
ಕುಂಜಿಲ ಕಕ್ಕಬೆಯ ಪ್ರಸಿದ್ಧ *ಪಾಡಿ ಶ್ರೀ ಇಗ್ಗುತಪ್ಪ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ* ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಾಚಮಂಡ ಪೂವಣ್ಣ (ರಾಜ) ಮತ್ತು ನಿರ್ದೇಶಕರುಗಳು, ಇಂದು ಮಾನ್ಯ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ *ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರನ್ನು*, ವಿರಾಜಪೇಟೆಯ ಶ್ರೀಯುತರ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಹೂಗುಚ್ಛ ನೀಡುವ ಮೂಲಕ ಧನ್ಯವಾದ ಅರ್ಪಿಸಿದರು.
ಇತಿಹಾಸ ಪ್ರಸಿದ್ಧ ಪಾಡಿ ಶ್ರೀ ಇಗ್ಗುತ್ತಪ್ಪ ದೇವಸ್ಥಾನದ ಆಡಳಿತ ಮಂಡಳಿಗೆ, ಮಾನ್ಯ ಶಾಸಕರು ಈ ಹಿಂದೆ ಇವರುಗಳ ಹೆಸರನ್ನು ಸೂಚಿಸಿದ್ದು, ರಾಜ್ಯ ಸರ್ಕಾರ ಅದನ್ನು ಅನುಮೋದಿಸಿ ಆದೇಶ ನೀಡಿತ್ತು. ಇಂದು ನೂತನ ಅಧ್ಯಕ್ಷರಾದ ಬಾಚಮಂಡ ಪೂವಣ್ಣ ರವರೊಂದಿಗೆ, ನಿರ್ದೇಶಕರುಗಳಾಗಿ ನೇಮಕಗೊಂಡಿರುವ ಪರದಂಡ ಟಿ. ಭೀಮಯ್ಯ (ವಿಟಲ), ಪರದಂಡ ಎಂ. ನರೇಂದ್ರ (ಲಾಲು), ಕೋಟೆರ ನೈಲ್ ಚಂಗಪ್ಪ, ಚೇನಂಡ ಡಿ. ಉಷಾ, ಕುಶ ಭಟ್, ಮಾದಂಡ ಜಗದೀಶ್ (ಜಗ್ಗ), ಪೊಂಚೇರಿ ಉಲ್ಲಾಸ್, ರಮೇಶ್ ಸಿಇಒ ರವಿಕುಮಾರ್, ಪಾರ್ಪತಿಕಾರ ಪರದಂಡ ಪ್ರಿನ್ಸ್ ತಮ್ಮಪ್ಪ ರವರೊಂದಿಗೆ, ಕೆಡಿಪಿ ಸದಸ್ಯರಾದ ಬಾಚಮಂಡ ಲವ ಚಿಣ್ಣಪ್ಪ ಹಾಗೂ ಕಕ್ಕಬೆ ಪಂಚಾಯತ್ ಸದಸ್ಯರಾದ ಸಂಪನ್ ಅಯ್ಯಪ್ಪ ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
- ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
- ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
- ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
- ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
- ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
- ಲಂಡನ್ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್
- ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ

