ಬೆಂಗಳೂರಿನ ವಿಧಾನಸೌಧ ಸಭಾಂಗಣದಲ್ಲಿ ಇಂದು ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಿದರು.

ರಾಜ್ಯ ಸರಕಾರದ ಸಚಿವರುಗಳು ಶಾಸಕರುಗಳು ಭಾಗವಹಿಸಿದ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಉಪಸಿತರಿದ್ದರು.

ಬುಡಕಟ್ಟು ಜನಾಂಗದಿಂದ ಸಮಾಜದ ಮುನ್ನೆಲೆಗೆ ಬಂದು, ನಿರಾಶ್ರಿತರಿಗೆ ದಿಡ್ಡಳ್ಳಿಯಲ್ಲಿ ಪುನರ್ವಸತಿ ಕಲ್ಪಿಸಲು ಹೋರಾಟ ಮಾಡಿ ಯಶಸ್ಸು ಗಳಿಸಿದ, ಕೊಡಗಿನ ವಿರಾಜಪೇಟೆ ಕ್ಷೇತ್ರದ ಜೆ.ಕೆ ಮುತ್ತಮ್ಮರವರಿಗೆ ಪ್ರತಿಷ್ಠಿತ ವಾಲ್ಮೀಕಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಸಂಘಟನಾ ಕ್ಷೇತ್ರದಲ್ಲಿ ತಮ್ಮ ಅಮೋಘ ಕೊಡುಗೆಗಾಗಿ ರಾಜ್ಯ ಸರ್ಕಾರ ಇವರನ್ನು ಗುರುತಿಸಿ, ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಎ.ಎಸ್ ಪೊನ್ನಣ್ಣ ರವರು ಪ್ರಶಸ್ತಿ ವಿತರಿಸಿದರು. ಮುತ್ತಮ್ಮರವರಿಗೆ ಅರ್ಹವಾಗಿ ಈ ಪ್ರಶಸ್ತಿಯನ್ನು ನೀಡಲೇಬೇಕೆಂದು, ಮಾನ್ಯ ಶಾಸಕರು ರಾಜ್ಯ ಸರ್ಕಾರಕ್ಕೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಿ ಶಿಫಾರಸ್ಸು ಮಾಡಿರುವುದು ಗಮನಾರ್ಹ.

Exit mobile version