ವಿರಾಜಪೇಟೆಯ ಲಾರಿ ಮಾಲಿಕರು ಹಾಗೂ ಚಾಲಕರ ಸಂಘದವರು ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರನ್ನು* ಭೇಟಿಯಾಗಿ ತಮ್ಮ ಮನವಿಯನ್ನು ಸಲ್ಲಿಸಿದರು.
ಶಾಸಕರ ಗೃಹ ಕಚೇರಿಗೆ ತೆರಳಿದ ಸಂಘದ ಪದಾಧಿಕಾರಿಗಳು ವಿರಾಜಪೇಟೆ ಭಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಸಾಮಗ್ರಿ ಹಾಗೂ ಇತರ ವಸ್ತುಗಳನ್ನು ಸರಬರಾಜು ಮಾಡುತ್ತಿರುವ ಬಗ್ಗೆ ಮಾಹಿತಿಯನ್ನು ಒದಗಿಸಿದರು. ಇದರಿಂದಾಗಿ ಸರ್ಕಾರಕ್ಕೆ ಮಾತ್ರವಲ್ಲದೆ ಅಧಿಕೃತ ಲಾರಿ ವ್ಯವಹಾರಕ್ಕೂ ತೊಂದರೆಯಾಗುತ್ತದೆ ಎಂದು ಶಾಸಕರ ಗಮನಕ್ಕೆ ತಂದರು.
ಇವರ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಮಾನ್ಯ ಶಾಸಕರು ಕೂಡಲೇ ಸಂಭಂದಿಸಿದ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ, ಇದರ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಇ ರೀತಿಯ ಅನಧಿಕೃತ ಕೇಂದ್ರ ಗಳನ್ನು ಮುಚ್ಚಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಸದಸ್ಯರು ಮತೀನ್, ರಾಫಿ ಹಾಗೂ ಲಾರಿ ಮಾಲೀಕರು ಹಾಗೂ ಚಾಲಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳಾದ ಸುಮಂತ್, ವಲ್ಸನ್,ಸಲೀಂ, ರಿಜ್ವಾನ್,ಪಳನಿ,ರಾಜಿಕ್,ರೆಹಮಾನ್, ವಾಜಿದ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

