
ವಿರಾಜಪೇಟೆಯ ಮುತ್ತಪ್ಪನ್ ಕಲಾಮಂಟಪದಲ್ಲಿ ಆಯೋಜನೆಗೊಂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾನ್ಯ ಶಾಸಕರು, ವಿಶಿಷ್ಟ ಹಾಗೂ ಸಮೃದ್ಧ ಸಂಸ್ಕೃತಿಯನ್ನು ಹೊಂದಿರುವ ಮಲಯಾಳಿ ಸಮಾಜದವರು ಓಣಂ ಹಬ್ಬದ ಮೂಲಕ ನಾಡಿಗೆ ಸುಖ ಶಾಂತಿಯ ಸಂದೇಶವನ್ನು ಸಾರುತ್ತಾರೆ. ಪೌರಾಣಿಕ ಬಲಿಚಕ್ರವರ್ತಿಯ ಆಗಮಗದ ಸಂಭ್ರಮಾಚರಣೆಯನ್ನು ಸಾಂಪ್ರದಾಯಿಕವಾಗಿ ಆಚರಿಸಲ್ಪಡುವ ಈ ಹಬ್ಬವು, ಪರಸ್ಪರ ಸಾಮರಸ್ಯದಿಂದ ಬದುಕುವ ಸಂದೇಶ ಸಾರುವುದರೊಂದಿಗೆ ಸಮಾಜಕ್ಕೆ ವಿಶಿಷ್ಟ ಪರಂಪರೆಯನ್ನು ಪರಿಚಯಿಸುತ್ತದೆ ಎಂದು ಬಣ್ಣಿಸಿದರು. ಮಲಯಾಳಿ ಸಮುದಾಯದವರ ಕೊಡುಗೆಯನ್ನು ಸ್ಮರಿಸಿದ ಮಾನ್ಯ ಶಾಸಕರು, ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ನಮ್ಮ ನಾಡಿಗೆ ಇವರ ಕೊಡುಗೆ ಅಪಾರ ಎಂದು ಬಣ್ಣಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ನಗರ ಕಾಂಗ್ರೆಸ್ ಅಧ್ಯಕ್ಷರು ಮದಂಡ ತಿಮ್ಮಯ್ಯ, ಪುರಸಭೆ ಅಧ್ಯಕ್ಷರು ದೇಚಮ್ಮ ಕಾಳಪ್ಪ, ಪುರಸಭೆ ಸದಸ್ಯರು ಶಬರಿಷ್, ದಿನೇಶ್, ಮತೀನ್, ಹಮೀದ್, ಜಲಿಲ್, ಶಿಬಾ ಪೃಥ್ವಿನಾಥ್, ಮುತ್ತಪ್ಪನ್ ಮಲಯಾಳಿ ಸಮಾಜದ ಅಧ್ಯಕ್ಷರು ಸುಮೇಶ್, ಪದಾಧಿಕಾರಿಗಳು, ಪಕ್ಷದ ಪ್ರಮುಖರು ಕುಂಡಚೀರ ಮಂಜು ದೇವಯ್ಯ, ಸಂತೋಷ್,ಮಂಜುನಾಥ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
- ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ ವಿರುದ್ಧ ಆಕ್ರೋಶ
- ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
- ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
- ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
- ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
- ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
- ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ


