Close Menu
Kodagu News
    ಹೊಸ ಸುದ್ದಿ

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಎ.ಕೆ ಸುಬ್ಬಯ್ಯ-ಪೊನ್ನಮ್ಮ ಸುಬ್ಬಯ್ಯ ಸ್ಮರಣಾರ್ಥ ವಿದ್ಯಾರ್ಥಿ ವೇತನ ವಿತರಣೆ
    ಅಂತರರಾಷ್ಟ್ರೀಯ

    ಎ.ಕೆ ಸುಬ್ಬಯ್ಯ-ಪೊನ್ನಮ್ಮ ಸುಬ್ಬಯ್ಯ ಸ್ಮರಣಾರ್ಥ ವಿದ್ಯಾರ್ಥಿ ವೇತನ ವಿತರಣೆ

    ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ *ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ* ರವರು, ಕಳೆದ ಹಲವಾರು ವರ್ಷಗಳಿಂದ ಪ್ರತಿಭಾವಂತ ಬಡ ವಿದ್ಯಾರ್ಥಿನಿಯರಿಗೆ, *ಎ.ಕೆ ಸುಬ್ಬಯ್ಯ-ಪೊನ್ನಮ್ಮ ಸುಬ್ಬಯ್ಯ ದತ್ತಿ ನಿಧಿ ಹಾಗೂ ಚಾರಿಟೇಬಲ್ ಟ್ರಸ್ಟ್* ಮೂಲಕ ನೀಡುತ್ತಿರುವ ವಿದ್ಯಾರ್ಥಿ ವೇತನ ವಿತರಣೆಯು, ಇಂದು ಮಾನ್ಯ ಶಾಸಕರ ವಿರಾಜಪೇಟೆ ನಿವಾಸದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.
    ಈ ಸಾಲಿನ ವಿದ್ಯಾರ್ಥಿ ವೇತನ ಪಡೆಯಲು ನೂರಾರು ಅರ್ಜಿಗಳು ಬಂದಿದ್ದು, ಉನ್ನತ ಮಟ್ಟದ ಆಯ್ಕೆ ಸಮಿತಿಯಿಂದ ಪುರಸ್ಕೃತಗೊಂಡ ಅರ್ಹ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿನಿಯರು ಮುಂದಿನ 3 ವರ್ಷದ ವಿದ್ಯಾಭ್ಯಾಸಕ್ಕೆ ತಲ ₹ 10000 ದಂತೆ, ಪ್ರತಿ ವರ್ಷ ಆರ್ಥಿಕ ನೆರವು ಪಡೆಯಲಿದ್ದಾರೆ ಎಂದು ಮಾನ್ಯ ಶಾಸಕರು ತಿಳಿಸಿದರು. ವೇದಿಕೆಯಲ್ಲಿ ಅರಮೇರಿ ಮಠದ ಶ್ರೀ ಶ್ರೀ ಶ್ರೀ ಶಾಂತ ಮಲ್ಲ ಸ್ವಾಮೀಜಿಯವರು, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ಮಾಜಿ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ವೀಣಾ ಅಚ್ಚಯ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಶಕ್ತಿ ದಿನ ಪತ್ರಿಕೆಯ ಸಂಪಾದಕರಾದ ಚಿದ್ವಿಲಾಸ್, ಮಾಚಿಮಾಂಡ ಗಂಗಾ ಸುಬ್ರಮಣಿ, ಮಾನ್ಯ ಶಾಸಕರ ಧರ್ಮ ಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ, ಮಾನ್ಯ ಶಾಸಕರ ಸಹೋದರರಾದ ಶ್ರೀ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಆರತಿ ಸೋಮಯ್ಯ, ಉಪಸ್ಥಿತರಿದ್ದರು.
    ಈ ಸಂಸ್ಥೆಯ ಆಡಳಿತ ಟ್ರಸ್ಟಿ ಹಾಗು ಮಾನ್ಯ ಶಾಸಕರ ಹಿರಿಯ ಸಹೋದರರಾದ ಶ್ರೀ ನರೇನ್ ಕಾರ್ಯಪ್ಪ ರವರು ಎಲ್ಲಾ ಗಣ್ಯರನ್ನು ಹಾಗೂ ವಿಶೇಷವಾಗಿ ಫಲಾನುಭವಿ ವಿದ್ಯಾರ್ಥಿನಿಯರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಇಲ್ಲಿಯ ತನಕ ದತ್ತಿನಿಧಿ ಸಂಸ್ಥೆ ವತಿಯಿಂದ ಸುಮಾರು 150 ಕ್ಕೂ ಅಧಿಕ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ನೀಡಿ, ಅವರುಗಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಿರುವುದಾಗಿ ತಿಳಿಸಿದರು.
    ಈ ಕಾರ್ಯಕ್ರಮದ ದಿಕ್ಸೂಚಿ ಭಾಷಣ ಮಾಡಿದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಎ.ಎಸ್ ಪೊನ್ನಣ್ಣ ರವರು, ಕೊಡಗಿನ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಆರ್ಥಿಕ ಮುಗ್ಗಟ್ಟಿದ್ದಾಗಿ ವಿದ್ಯಾಭ್ಯಾಸಕ್ಕೆ ತೊಡಕಾಗಬಾರದು ಎಂಬ ಕಾರರದಿಂದ, ತಂದೆ ತಾಯಿಯವರ ಹೆಸರಿನಲ್ಲಿ ಈ ಶೈಕ್ಷಣಿಕ ಕಳಕಳಿಯ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದಾಗಿ ತಿಳಿಸಿದರು. ಈಗಾಗಲೇ ನೂರಾರು ವಿದ್ಯಾರ್ಥಿಗಳು ಇದರ ಫಲಾನುಭವಿಗಳಾಗಿದ್ದು, ಈ ಕಾರ್ಯಕ್ರಮವು ನಿರಂತರವಾಗಿ ನಡೆಯಲಿದೆ ಎಂದು ತಿಳಿಸಿದರು. ಫಲಾನುಭವಿ ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದ ಮಾನ್ಯ ಶಾಸಕರು, ಓದಿನಲ್ಲಿ ಅತ್ಯುನ್ನತ ದರ್ಜೆ ಪಡೆದು ಸಮಾಜದಲ್ಲಿ ಒಳ್ಳೆ ಸ್ಥಾನ ಪಡೆದ ಬಳಿಕ ಇಂತಹ ಕಾರ್ಯಗಳನ್ನು ನೀವುಗಳು ಸಹ ಮುಂದುವರಿಸಿ ಎಲ್ಲರಿಗೂ ಮಾದರಿಯಾಗಬೇಕೆಂದು ತಿಳಿಸಿದರು. ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರು ಸದಾ ಓದಿನಲ್ಲಿ ಮುಂದಿರುತ್ತಾರೆ. ಆದರೆ ಅನಿವಾರ್ಯ ಕಾರಣಗಳಿಂದಾಗಿ ಅವರ ವಿದ್ಯಾಭ್ಯಾಸಕ್ಕೆ ಯಾವುದೇ ಕಾರಣಕ್ಕೂ ತೊಡಕಾಗಬಾರದು ಹಾಗೂ ಅವರ ಸಾಮರ್ಥ್ಯ ಮಂಕಾಗಬಾರದು ಎಂಬ ಈ ಮಹಾದುದ್ದೇಶ ಸಂಪನ್ನ ಆಗಬೇಕೆಂದರೆ ಎಲ್ಲಾ ವಿದ್ಯಾರ್ಥಿನಿಯರು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಆಗಬೇಕೆಂದು ತಮ್ಮ ಇಂಗಿತ ವ್ಯಕ್ತಪಡಿಸಿದರು.
