
ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ಕಾಂಗ್ರೆಸ್ ನಾಯಕರಾದ *ಶ್ರೀ ಚೆಪ್ಪುಡೀರ ಅರುಣ್ ಮಾಚಯ್ಯ ರವರಿಗೆ* ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.
ಶ್ರೀ ಅರುಣ್ ಮಾಚಯ್ಯನವರನ್ನು ಸನ್ಮಾನಿಸಿ, ಶುಭ ಕೋರಿದ ಮಾನ್ಯ ಶಾಸಕರು, ಸ್ವತಹ ಕ್ರೀಡಾಪಟು ಹಾಗೂ ಪ್ರಬುದ್ಧ ರಾಜಕಾರಣಿಯಾದ ಅರುಣ್ ಮಾಚೇನವರಿಗೆ ಈ ಹುದ್ದೆ ಒಲಿದಿದ್ದು ವಿಶೇಷವಾಗಿ ಕೊಡಗಿಗೆ ವರದಾನವಾಗಲಿದೆ.
ಇವರ ಅವಧಿಯಲ್ಲಿ ಕ್ರೀಡಾ ಪ್ರಾಧಿಕಾರ ವತಿಯಿಂದ ಕೊಡಗಿಗೆ ಮತ್ತಷ್ಟು ಅನುಕೂಲ ಆಗುವುದರೊಂದಿಗೆ ಇಲ್ಲಿನ ಕ್ರೀಡಾ ಪ್ರತಿಭೆಗಳಿಗೆ ಬಲಬಂದಂತಾಗಿದೆ. ಶ್ರೀಯುತರು ತಮ್ಮ ನೂತನ ಜವಾಬ್ದಾರಿಯಲ್ಲಿ ಯಶಸ್ಸು ಕಾಣಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಟಾಟು ಮೊಣ್ಣಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಬಾನಂಡ ಪೃಥ್ವಿ,ಜಿಮಿ ಅಣ್ಣಯ್ಯ, ಡಿಸಿಸಿ ಸದಸ್ಯರು, ಎಲ್ಲಾ ವಲಯ, ಬ್ಲಾಕ್ ಅಧ್ಯಕ್ಷರುಗಳು, ಪದಾಧಿಕಾರಿಗಳು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
- ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
- ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
- ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
- ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
- ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
- ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
- ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ


