Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಸಚಿವರಿಂದ ಭೂಮಿ
    ಜಿಲ್ಲೆ

    ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಸಚಿವರಿಂದ ಭೂಮಿ

    ಕುಶಾಲನಗರದಲ್ಲಿ 8.60 ಕೋಟಿ ರೂ. ವೆಚ್ಚದಲ್ಲಿ ಪ್ರಜಾಸೌಧ ಪೂಜೆ

    ಮಡಿಕೇರಿ :-ಕುಶಾಲನಗರದ ಪಾಲಿಟೆಕ್ನಿಕ್ ಕಾಲೇಜು ಬಳಿ 8.60 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುವ ‘ಪ್ರಜಾಸೌಧ’ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು.
    ಬಳಿಕ ಮಾತನಾಡಿದ ಸಚಿವರು ರಾಜ್ಯಾದ್ಯಾದಂತ ದರಖಾಸ್ ಪೋಡಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸರ್ಕಾರದಿಂದ ಮಂಜೂರಾದ ಜಮೀನನ್ನು ಅನುಬಂಧ-1 ರಡಿ ಸರ್ವೆ ಮಾಡಲಾಗುತ್ತಿದೆ. ಮನೆ ಮನೆಗೆ ತೆರಳಿ ಮಾಹಿತಿ ಪಡೆದು ಸರಿಪಡಿಸುವ ಕಾರ್ಯ ನಡೆಯುತ್ತಿದೆ ಎಂದು ಸಚಿವರು ಹೇಳಿದರು.
    ಕೊಡಗು ಜಿಲ್ಲೆಯಲ್ಲಿ 2344 ದರಖಾಸ್ ಪೋಡಿ ಅಭಿಯಾನಡಿ ಪ್ರಕರಣಗಳನ್ನು ತೆಗೆದುಕೊಳ್ಳಲಾಗಿದ್ದು, ಇದರಲ್ಲಿ 1500 ಕ್ಕೂ ಹೆಚ್ಚು ಕಡತ ವಿಲೇವಾರಿ ಮಾಡಲಾಗಿದೆ ಎಂದು ಸಚಿವರು ಹೇಳಿದರು.
    ರಾಜ್ಯದಲ್ಲಿ 42 ಲಕ್ಷ ಜಮೀನು ಮೃತರ ಹೆಸರಿನಲ್ಲಿದ್ದು, ಇದನ್ನು ಸಹ ಪಟ್ಟಿ ಮಾಡಲಾಗಿದೆ. ಈ ಪೌತಿ ಖಾತೆ ಆಂದೋಲನಡಿ ರೈತರ ಮನೆ ಬಾಗಿಲಿಗೆ ಹೋಗಿÀ್ಕುಟುಂಬದವರ ಹೆಸರಿಗೆ ಖಾತೆ ಮಾಡುವ ಕಾರ್ಯ ಕೈಗೊಳ್ಳಲಾಗಿದೆ ಎಂದರು.
    ಭೂ ಸುರಕ್ಷತೆ ಯೋಜನೆಯಡಿ ಕಡತಗಳು ಕಾಣೆಯಾಗದಂತೆ ಕ್ರಮವಹಿಸಲಾಗಿದೆ. ಮೂಲ ಕಡತಗಳನ್ನು ಸ್ಕ್ಯಾನಿಂಗ್ ಮಾಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು.
    ಭೂಮಿಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ ಕಡತ ಕಾಣೆಯಾಗುವುದನ್ನು ತಪ್ಪಿಸಲು ಕ್ರಮವಹಿಸಲಾಗಿದೆ ಎಂದು ಸಚಿವರು ಹೇಳಿದರು.
    ರಾಜ್ಯದಲ್ಲಿ ಭೂಮಿಗೆ ಸಂಬಂಧಪಟ್ಟಂತೆ 50 ಕೋಟಿ ಪುಟಗಳನ್ನು ಸ್ಕ್ಯಾನಿಂಗ್ ಮಾಡಲಾಗಿದೆ. ಇನ್ನೂ 50 ಕೋಟಿ ಪುಟ ಸ್ಕ್ಯಾನಿಂಗ್ ಮಾಡಲು ಬಾಕಿ ಇದೆ. ಎಲ್ಲಾ ದಾಖಲೆಗಳು ಆನ್‍ಲೈನ್ ಮೂಲಕ ಮೊಬೈಲ್‍ನಲ್ಲಿಯೇ ದೊರೆಯಲಿದೆ ಎಂದರು.
    ರಾಜ್ಯದಲ್ಲಿರುವ ಗ್ರಾಮ ಲೆಕ್ಕಿಗರು ಹಾಗೂ ಕಂದಾಯ ನಿರೀಕ್ಷಕರಿಗೆ ಲ್ಯಾಪ್‍ಟಾಪ್ ವಿತರಿಸುವ ಕಾರ್ಯ ನಡೆದಿದ್ದು, ಕಾಗದ ರಹಿತವಾಗಿ ಇ-ಕಚೇರಿ ಮೂಲಕ ಸೌಲಭ್ಯಗಳನ್ನು ಒದಗಿಸಲು ಮುಂದಾಗಲಾಗಿದೆ ಎಂದು ಸಚಿವರು ಹೇಳಿದರು.
    ಇಲಾಖೆಯಲ್ಲಿ ಸಾರ್ವಜನಿಕರನ್ನು ಶತಾಯಿಸಬಾರದು. ಉತ್ತರಾಧಾಯಿತ್ವ ಹೊಂದಿರಬೇಕು. ಆ ನಿಟ್ಟಿನಲ್ಲಿ ಕಂದಾಯ ಇಲಾಖೆಯನ್ನು ಅಪ್‍ಡೇಟ್ ಮಾಡಲಾಗುತ್ತಿದೆ ಎಂದರು.
    ತಹಶೀಲ್ದಾರರು ಮತ್ತು ಉಪ ವಿಭಾಗಾಧಿಕಾರಿ ಕೋರ್ಟ್‍ಗಳಲ್ಲಿ ವರ್ಷಾನುಗಟ್ಟಲೆ ಕಡತ ಬಾಕಿ ಇರುವುದನ್ನು ಗಮನಿಸಿ ಕಡತ ವಿಲೇವಾರಿಗೆ ಚುರುಕುಗೊಳಿಸಲಾಗಿದೆ ಎಂದರು.
    ತಹಶೀಲ್ದಾರರ ನ್ಯಾಯಾಲಯದಲ್ಲಿ ಇದ್ದ 10,774 ಪ್ರಕರಣಗಳಲ್ಲಿ 510 ಪ್ರಕರಣಗಳು ಮಾತ್ರ ಬಾಕಿ ಇದೆ ಎಂದು ಸಚಿವರು ತಿಳಿಸಿದರು.
    ಹಾಗೆಯೇ ಉಪ ವಿಭಾಗಾಧಿಕಾರಿ ಕೋರ್ಟ್‍ನಲ್ಲಿ ನ್ಯಾಯಾಲಯದಲ್ಲಿ 6 ತಿಂಗಳಿಂದ ಕಡತಗಳನ್ನು ವಿಲೇವಾರಿ ಮಾಡಬೇಕಿದ್ದು, ಹಿಂದ 59,335 ಅರ್ಜಿಗಳು ವಿಲೇವಾರಿಗೆ ಬಾಕಿ ಇತ್ತು. ಈಗ 12,249 ಅರ್ಜಿಗಳು ಮಾತ್ರ ವಿಲೇವಾರಿಗೆ ಬಾಕಿ ಇದೆ ಎಂದು ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.
    ಕಳೆದ 5 ವರ್ಷದಲ್ಲಿ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ 32,787 ಪ್ರಕರಣಗಳು ಇದ್ದವು, ಈಗ 3,974 ಅರ್ಜಿಗಳು ಮಾತ್ರ ಬಾಕಿ ಇದೆ. ಮೂರು ತಿಂಗಳಲ್ಲಿ ವಿಲೇವಾರಿ ಮಾಡಬೇಕಿದೆ ಎಂದು ಸಚಿವರು ಹೇಳಿದರು.
    ಭೂಕುಸಿತ ತಡೆಯುವ ಸಂಬಂಧ ಕಾಮಕಾರಿ ಕೈಗೊಳ್ಳಲು 50 ಕೋಟಿ ರೂ. ಬಿಡುಗಡೆಯಾಗಿದ್ದು, ಇನ್ನೂ 10 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದರು.
    ಜಿಲ್ಲೆಯ 5 ತಾಲ್ಲೂಕಿಗೆ ತಹಶೀಲ್ದಾರ್ ನೇಮಕ ಮಾಡಲಾಗಿದೆ. ಗ್ರಾಮ ಆಡಳಿತ, ಸರ್ವೇ ಅವರನ್ನು ನೇಮಿಸಲಾಗಿದೆ. ಕೊಡಗು ಜಿಲ್ಲೆಗೆ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ ಎಂದರು.
    ಪ್ರಜಾಸೌಧ ತಾಲ್ಲೂಕು ಆಡಳಿತ ಭವನದಲ್ಲಿ ತಹಶೀಲ್ದಾರ್ ಕಚೇರಿ, ಭೂ ದಾಖಲೆಗಳ ಕಚೇರಿ, ಉಪ ನೋಂದಾಣಾಧಿಕಾರಿ ಕಚೇರಿ, ಖಜಾನೆ, ಹೀಗೆ ಹಲವು ಇಲಾಖೆಗಳು ಇರಲಿವೆ ಎಂದು ಹೇಳಿದರು.
    ಕೊಡಗು ಜಿಲ್ಲೆಯ ಇಬ್ಬರು ಶಾಸಕದ್ವಯರು ಕ್ರೀಯಾಶೀಲವಾಗಿ ಜಿಲ್ಲೆಗೆ ಆಗಬೇಕಿರುವ ಕೆಲಸ ಸಂಬಂಧ ಗಮನ ಸೆಳೆದು ಕೆಲಸ ಮಾಡಿಸುತ್ತಾರೆ ಎಂದು ಕೃಷ್ಣಬೈರೇಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
    ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ತಾಲ್ಲೂಕು ಆಡಳಿತ ಭವನ ಪ್ರಜಾಸೌಧ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ಹಾಗೆಯೇ ಕೆಎಸ್‍ಆರ್‍ಟಿಸಿ ಡಿಪೋ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
    ಕುಶಾಲನಗರದಲ್ಲಿ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ 46 ಕೋಟಿ ರೂ. ಬಿಡುಗಡೆಯಾಗಿದ್ದು, ಕಾಮಗಾರಿಗೆ ಚಾಲನೆ ನೀಡಬೇಕಿದೆ ಎಂದು ತಿಳಿಸಿದರು.
    ಪ್ರಜಾಸೌಧ ಆಡಳಿತ ಭವನ ನಿರ್ಮಾಣಕ್ಕೆ ಉನ್ನತ ಶಿಕ್ಷಣ ಸಚಿವರಾದ ಸುಧಾಕರ ಅವರು ಉಚಿತವಾಗಿ ಭೂಮಿ ನೀಡಿರುವುದಕ್ಕೆ ಇದೇ ಸಂದರ್ಭದಲ್ಲಿ ಶಾಸಕರು ಕೃತಜ್ಞತೆ ಸಲ್ಲಿಸಿದರು.
    ಅಧಿಕಾರಿಗಳು ಸಾರ್ವಜನಿಕರ ಸೇವೆಯನ್ನು ಬದ್ಧತೆಯಿಂದ ಮಾಡಬೇಕು. ಕಂದಾಯ ಇಲಾಖೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವುಗಳನ್ನು ಪರಿಹರಿಸಬೇಕು ಎಂದು ಸಲಹೆ ಮಾಡಿದರು.
    ಸಿ ಮತ್ತು ಡಿ ಭೂಮಿ ಪರಿಹಾರ, ಭೂಮಿ ದುರಸ್ತಿ ಕಾರ್ಯ, ಪೋಡಿ ಮುಕ್ತ ಅಭಿಯಾನ ಪ್ರಗತಿ, ಭೂಮಿ ಸಂಬಂಧ ಡಿಜಿಟಲೈಜೇಸನ್, ತಹಶೀಲ್ದಾರ್ ಮತ್ತು ವಿಎ ಹಂತದಲ್ಲಿ ಬೇಗ ಕೆಲಸಗಳು ಆಗಬೇಕು ಎಂದು ಹೇಳಿದರು.
    ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಇರಬಾರದು. ಸಾರ್ವಜನಿಕರಿಗೆ ಸ್ಪಂದಿಸಬೇಕು. ಪ್ರಜಾಸೌಧ ಆಡಳಿತ ಭವನ ಕಾಮಗಾರಿಯನ್ನು ಒಂದು ವರ್ಷದಲ್ಲಿ ಪೂರ್ಣಗೊಳಿಸುವಂತೆ ಗೃಹ ಮಂಡಳಿಗೆ ಸೂಚಿಸಿದರು.
    ಕುಶಾಲನಗರ ತಾ.ಪಂ.ಕಟ್ಟಡ ನಿರ್ಮಾಣಕ್ಕೂ ತಯಾರು ಮಾಡಿಕೊಳ್ಳುವಂತೆ ಇದೇ ಸಂದರ್ಭದಲ್ಲಿ ಶಾಸಕರು ಸಲಹೆ ನೀಡಿದರು.
    ವಕೀಲರ ಸಂಘದ ಅಧ್ಯಕ್ಷರಾದ ನಾಗೇಂದ್ರ ಬಾಬು ಅವರು ಮಾತನಾಡಿ ಕುಶಾಲನಗರದಲ್ಲಿ ಉಪ ವಿಭಾಗ ಕಚೇರಿ ತೆರೆಯಬೇಕು. ತಾಲ್ಲೂಕು ಕ್ರೀಡಾಂಗಣ ನಿರ್ಮಾಣ ಆಗಬೇಕು. ಉಪ ನೋಂದಾಣಾಧಿಕಾರಿ ಕಚೇರಿ ಆರಂಭಿಸಬೇಕು ಎಂದು ಅವರು ಸಲಹೆ ಮಾಡಿದರು.
    ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷರಾದ ವಿ.ಪಿ.ಶಶಿಧರ ಅವರು ಮಾತನಾಡಿ ಕಳೆದ ಎರಡು ದಶಕಗಳ ಹೋರಾಟದ ಪ್ರಯತ್ನದ ಫಲವಾಗಿ ಕುಶಾಲನಗರ ತಾಲ್ಲೂಕು ಕೇಂದ್ರವಾಗಿದ್ದು, ಪ್ರಜಾ ಸೌಧ ನಿರ್ಮಾಣವಾಗುತ್ತಿದೆ ಎಂದು ಅವರು ಹೇಳಿದರು.
    ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಪ್ರಮೋದ್ ಮುತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ., ಜಿ.ಪಂ. ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ, ಭೂದಾಖಲೆಗಳ ಉಪ ನಿರ್ದೇಶಕರಾದ ನಿರಂಜನ ಇತರರು ಇದ್ದರು. ಉ.ರಾ.ನಾಗೇಶ್ ನಿರೂಪಿಸಿದರು. ರವಿ ಪ್ರಾರ್ಥಿಸಿದರು.

    Previous Articleಕರಾಟೆಯಲ್ಲಿ ಸುಂಟಿಕೊಪ್ಪದ ವಿದ್ಯಾರ್ಥಿನಿ ಜೀವಿಕ ಸಾಧನೆ
    Next Article ಲೋಕಾಯುಕ್ತ ಅಧಿಕಾರಿಗಳಿಂದ ದೂರು ಅರ್ಜಿ ಸ್ವೀಕಾರ

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.