    ಶಕ್ತಿ ಪತ್ರಿಕೆಯ ಸಂಪಾದಕರಾದ ಚಿದ್ವಿಲಾಸ್ ಮಾತನಾಡಿ, ರಾಜಕೀಯ ರಹಿತವಾಗಿ ಮಾನ್ಯ ಶಾಸಕರು ಮಾಡುತ್ತಿರುವ ಹಲವಾರು ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ಮೆಚ್ಚಿ ಅವರೊಂದಿಗೆ ತಾನು ಸದಾ ಇರುವುದಾಗಿ ಬಣ್ಣಿಸಿದರು. ಫಲಾನುಭವಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಕಿವಿಮಾತು ಹೇಳಿದ ಚಿದ್ವಿಲಾಸ್ ರವರು, ಇದರ ಪ್ರಯೋಜನ ಪಡೆದ ಪ್ರತಿಯೊಬ್ಬ ವಿದ್ಯಾರ್ಥಿನಿಯರು ತಮ್ಮ ಜೀವನದಲ್ಲಿ ಮುಂದೆ ಬರುವುದರೊಂದಿಗೆ ಈ ಸಹಾಯ ಮಾಡಿದ ಎಲ್ಲರನ್ನೂ ಕೃತಜ್ಞತಾಪೂರಕವಾಗಿ ನೆನಸಿಕೊಳ್ಳಬೇಕು ಹಾಗೂ ಧನಾತ್ಮಕ ಭಾವನೆಗಳನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು.
    ಸ್ವಾಮೀಜಿಯವರು ಮಾತನಾಡಿ ತಾವು ಮಾನ್ಯ ಪೊನ್ನಣ್ಣ ರವರ ಕಾರ್ಯವೈಖರಿಯನ್ನು ಹಲವಾರು ವರ್ಷಗಳಿಂದ ಗಮನಿಸುತ್ತಿದ್ದು, ಅವರ ನಿಸ್ವಾರ್ಥ ಸೇವೆ ಹಾಗೂ ಸಾಮಾಜಿಕ-ಶೈಕ್ಷಣಿಕ ಕಳಕಳಿಯು ದೇಶಕ್ಕೇ ಮಾದರಿ ಎಂದು ಬಣ್ಣಿಸಿದರಲ್ಲದೆ, ಅವರಿಗೆ ಮತ್ತಷ್ಟು ಉನ್ನತ ಹುದ್ದೆ ದೊರಕಲಿ ಎಂದು ಆಶೀರ್ವದಿಸಿದರು.
    ಕಾರ್ಯಕ್ರಮದ ಬಗ್ಗೆ ಧರ್ಮಜ ಉತ್ತಪ್ಪ, ವೀಣಾ ಅಚ್ಚಯ್ಯ, ಅರುಣ್ ಮಾಚಯ್ಯ ಮತ್ತಿತರ ಗಣ್ಯರು ಮೆಚ್ಚುಗೆಯ ಮಾತುಗಳನ್ನಾಡಿದರು.
    ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಮಕ್ಕಳ ಪೋಷಕರು, ವಿರಾಜಪೇಟೆ ಹಾಗೂ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಪಕ್ಷದ ವಿವಿಧ ಘಟಕಗಳ ಪ್ರಮುಖರು ಹಾಗೂ ಪದಾಧಿಕಾರಿಗಳು, ಸರ್ಕಾರಿ ನಾಮನಿರ್ದೇಶತ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
    ಮಂಜುನಾಥ್ ಮಾಸ್ಟರ್ ರವರು ಕಾರ್ಯಕ್ರಮ ನಿರೂಪಿಸಿದರು.

    Previous Articleರಸ್ತೆ ಅಭಿವೃದ್ಧಿಗೆ ಧನ್ಯವಾದ ಅರ್ಪಿಸಿದ ಗ್ರಾಮಸ್ಥರು
    Next Article ವಾಣಿಜ್ಯೋದ್ಯಮಿಗಳ ಸಭೆ

    Related Posts

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.