ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರೊಂದಿಗೆ ಇಂದು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಜಿಲ್ಲಾ ಕಾಂಗ್ರೆಸ್ ಕಚೇರಿ ಭೇಟಿ ನೀಡಿದರು.
ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ನಾವೆಲ್ಲರೂ ಸಿದ್ದಾಂತವನ್ನು ಪಾಲಿಸಿಕೊಂಡು ಬಂದಲ್ಲಿ ಕಾಂಗ್ರೆಸ್ ಪಕ್ಷ ಕಟ್ಟುವುದು ಸುಲಭ ಎಂಬ ಕರೆಯನ್ನು ನೀಡಿದರು. ಸದಾ ತಳಮಟ್ಟದಲ್ಲಿ ಜನರನ್ನು ಸಂಪರ್ಕಿಸುತ್ತ ಕಾಂಗ್ರೆಸ್ ಪಕ್ಷದ ಗ್ಯಾರಂಟಿಯನ್ನು ಮನೆ ಮನೆಗೆ ತಲುಪಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕೆಂಬ ಸಲಹೆ ನೀಡಿದರು.
ಕೊಡಗು ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರಾದ ದಿನೇಶ್ ಶೆಟ್ಟಿ ಹಾಗೂ ಸಮಿತಿ ಸದಸ್ಯರುಗಳ ಉಸ್ತುವಾರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ಮಡಿಕೇರಿ ಶಾಸಕರಾದ ಡಾ. ಮಂತರ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಮುಂಚೂಣಿ ಘಟಕಗಳ ಅಧ್ಯಕ್ಷರುಗಳು, ಡಿಸಿಸಿ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version