ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ/ಸರಬರಾಜು ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಛೇರಿ /ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ನಿಷೇಧಿತ ಮಾದಕ ವಸ್ತುಗಳ ಮಾರಾಟ/ಸರಬರಾಜು / ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ ಸೂರಜ್.ಪಿ.ಎ, ಡಿಎಸ್‌ಪಿ, ಮಡಿಕೇರಿ ಉಪವಿಭಾಗ, ಶ್ರೀ ರಾಜು.ಪಿ.ಕೆ, ಸಿಪಿಐ, ಮಡಿಕೇರಿ ನಗರ ವೃತ್ತ ಮತ್ತು ಶ್ರೀ ಮಂಜುನಾಥ.ಈ, ಪಿಎಸ್‌ಐ, ಸಿದ್ದಾಪುರ ಪೊಲೀಸ್ ಠಾಣೆ & ಸಿಬ್ಬಂದಿಗಳು ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ: 14-09-2025 ರಂದು ಬಾಡಗ ಬಾಣಂಗಾಲ ಗ್ರಾಮದ ಮಾರ್ಗೊಲ್ಲಿ ಟಾಟಾ ಕಾಫಿ ಎಸ್ಟೇಟ್ ಜಂಕ್ಷನ್ ಬಸ್ ನಿಲ್ದಾಣದ ಬಳಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ/ಸರಬರಾಜು ಮಾಡುವ ಕುರಿತು ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿ ಪಶ್ಚಿಮಬಂಗಾಳ ರಾಜ್ಯ ನಾದಿಯ ಜಿಲ್ಲೆ ಮೂಲದ ಸಿದ್ದಾಪುರದ ಮಾರ್ಗೊಲ್ಲಿ ಟಾಟಾ ಕಾಫಿ ಎಸ್ಟೇಟ್ ಲೈನ್‌ಮನೆ ನಿವಾಸಿಗಳಾದ ಅರ್ಚನಾ ಸರ್ದಾರ್, 30 ವರ್ಷ & ತಪಾನ್ ಸರ್ದಾರ್, 38 ವರ್ಷ ಎಂಬುವವರನ್ನು 01 ಕೆ.ಜಿ 166 ಗ್ರಾಂ ಗಾಂಜಾ ನಿಷೇಧಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.
ಸದರಿ ಪ್ರಕರಣಗಳ ಆರೋಪಿಯನ್ನು ಪತ್ತೆ ಮಾಡುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಶ್ರೀ ಕೆ.ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ಮತ್ತು ಶ್ರೀ ದಿನೇಶ್ ಕುಮಾರ್.ಬಿ.ಪಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ರವರು ಶ್ಲಾಘಿಸಿರುತ್ತಾರೆ.
ವಿಶೇಷ ಸೂಚನೆ: ಯುವಕ-ಯುವತಿಯರು ಮಾದಕ ವೈಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಹಾಗೂ ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ಮುಕ್ತ ಜಿಲ್ಲೆಯಾನ್ನಾಗಿಸಲು ಸಹಕಸುವ ನಿಟ್ಟಿನಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಬಳಸುವ ಹಾಗೂ ಸರಬರಾಜು/ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ತುತು ಸಹಾಯವಾಣಿ-112/ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಹಾಗೂ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತೇವೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಗುಪ್ತವಾಗಿಡಲಾಗುವುದು.

