನಿಟ್ಟಿನಲ್ಲಿ ಎಲ್ಲರ ಸಹಕಾರ ಅತ್ಯಗತ್ಯ. ಹೆಚ್ಚು ನಿಬಂಧನೆಗಳನ್ನು ಹೇರಬಾರದು ಎಂದು ಕೋರಿದರು.
    ನಗರಸಭೆ ಉಪಾಧ್ಯಕ್ಷರಾದ ಮಹೇಶ್ ಜೈನಿ ಅವರು ಮಾತನಾಡಿ ಮಂಟಪಗಳ ವೀಕ್ಷಣೆಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಹಾಗಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಅವರ ಅನುಮತಿ ಬೇಡ. ಮಡಿಕೇರಿ ದಸರಾದ ವೈಭವ ಕಡಿಮೆ ಮಾಡುವುದು ಬೇಡ, ಹೆಚ್ಚಿನ ನಿಬಂಧನೆಗಳನ್ನು ಅಳವಡಿಸುವುದರಿಂದ ಮಡಿಕೇರಿ ದಸರಾ ವೈಭವಕ್ಕೆ ತೊಂದರೆಯಾಗಲಿದೆ ಎಂದರು.
    ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಜನರ ಸುರಕ್ಷತೆ ಅತೀ ಮುಖ್ಯವಾಗಿದ್ದು, ಎಲ್ಲರ ಸುರಕ್ಷತೆಗೆ ಒತ್ತು ನೀಡುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ತಾವುಗಳೇ ಸ್ವಯಂ ಪ್ರೇರಣೆಯಿಂದ ಸುರಕ್ಷತೆಗೆ ಗಮನಹರಿಸಬೇಕು. ಆ ನಿಟ್ಟಿನಲ್ಲಿ ಮಂಟಪಗಳನ್ನು ತಯಾರು ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.
    ಪತ್ರಕರ್ತರಾದ ಸವಿತಾ ರೈ ಅವರು ಮಾತನಾಡಿ 2024 ರ ದಸರಾ ಲೆಕ್ಕಪತ್ರವನ್ನು ಪ್ರಕಟಿಸಬೇಕು ಎಂದು ಮನವಿ ಮಾಡಿದರು.
    ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸರ್ಕಾರದಿಂದ ಬಿಡುಗಡೆಯಾಗಿರುವ ಹಣವನ್ನು ಖರ್ಚು ಮಾಡಲಾಗಿದೆ. ಆರ್‍ಟಿಜಿಎಸ್ ಮೂಲಕ ಅವರವರ ಖಾತೆಗೆ ಹಣ ಪಾವತಿಯಾಗಿದೆ. ಯಾವುದೇ ಗೋಲ್ಡ್ ಕಾರ್ಡ್ ಮಾಡಿಸಿಲ್ಲ. ಸಾರ್ವಜನಿಕರಿಂದ ವಂತಿಗೆ ಪಡೆದಿರುವುದಿಲ್ಲ ಎಂದರು. ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್, ಪೊಲೀಸ್ ಇಲಾಖೆ ಅಧಿಕಾರಿಗಳು, ದಸರಾ ಸಮಿತಿ ಪದಾಧಿಕಾರಿಗಳು ಇತರರು ಇದ್ದರು.

    Previous Articleವಕೀಲರ ಆಯೋಜೀತ ಕಾರ್ಯಕ್ರಮದಲ್ಲಿ ಶಾಸಕ ಪೊನ್ನಣ್ಣ
    Next Article ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ಸರ್ಕಾರದ 5 ಗ್ಯಾರಂಟಿಗಳನ್ನು ತಲುಪಿಸಿ

    Related Posts

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.